ಜು.19: ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಸಭೆ
ಉಡುಪಿ: ಸರಕಾರವು ಪರಿಸರಕ್ಕೆ ಹಾನಿಯುಂಟು ಮಾಡುವ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡದಂತೆ ಆದೇಶ ಹೊರಡಿಸಿದ್ದು, ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತ ಸಭೆಯು ಜುಲೈ 19 ರಂದು ಮಧ್ಯಾಹ್ನ 3 ಗಂಟೆಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲೀಕರು ಸಭೆಯಲ್ಲಿ ಭಾಗವಹಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹೈನುಗಾರಿಕೆ ತಾಣ, ಗೋಶಾಲೆಗಳ ನೋಂದಣಿಗೆ ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹೈನುಗಾರಿಕೆ ತಾಣ ಹಾಗೂ ಗೋಶಾಲೆಗಳ ಬಗ್ಗೆ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿ, ಎಲ್ಲಾ ಹೈನುಗಾರಿಕೆ ತಾಣ ಹಾಗೂ ಗೋಶಾಲೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. 10 ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರ್ಮ್ಗಳು ಹಾಗೂ ಗೋಶಾಲೆಗಳನ್ನು ಸ್ಥಾಪಿಸಲು ಹಾಗೂ ಕಾರ್ಯನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಇವುಗಳು ಕೇಂದ್ರ […]
ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಜುಲೈ 21 ರಂದು ಬೈಂದೂರು ಪ್ರವಾಸಿ ಮಂದಿರ, ಜುಲೈ 22 ರಂದು ಕುಂದಾಪುರ ಪ್ರವಾಸಿ ಮಂದಿರ, ಜುಲೈ 25 ರಂದು ಹೆಬ್ರಿ ಪ್ರವಾಸಿ ಮಂದಿರ, ಜುಲೈ 26 ರಂದು ಕಾರ್ಕಳ ಪ್ರವಾಸಿ ಮಂದಿರ, ಜುಲೈ 27 ಬ್ರಹ್ಮಾವರ ಚಾಂತಾರು ಗ್ರಾಮ ಪಂಚಾಯತ್ […]
ಯೂರೋಪಿನಲ್ಲಿ ಧಗೆಯಿಂದ ಹಾಹಾಕಾರ, ಚೀನಾದಲ್ಲಿ ಬರಗಾಲ, ಭಾರತದಲ್ಲಿ ಅತಿವೃಷ್ಟಿಯ ಜಲಧಾರೆ, ಅಮೇರಿಕಾದಲ್ಲಿ ಹಿಮದ ಮಳೆ: ಇದು ಜಾಗತಿಕ ಹವಾಮಾನ ಬದಲಾವಣೆಯ ಕಾಲ
ಒಂದೆಡೆ ಸದಾ ತಣ್ಣಗಿರುತ್ತಿದ್ದ ಯೂರೋಪಿನ ದೇಶಗಳಲ್ಲಿ ತಾಪಮಾನ 35 ಡಿಗ್ರಿ ಹೆಚ್ಚಾಗಿ ಜನ ಬೇಸಗೆಯ ಧಗೆಯಿಂದ ಹೈರಾಣಾಗುತ್ತಿದ್ದರೆ ಇತ್ತ ನೈರುತ್ಯ ಚೀನಾದಲ್ಲಿ ಜುಲೈ ಮಾಹೆಯಲ್ಲಿ ಪ್ರವಾಹವಿರಬೇಕಾದಲ್ಲಿ ಭಯಂಕರ ಬರಗಾಲ ತಾಂಡವವಾಡುತ್ತಿದೆ. ಬ್ರಿಟನ್ನಿನಲ್ಲಿ ಈಗಾಗಾಲೇ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನವು ದಾಖಲೆಯ 40ಡಿಗ್ರಿ ಮಾಪನವನ್ನು ತಲುಪಲಿದೆ ಎನ್ನಲಾಗಿದೆ. ಫ್ರಾನ್ಸ್ ಇಟಲಿಯ ಕಾಡುಗಳನ್ನು ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಇಟಲಿಯಲ್ಲಿ 70 ವರ್ಷಗಳ ಬಳಿಕ ಬರಗಾಲ ಕಂಡು ಬಂದಿದೆ. ಅಮೇರಿಕಾದಲ್ಲಿ ಮರಳಿನ ತೂಫಾನು ಆವರಿಸಿಕೊಂಡು ಹೈವೆಯಲ್ಲಿ ವಾಹನಗಳು ಸಂಚರಿಸಲೂ […]
ಜಿಲ್ಲೆಯಲ್ಲಿ 8 ಲಕ್ಷ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ ಗುರಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ರಿಂದ 59 ವರ್ಷದೊಳಗಿನ ಸಾರ್ವಜನಿಕರಿಗೆ ಸೆಪ್ಟಂಬರ್ 30 ರ ಒಳಗೆ 8 ಲಕ್ಷ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಷ್ಟೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ […]