ಕೋವಿಡ್ ವೈರಸ್ ವಿರುದ್ಧ ಕ್ಷೀಣಿಸುತ್ತಿರುವ ಪ್ರತಿರಕ್ಷಣೆ: ಕೋವಿಡ್ ಬೂಸ್ಟರ್ ಡೋಸ್ ಅಗತ್ಯ ಎಂದ ಸರಕಾರ

ನವದೆಹಲಿ: ಕೋವಿಡ್ ವೈರಸ್ ವಿರುದ್ಧ ದೇಹದ ಪ್ರತಿರಕ್ಷಣೆ ಕ್ಷೀಣಿಸುತ್ತಿರುವುದರಿಂದ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ಅಗತ್ಯವಿದೆ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಜಿಐ) ಕೋವಿಡ್ -19 ವರ್ಕಿಂಗ್ ಗ್ರೂಪ್‌ನ ಮುಖ್ಯಸ್ಥ ಡಾ.ಎನ್.ಕೆ. ಅರೋರಾ ಹೇಳಿದ್ದಾರೆ. ಎಐಆರ್ ನ್ಯೂಸ್‌ನೊಂದಿಗೆ ಮಾತನಾಡಿದ ಅವರು, ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವ ಕಾರಣ ಮುನ್ನೆಚ್ಚರಿಕಾ ಡೋಸ್ ನ ಪ್ರಮಾಣವನ್ನು ಮಿಷನ್ ಮೋಡ್‌ನಲ್ಲಿ ಹೆಚ್ಚಿಸಬೇಕು. ಕೋವಿಡ್ ಪ್ರಕರಣಗಳು ತಗ್ಗಿರುವುದರಿಂದ ಜನರ ಮನಸ್ಸಿನಲ್ಲಿ ಉದಾಸೀನತೆ ಮನೆಮಾಡಿದೆ. ಆದರೆ ನಾವು ರೋಗದ ವಿರುದ್ದ […]
ಕಾಪು: ಜುಲೈ 24 ರಂದು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿ ಪದಗ್ರಹಣ ಕಾರ್ಯಕ್ರಮ

ಕಾಪು: ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಸಮಿತಿಯ ಪದಾಧಿಕಾರಿಗಳು ಪದಗ್ರಹಣ ಕಾರ್ಯಕ್ರಮ ಜುಲೈ 24 ರಂದು ಹಿರಿಯಡ್ಕದ ಸುರಭಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ನಾಯಕರುಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ)ದ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಾಲು ಪ್ರಕಟಣೆಯಲ್ಲಿ […]
ಕೇರಳದ ಕಣ್ಣೂರಿನಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢ: ದ.ಕ ದಲ್ಲಿ ಹೈ ಅಲರ್ಟ್

ಮಂಗಳೂರು: ದ.ಕ ಜಿಲ್ಲೆಗೆ ತಾಗಿಕೊಂಡಿರುವ ಕೇರಳದಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ರೋಗ ಹರಡುವ ಆತಂಕ ಎದುರಾಗಿದೆ. ಮೇ 13 ರಂದು ದುಬೈನಿಂದ ಕೇರಳಕ್ಕೆ ಬಂದ 31 ವರ್ಷದ ಕಣ್ಣೂರು ಮೂಲದ ವ್ಯಕ್ತಿಯೊಬ್ಬರಿಗೆ ವೈರಲ್ ಕಾಯಿಲೆ ಇರುವುದು ದೃಢಪಟ್ಟಿದೆ. ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ವ್ಯಕ್ತಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿಕೆ ನೀಡಿದ್ದಾರೆ. ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ಇರಿಸಲಾಗಿದೆ. ವಿಮಾನ […]
ಭೂಕುಸಿತದ ಭೀತಿ ಹಿನ್ನೆಲೆ: ಮಂಗಳೂರು-ಮಡಿಕೇರಿ ಪರ್ಯಾಯ ಮಾರ್ಗವೂ ಬಂದ್

ಮಡಿಕೇರಿ: ಮಂಗಳೂರು-ಬೆಂಗಳೂರು ರಾ.ಹೆ 75 ರಲ್ಲಿ ಶಿರಾಡಿ ಘಾಟ್ ಸಮೀಪ ಭೂಕುಸಿತ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದೀಗ ಪರ್ಯಾಯ ಮಾರ್ಗದಲ್ಲೂ ಭೂಕುಸಿತ ಭೀತಿಯ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಭಾನುವಾರದಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಡೆಗೋಡೆಯ ಸ್ಲ್ಯಾಬ್ ಗಳು ಹೊರಚಾಚಿದ್ದರಿಂದ ಮಾಣಿ-ಮೈಸೂರು ಮಾರ್ಗದಲ್ಲಿ ರಸ್ತೆ ಸಂಚಾರ ನಿಷೇಧಿಸಿ ಮಡಿಕೇರಿ-ಮೇಕೇರಿ-ಅಪ್ಪಂಗಳ-ತಾಳತ್ತಮನೆ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಈಗ ಈ ಮಾರ್ಗದಲ್ಲೂ […]
ಕುಂದಾಪುರ: ಭಂಡಾರ್ಕರ್ಸ್ ಕಾಲೇಜಿನಲ್ಲಿ ಸ್ವಯಂ ಪ್ರತಿಫಲನ ಕಾರ್ಯಗಾರ

ಕುಂದಾಪುರ: ನಮ್ಮೊಳಗಿನ ಶಕ್ತಿಯನ್ನು ಅರಿಯುವ ತನಕ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ ಹಾಗಾಗಿ ನಾವೇನು, ನಮ್ಮ ಶಕ್ತಿ ಏನೆಂದು ಅರಿತರೆ ಅಂದುಕೊಂಡ ಗುರಿಯನ್ನು ತಲುಪಬಹುದು ಎಂದು ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಸಚಿತ ನಂದಗೋಪಾಲ್ ಹೇಳಿದರು. ಅವರು ಜುಲೈ15 ರಂದು ಭಂಡರ್ಕಾರ್ಸ್ ಕಾಲೇಜಿನಲ್ಲಿ ಐಚ್ಛಿಕ ಭಾಷೆ ಇಂಗ್ಲಿಷ್-ಪತ್ರಿಕೋದ್ಯಮ ಹಾಗೂ ಮನಶಾಸ್ತ್ರ ವಿಭಾಗಗಳು ಸೇರಿ ಆಯೋಜಿಸಿದ್ದ ‘ಸ್ವಯಂ ಪ್ರತಿಫಲನ’ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಜೀವನದಲ್ಲಿ ಅನೇಕ ಬಾರಿ ಸೋಲು ಗೆಲುವು ಎಲ್ಲವೂ […]