ಡಿ.ಎ ಜೋಸೆಫ್ ರಿಂದ ವ್ಯಕ್ತಿತ್ವ ವಿಕಸನ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ

ಉಡುಪಿ: ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಶುಭಾಶೀರ್ವಾದದೊಂದಿಗೆ ಶ್ರೀ ಕೃಷ್ಣ ಸೇವಾ ಬಳಗದ ವತಿಯಿಂದ ಶ್ರೀ ಪೂರ್ಣಪ್ರಜ್ಞಾ ಆಡಿಟೋರಿಯಂನಲ್ಲಿ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪಾಂಡಿಚೇರಿಯ ಋಷಿ ಧರ್ಮ ಫೌಂಡೇಶನಿನ ಅಧ್ಯಕ್ಷರಾದ ಪ್ರವಚನ ಭಾಸ್ಕರ ಶ್ರೀ ಡಿ.ಎ ಜೋಸೆಫ್ ಇವರಿಂದ ವ್ಯಕ್ತಿತ್ವ ವಿಕಸನದ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.
ಶ್ರೀಕೃಷ್ಣ ಮಠದಲ್ಲಿ ಮಾಳವಿಕಾ ಪರಿಣಯ ಯಕ್ಷಗಾನ ಪ್ರದರ್ಶನ

ಉಡುಪಿ: ಶ್ರೀ ಕೃಷ್ಣ ಮಠ ಉಡುಪಿ ಹಾಗೂ ಕಲಾ ಸಂಗಮ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಹಾಗೂ ಶ್ರೀ ಯಕ್ಷಗಾನ ಕಲಾ ಮೇಳ ಶಿರಸಿ ಇದರ ಜಂಟಿ ಆಶ್ರಯದಲ್ಲಿ ಮಾಳವಿಕಾ ಪರಿಣಯ ಯಕ್ಷಗಾನ ಪ್ರದರ್ಶನ ಶನಿವಾರ ರಾತ್ರಿ ರಾಜಾಂಗಣದಲ್ಲಿ ನಡೆಯಿತು.
ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಡುಪಿ: ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಠಾರದಲ್ಲಿ ಸಂಘದ ಅಧ್ಯಕ್ಷ ಕೆ.ನಾರಾಯಣ ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಘವು ಮಾರ್ಚ್ ನಲ್ಲಿ “ಎ” ಗ್ರೇಡ್ ಅಡಿಟ್ ವರ್ಗೀಕರಣವನ್ನು ಪಡೆದಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟು 51.30 ಕೋಟಿ ರೂ. ಸಾಲವನ್ನು ವಿತರಿಸಿ, 60.00 ಕೋಟಿ ರೂ. ಸಾಲದ ಹೊರಬಾಕಿಯನ್ನು ಹೊಂದಿದೆ. 91.419 ಲಕ್ಷ ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ […]
ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಕಾಪು: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 105 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ, ಕಾಪು ಲಕ್ಷ್ಮೀ ಜನಾರ್ಧನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರಗಳನ್ನು ವಿತರಿಸಲಾಯಿತು. ಪುಷ್ಪಾನಂದ ಫೌಂಡೇಶನ್ ಪ್ರವರ್ತಕ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು […]