ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಪಂಕಜ್ ಭಟ್ಗೆ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ 16 ನೇ ಸ್ಥಾನ
ಉಡುಪಿ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪಂಕಜ್ ಭಟ್ ಗೆ ಓರಿಸ್ಸಾದ ಭುವನೇಶ್ವರದಲ್ಲಿ ನಡೆದ 2022 ರ 32ನೇ ಸಾಲಿನ 17 ವರ್ಷದ ಒಳಗಿನ ವಯೋಮಿತಿಯ ಮುಕ್ತ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ 16ನೇ ಸ್ಥಾನ ಗಳಿಸಿದ್ದಾನೆ. ಪಂಕಜ್ ಭಟ್ ಪುತ್ತೂರಿನ ವೈದ್ಯರಾದ ಡಾ. ಮಹಾಲಿಂಗೇಶ್ವರ ಪ್ರಸಾದ್ ಭಟ್ ಮತ್ತು ಪಾವನ ಪ್ರಸಾದ್ ರವರ ಸುಪುತ್ರರಾಗಿದ್ದು, ವಿದ್ಯಾರ್ಥಿಯ ಈ ಅಮೋಘ ಸಾಧನೆಯನ್ನು ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು […]
ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು: ಬಸವರಾಜ ಬೊಮ್ಮಾಯಿ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲರಾಗಿದ್ದಾರೆ, ಅದಕ್ಕೆ ತಕ್ಕ ಹಾಗೆ ಸಶಕ್ತ ಹಾಗೂ ಘರ್ಜಿಸುವ ರೂಪದಲ್ಲಿ ನಮ್ಮ ರಾಷ್ಟ್ರದ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಸಿಂಹ ಲಾಂಛನದ ಬಗ್ಗೆ ಕಾಂಗ್ರೆಸ್ ಪಕ್ಷ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತ್ಯುತ್ತರ ನೀಡಿದರು. ಸಿಂಹದ ಲಾಂಛನ ಉಗ್ರವಾಗಿದೆ, ವ್ಯಗ್ರವಾಗಿದೆ ಎನ್ನುವುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ ನವರು ಈ ವಿಷಯವನ್ನು ರಾಜಕೀಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಭಾರತಕ್ಕೆ ಈಗ […]
ಮುಖ್ಯಮಂತ್ರಿಗಳಿಂದ ಶ್ರೀಕೃಷ್ಣ ಮಠ ಭೇಟಿ, ಗುರುವಂದನೆ ಸಲ್ಲಿಕೆ
ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದ ಸಂದರ್ಭದಲ್ಲಿ,ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಮುಖ್ಯಮಂತ್ರಿಗಳು ದೇವರ ದರ್ಶನ ಪಡೆದು, ಗುರುಪೂರ್ಣಿಮೆ ಪ್ರಯುಕ್ತ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಕಾಷಾಯ ವಸನವಿತ್ತು ಗುರುವಂದನೆ ಸಲ್ಲಿಸಿದರು. ಪರ್ಯಾಯ ಶ್ರೀಪಾದರು ಅವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಆರ್.ಅಶೋಕ್, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ ,ಕರಾವಳಿ ಪ್ರಾಧಿಕಾರದ ಮಟ್ಟಾರ್ […]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ: ಬನ್ನಂಜೆ ಕಚೇರಿ ಭಾನುವಾರವೂ ಕಾರ್ಯಾಚರಣೆ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಪ್ರವೇಶಾತಿಗಳು ನಡೆಯುತ್ತಿರುವ ಹಿನ್ನೆಲೆ, 2 ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರದಂದು ಬನ್ನಂಜೆಯಲ್ಲಿರುವ ಪ್ರಾದೇಶಿಕ ಕೇಂದ್ರ ಕಚೇರಿ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು ಉದ್ಯೋಗ ವಿನಿಮಯ ಕಚೇರಿ: ಜುಲೈ 15 ರಂದು ನೇರ ಸಂದರ್ಶನ
ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಗಳ ನೇರ ಸಂದರ್ಶನವನ್ನು ಜುಲೈ 15 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ. ಹತ್ತನೇ ತರಗತಿ, ಪದವಿ ಪೂರ್ವ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ಲಾಂಟ್ ಟೆಕ್ ಇಂಡಸ್ಟ್ರಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಈಶ ಮೋಟಾರ್ಸ್, […]