“ಕರ್ನಾಟಕ ಉದ್ಯೋಗ ನೀತಿ 2022-25”: ಉದ್ಯೋಗಾವಕಾಶ ಹೆಚ್ಚಳಕ್ಕಾಗಿ ರಾಜ್ಯ ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ “ಕರ್ನಾಟಕ ಉದ್ಯೋಗ ನೀತಿ 2022-25” ಅನ್ನು ಅನುಮೋದಿಸಿದೆ ಮತ್ತು ಹೆಚ್ಚಿನ ಉದ್ಯೋಗಗಳನ್ನು ಒದಗಿಸಲು ರಾಜ್ಯದಲ್ಲಿ ಹೊಸ ಘಟಕಗಳನ್ನು ವಿಸ್ತರಿಸಲು ಅಥವಾ ಸ್ಥಾಪಿಸಲು ಕೈಗಾರಿಕೆಗಳಿಗೆ ಸೂಚನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವತ್ತ ಅವರು ಗಮನಹರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸಭೆಯ ನಂತರ ಕಾನೂನು ಮತ್ತು […]

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಯು ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ

ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು‌ ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ‌ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ: […]

ಕೊಡವೂರು 20ನೆಯ ಬೃಹತ್ ಗ್ರಾಮ ಸಭೆ: ಸರ್ಕಾರದ ಸವಲತ್ತುಗಳ ಮಾಹಿತಿ ಮತ್ತು ಕುಂದು ಕೊರತೆ ನಿವಾರಣಾ ಕಾರ್ಯಕ್ರಮ

ಜುಲೈ 24 ರಂದು ಮಧ್ಯಾಹ್ನ 3:30 ರಿಂದ 5:30 ರವರೆಗೆ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಇಲ್ಲಿ 75 ನೆಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರಸಭೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸವಲತ್ತುಗಳ ಸಮಗ್ರ ಮಾಹಿತಿ ಕಾರ್ಯಕ್ರಮ ಹಾಗೂ ಊರಿನ ಕುಂದು ಕೊರತೆಗಳ ನಿವಾರಣೆಗಾಗಿ 20ನೆಯ ಬೃಹತ್ ಗ್ರಾಮ ಸಭೆ ನಡೆಯಲಿರುವುದು. ಅಂದು ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು ಮತ್ತು ಫಲಾನುಭವಿಗಳಿಗೆ ಯೋಜನಾ ಸೌಲಭ್ಯಗಳನ್ನು ದೊರಕಿಸಿಕೊಡಲಾಗುವುದು ಎಂದು ಕೊಡವೂರು ವಾರ್ಡ್ ನ ನಗರಸಭಾ ಸದಸ್ಯ ವಿಜಯ್ ಕೊಡವೂರು ತಿಳಿಸಿದ್ದಾರೆ. ಬೀದಿ ಬದಿ […]

ಜುಲೈ 24ರಂದು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಹಿರಿಯಡ್ಕ: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ), ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ (ಉತ್ತರ) ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ (ಉತ್ತರ) ಇದರ ನೂತನ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 24/07/2022 ರಂದು ಹಿರಿಯಡ್ಕದ ಸುರಭಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ […]

ಜ್ಞಾನಸುಧಾ ಕಾಲೇಜಿನಲ್ಲಿ ಮೌಲ್ಯ ಸುಧಾ ಸರಣಿ ಕಾರ್ಯಕ್ರಮ

ಕಾರ್ಕಳ: ಡಿ.ವಿ.ಜಿಯವರ ಬದುಕು ಮತ್ತು ಕಾವ್ಯಕ್ಕೆ ವ್ಯತ್ಯಾಸವಿಲ್ಲ. ನಡೆಯೇ ನುಡಿಯಾಗಿಸಿ ಗೌರವ ಪಡೆದುದಕ್ಕೆ ಸಾಕ್ಷಿ ಮಂಕುತಿಮ್ಮನ ಕಗ್ಗವಾಗಿದೆ ಎಂದು ಮುಂಡ್ಕೂರು ವಿದ್ಯಾವರ್ಧಕ ಪಿಯು ಕಾಲೇಜಿನ ಕನ್ನಡ ಅಧ್ಯಾಪಕ ಪ್ರಭಾಕರ ಕೊಂಡಳ್ಳಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶ್ರೀಮಹಾಗಣಪತಿ ದೇವಾಸ್ಥಾನ ಗಣಿತನಗರ ಹಾಗೂ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಸಹಯೋಗದೊಂದಿಗೆ ನಡೆದುಕೊಂಡು ಬರುತ್ತಿರುವ ಮೌಲ್ಯ ಸುಧಾ–ತಿಂಗಳ ಸರಣಿಯ ಎರಡನೆಯ ಕಾರ್ಯಕ್ರಮ ಕಗ್ಗದ ಬೆಳಕು ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ತಂತ್ರಜ್ಞಾನವನ್ನು ಹಣಕೊಟ್ಟು […]