ರಕ್ತದಾನದ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವ ಕೆಲಸವಾಗಲಿ: ಯಶ್ ಪಾಲ್ ಸುವರ್ಣ
ರಕ್ತದಾನ ಮಾಡುವುದರಿಂದ ನಾವು ಆರೋಗ್ಯವಂತರಾಗಿರಬಹುದು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಸಂಘ-ಸಂಸ್ಥೆಗಳು ರಕ್ತದಾನ ಶಿಬಿರವನ್ನು ಆಯೋಜಿಸಿ ರಕ್ತದಾನ ಮಾಡುವ ಬಗ್ಗೆ ಯುವ ಸಮುದಾಯಕ್ಕೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಗೌರವಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಅವರು ಎಳ್ಳಾರೆ ಶ್ರೀ ಜನಾರ್ದನ ಶಾಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಡ್ತಲ ಗ್ರಾ.ಪಂ […]
ಕರ್ನಾಟಕ ವೃತ್ತ ಅಂಚೆ ಅಧೀಕ್ಷಕರ ಒಕ್ಕೂಟ: ರಾಜ್ಯಧ್ಯಕ್ಷರಾಗಿ ನವೀನ್ ಚಂದರ್ ಮೂಳೂರು ಆಯ್ಕೆ
ಬೆಂಗಳೂರು: ಇಲ್ಲಿ ಜುಲೈ 16 ರಂದು ನಡೆದ ಒಕ್ಕೂಟದ ದ್ವೈವಾಷಿ೯ಕ ಅಧಿವೇಶನದಲ್ಲಿ ನವೀನ್ ಚಂದರ್ ಮೂಳೂರು ಅವಿರೋಧವಾಗಿ ಆಯ್ಕೆಯಾದರು. ಇವರು ಉಡುಪಿ ಅಂಚೆ ವಿಭಾಗದಲ್ಲಿ ಅಂಚೆ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದು ಈ ಹಿಂದೆ ದೆಹಲಿಯ ಡೈರೆಕ್ಟರೇಟ್ ನಲ್ಲಿ ಸಹಾಯಕ ಅಂಚೆ ನಿರ್ದೇಶಕರಾಗಿ ಮತ್ತು ಶಿವಮೊಗ್ಗದಲ್ಲಿ ಅಂಚೆ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಇವರು ಸಹಾಯಕ ಅಧೀಕ್ಷಕರಾಗಿದ್ದಾಗ ಅಂಚೆ ನಿರೀಕ್ಷರ ಮತ್ತು ಸಹಾಯಕ ಅಧೀಕ್ಷಕರ ಕರ್ನಾಟಕ ವ್ಯತ್ತದ ಒಕ್ಕೂಟದ ಕಾರ್ಯದರ್ಶಿಯಾಗಿ, ರಾಜ್ಯಧ್ಯಕ್ಷರಾಗಿ ಮತ್ತು ರಾಷ್ಟ್ರೀಯ ಮಟ್ಟದ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ […]
ಕಾರ್ಕಳ: ಸಿಂಧೂರ ನಾಟಕ ತಂಡದಿಂದ ವಿದ್ಯಾರ್ಥಿ ವೇತನ ವಿತರಣೆ
ಕಾರ್ಕಳ: ದಿನಾಂಕ 17 ಜುಲೈ ಭಾನುವಾರ ಕಾರ್ಕಳ ಬಂಡಿಮಠದ ಮೂಡು ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಿಂಧೂರ ಕಲಾವಿದೆರ್ ಕಾರ್ಲ ಇವರ 7 ನೇ ವರ್ಷದ ಸಂಭ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಆಮಂತ್ರಣ ಪರಿವಾರ ಅಳದಂಗಡಿ ಇದರ ಸಂಸ್ಥಾಪಕರಾದ ವಿಜಯ್ ಕುಮಾರ್ ಜೈನ್ ಉದ್ಘಾಟಿಸಿ ನಾಟಕ ತಂಡದ ಇಂತಹ ಸಾಮಾಜಿಕ ಕಾರ್ಯಕ್ರಮ ಶ್ಲಾಘನೀಯ ಎಂದರು. ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತೀರುವ ಸಿಂಧೂರ ನಾಟಕ ತಂಡ ರಾಜ್ಯಕ್ಕೆ ಮಾದರಿ ಎಂದರು. ಧರ್ಮಗುರುಗಳಾದ ಡೊಮಿನಿಕ್ ವೇಗಸ್ ಇಂದೋರ್ ಮಾತನಾಡಿ ಮಕ್ಕಳು ಈ […]
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ದ್ವಿತೀಯ ಪಿ.ಯು.ಸಿ ವರೆಗೆ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ಇಲ್ಲದ ಮಾಜಿ ಸೈನಿಕರ ಹಾಗೂ ರಾಜ್ಯದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆ.ಓ.ಸಿ ಹಾಗೂ ಪ್ರೋಪೆಷನ್ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುವ ಮಕ್ಕಳಿಗೆ ಶಿಷ್ಯವೇತನ […]
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ನೀಡಿಕೆ: ಅರ್ಜಿ ಆಹ್ವಾನ
ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3 ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ […]