ವಿದೇಶದಲ್ಲಿ ಚಿನ್ನ ಗೆದ್ದ 94 ಹರೆಯದ ಅಜ್ಜಿಗೆ ಸ್ವದೇಶದಲ್ಲಿ ಭರ್ಜರಿ ಸ್ವಾಗತ

ನವದೆಹಲಿ: 94 ವರ್ಷದ ಭಗವಾನಿ ದೇವಿ ದಾಗರ್ ಫಿನ್‌ಲ್ಯಾಂಡ್‌ನಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರಲ್ಲಿ ಭಾರತಕ್ಕಾಗಿ ಒಂದು ಚಿನ್ನ ಮತ್ತು 2 ಕಂಚು ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿರುವ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ಮರಳಿದ ಅಜ್ಜಿಗೆ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ದೊರೆತಿದೆ. “ನನಗೆ ತುಂಬಾ ಸಂತೋಷವಾಗಿದೆ…ಬೇರೆ ದೇಶದಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ನನ್ನ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದೆ” ಎಂದು ಚಿನ್ನದ ಚಿಗರೆ ಅಜ್ಜಿ ಭಗವಾನಿ ದೇವಿ ಡಾಗರ್ […]

ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಮೂರು ನೂತನ ಮಾದರಿಯ ಪದವಿ ಮತ್ತು ಸ್ನಾತಕ್ಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿ ಪ್ರಾರಂಭವಾಗಿದೆ ಮತ್ತು ಈ ತಿಂಗಳ ಅಂತ್ಯದವರೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೂರು ನೂತನ ಕಾರ್ಯಕ್ರಮಗಳಾದ – ಎಂಎ (ಇಕಾಸೊಫಿಕಲ್ ಎಸ್ಥೆಟಿಕ್ಸ್) , ಎಂಎ (ಆರ್ಟ್ ಅಂಡ್ ಪೀಸ್ ಸ್ಟಡೀಸ್), ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) – ಅಪಾರವಾದ ಸಮಕಾಲೀನ ಪ್ರಾಮುಖ್ಯತೆಯೊಂದಿಗೆ, ವಿವಿಧ ಕಲಿಕಾ ವಿಷಯಗಳ ಮೇಲೆ ಕೇಂದ್ರಿತವಾಗಿದೆ. ಎರಡು ಸ್ನಾತಕೋತ್ತರ […]

ಜೆಇಇ ಮೈನ್ಸ್ ಪರೀಕ್ಷೆ: ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ 6 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಕೆ

ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ಜರುಗಿದ 2022 ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ದಾಖಲಿಸಿದ್ದಾರೆ. ಕೀರ್ತನ್‌ಕಿಣಿ 95.75 ಪರ್ಸೆಂಟೈಲ್, ಮೊಗವೀರ್ ಸಾಹಿಲ್ ಶೇಖರ್ 93.63 ಪರ್ಸೆಂಟೈಲ್, ಅಮೋಘ ಕಾರಂತ್ 92.7 ಪರ್ಸೆಂಟೈಲ್ , ನಂದನ್ ಪೈ 91.26 ಪರ್ಸೆಂಟೈಲ್,ಪ್ರಣವ್.ಎಸ್.ಜೋಗಿ 91.12 ಪರ್ಸೆಂಟೈಲ್, ಕಾರ್ತಿಕ ಐತಾಳ್ 90.94 ಪರ್ಸೆಂಟೈಲ್‌ ಗಳಿಸಿದ್ದಾರೆ. ಉತ್ತಮ ಫಲಿತಾಂಶ ಪಡೆದಿರುವ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, […]

ರಂಗಾಯಣ ನಾಟಕಗಳಿಗೆ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ರಂಗಾಯಣ ಸಂಸ್ಥೆಯ ವತಿಯಿಂದ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಾಟಕ ಶಾಲೆಯ ಪದವಿ ಪಡೆದಿರುವ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಲ್ಲಿ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪಡೆದಿರುವ 22 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ. ಜುಲೈ 20 ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ತೆಂಕನಿಡಿಯೂರು: ಜುಲೈ 13 ರಂದು ಹಡಪದ ಅಪ್ಪಣ್ಣ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯು ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. […]