ಅಪ್ರಾಪ್ತ ಮಕ್ಕಳಿಗೆ ವಸತಿಗೃಹ ಕೊಠಡಿ ನೀಡಿದಲ್ಲಿ ಪರವಾನಗಿ ರದ್ದು: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಬಾಲನ್ಯಾಯ ಕಾಯ್ದೆ ಹಾಗೂ ಪೊಕ್ಸೋ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಪ್ರಾಪ್ತ ಮಕ್ಕಳಿಗೆ ಕೊಠಡಿ ನೀಡಬಾರದು. ಜಿಲ್ಲೆಯ ನೋಂದಾಯಿತ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿಗಳನ್ನು ಒದಗಿಸುವ ಸಂದರ್ಭದಲ್ಲಿ ಅಪ್ರಾಪ್ತ ಮಕ್ಕಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿಯೇ ಕೊಠಡಿಗಳನ್ನು ಒದಗಿಸಬೇಕು. ಒಂದು ವೇಳೆ ದಾಖಲೆಗಳನ್ನು ಪಡೆಯದೇ /ಪರಿಶೀಲಿಸದೇ ವಸತಿಗೃಹಗಳ ಕೊಠಡಿಗಳನ್ನು ಒದಗಿಸಿದ್ದಲ್ಲಿ ಅಂತಹ ವಸತಿಗೃಹಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಕೂರ್ಮಾರಾವ್ […]
ನಗರಸಭೆ: ಜುಲೈ 16 ರಂದು ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ
ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲೀಕರು, ವರ್ತಕರು, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು, ಕಲ್ಯಾಣ ಮಂಟಪದ ಮಾಲೀಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.