ಬಳಕೆದಾರರ ಒಪ್ಪಿಗೆ ಇಲ್ಲದೆ ಯುಪಿಐ ಆ್ಯಪ್‌ ಗಳು ಲೊಕೇಶನ್ ಡೇಟಾ ಸಂಗ್ರಹಿಸುವಂತಿಲ್ಲ: ಎನ್.ಪಿ.ಸಿ.ಐ

ನೆವದೆಹಲಿ: ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್.ಪಿ.ಸಿ.ಐ) ಎಲ್ಲಾ ಯುಪಿಐ-ಆಧಾರಿತ ಅಪ್ಲಿಕೇಶನ್‌ಗಳು ತಮ್ಮ ಬಳಕೆದಾರರ ಲೊಕೇಶನ್ ಡೇಟಾವನ್ನು ಸಂಗ್ರಹಿಸುವ ಮೊದಲು ಇದಕ್ಕೆ ಬಳಕೆದಾರರ ಒಪ್ಪಿಗೆ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ತಮ್ಮ ಲೊಕೇಶನ್ ಹಂಚಿಕೊಳ್ಳಲು ಸಮ್ಮತಿಯನ್ನು ಸಕ್ರಿಯಗೊಳಿಸುವ ಅಥವಾ ಹಿಂತೆಗೆದುಕೊಳ್ಳುವ ಆಯ್ಕೆಯನ್ನು ಅಪ್ಲಿಕೇಶನ್‌ಗಳು ತಮ್ಮ ಬಳಕೆದಾರರಿಗೆ ಕಡ್ಡಾಯವಾಗಿ ಒದಗಿಸಬೇಕು ಎಂದು ಅದು ಹೇಳಿದೆ. “ಸೇವೆಗಳನ್ನು ಪಡೆದುಕೊಳ್ಳುವಾಗ ಆರಂಭದಲ್ಲಿ ಯುಪಿಐ ಅಪ್ಲಿಕೇಶನ್‌ಗಳಿಗೆ ಲೊಕೇಶನ್ ಹಂಚಿಕೊಳ್ಳಲು ಗ್ರಾಹಕರು ಈಗಾಗಲೇ ಒಪ್ಪಿಗೆ ನೀಡಿದ್ದರೆ ಮತ್ತು ನಂತರ ಸಮ್ಮತಿಯನ್ನು ಹಿಂಪಡೆಯಲು ಬಯಸಿದ್ದರೂ ಸಹ, ಗ್ರಾಹಕರಿಗೆ […]

ಮುದ್ರಾಡಿ: ಬಜಗೋಳಿ ರವೀಂದ್ರ ಶೆಟ್ಟಿ ಇವರಿಗೆ ಧರ್ಮಯೋಗಿ ಸಮ್ಮಾನ

ಮುದ್ರಾಡಿ : ಭೂಮಿಗೆ ಬಂದ ಮೇಲೆ ನಾವು ಸಮಾಜ ಸೇವೆ ಮಾಡುವುದು ನಮ್ಮ ಕರ್ತವ್ಯ ಅಲ್ಲ, ಅದು ನಮ್ಮ ಜವಾಬ್ಧಾರಿ. ನಿರಂತರವಾಗಿ ಸಮಾಜಮುಖಿ ಕೆಲಸವನ್ನು ಮಾಡುತ್ತ ಬಂದಿದ್ದೇನೆ, ನನ್ನ ಕೆಲಸವೇ ಈಗ ಪ್ರಚಾರಕ್ಕೆ ಬಂದಿದೆ. ಸೇವೆಗಾಗಿ ನೀಡಿದ ದೊಡ್ಡ ಗೌರವ ಅತ್ಯಂತ ಖುಷಿ ನೀಡಿದೆ, ಜವಾಬ್ಧಾರಿಯು ಹೆಚ್ಚಿದೆ, ಸೇವೆಯನ್ನು ಇನ್ನಷ್ಟು ಮುಂದುವರಿಸುತ್ತೇನೆ ಎಂದು ಸಮಾಜ ಸೇವಕ, ಕರ್ನಾಟಕ ರಾಜ್ಯ ಗಣಿ ಮತ್ತು ಕಲ್ಲು ಕ್ರಷರ್‌ ಮಾಲಕರ ಸಂಘ ರಾಜ್ಯ ಘಟಕದ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. […]

ಕುಟುಂಬ ಯೋಜನಾ ಕ್ರಮ ಬಳಸಿ, ಜನಸಂಖ್ಯೆ ನಿಯಂತ್ರಿಸಿ: ಸುಮಿತ್ರಾ ನಾಯಕ್

ಉಡುಪಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ವಸತಿ ಸಮಸ್ಯೆಗಳು ಉಂಟಾಗುತ್ತಿದ್ದು, ಸಾರ್ವಜನಿಕರು ಆರೋಗ್ಯ ಇಲಾಖೆಯ ಕುಟುಂಬ ಯೋಜನಾ ಕ್ರಮಗಳನ್ನು ಬಳಸಿಕೊಂಡು ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹೇಳಿದರು. ಅವರು ಸೋಮವಾರ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ […]

ಮಂಗಳೂರು: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಸವರಾಜ್ ಬೊಮ್ಮಾಯಿ; ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಣೆ

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರವಾಸ ನಡೆಸಿ, ವಿವಿಧೆಡೆ ನೆರೆ ಹಾಗೂ ಮಳೆಯಿಂದಾದ ಹಾನಿ ಪರಿಶೀಲಿಸಿ, ಅಧಿಕಾರಿಗಳ ಜತೆಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿ, ಸಂತ್ರಸ್ತರಿಗೆ ಪರಿಹಾರ ಚೆಕ್‌ ವಿತರಿಸಿದರು. ಮಡಿಕೇರಿಯಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳ ನಿರೀಕ್ಷಣೆ ನಡೆಸಿ ಅಲ್ಲಿಂದ ಸುಳ್ಯಕ್ಕೆ ತೆರಳುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ.ಜಿಲ್ಲೆಯ ಸಂಪಾಜೆಗೆ ಭೇಟಿ ನೀಡಿ ಮಳೆ ಹಾಗೂ ಭೂಕಂಪದಿಂದ ಹಾನಿಗೊಂಡು ಬಿರುಕು ಬಿಟ್ಟಮನೆಗಳ ವೀಕ್ಷಣೆ ನಡೆಸಿದರು. ಕೊಯನಾಡು ಗಣಪತಿ […]