ಕುಳಾಯಿ: ಶ್ರೀ ರಾಘವೇಂದ್ರ ಸ್ವಾಮಿ ಮಠ ಸಂಸ್ಥಾಪನಾ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಳಾಯಿ: ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಭಾಗವಹಿಸಿದ್ದರು. ಸಮಾರಂಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]

ಪರ್ಕಳ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಪಡಿಸಲು ಹದಿನೈದು ದಿನ ಗಡುವು: ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ಪ್ರತಿಭಟನೆ

ಪರ್ಕಳ: ಭಾನುವಾರದಂದು ಪರ್ಕಳದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಮನೋವೈದ್ಯ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ಧರಣಿ ನಡೆಯಿತು. ಪರ್ಕಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮಾನ‌ ಮನಸ್ಕರು ಮತ್ತು ಪರ್ಕಳ ನಿವಾಸಿಗಳು ಪಾಲ್ಗೊಂಡರು.   ಧರಣಿಯ ನೇತೃತ್ವ ವಹಿಸಿದ ಡಾ.ಪಿ.ವಿ.ಭಂಡಾರಿ ಮಾತನಾಡಿ ಶಾಸಕರು, ಸಂಸದರು ಮತ್ತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಇತ್ತೀಚೆಗೆ ಅಧ್ಯಯನಕ್ಕಾಗಿ ಶಾಸಕರೆಲ್ಲ ಲೇಹ್ ಲಡಾಕ್ ಗೆ ಹೋಗಿದ್ದಾರೆ. ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ, ನಮ್ಮ ಪರ್ಕಳ ರಸ್ತೆಗೆ ಬಂದರೆ ಸಾಕು, ನಿಮಗೆ ಇಲ್ಲಿಯೇ ಲೇಹ್ ಲಡಾಕ್ ನ […]

ಜಿಲ್ಲಾ ವಕೀಲರ ಸಂಘ: ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಉಡುಪಿ ವಕೀಲರ ಸಂಘದ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಜುಲೈ 21ರಂದು ಆಯೋಜಿಸಿದ “ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮ” ಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ್ ಶಿವಪ್ಪ ಇವರು ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶರ್ಮಿಳಾ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾತ್ವಿಕ್ ಭಟ್, ವಕೀಲರ […]

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ: ಪ.ಜಾತಿಯ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ […]

ಬಾಲಕಿಯರ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 6 ಮೆಟ್ರಿಕ್ ಪೂರ್ವ ಹಾಗೂ 14 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಕರಾಟೆ, ಜುಡೋ ಹಾಗೂ ಟೈಕ್ವಾಂಡೋಗಳಲ್ಲಿ ವಿಶೇಷ ಪರಿಣಿತಿ ಹೊಂದಿದ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. 40 ವರ್ಷದೊಳಗಿನ, ಬ್ಲ್ಯಾಕ್ ಬೆಲ್ಟ್ ಅರ್ಹತೆ ಹೊಂದಿರುವ, ನೊಂದಾಯಿತ ಕರಾಟೆ ಸಂಘದ ಸದಸ್ಯತ್ವ ಪಡೆದಿರುವ ಅರ್ಹ ಮಹಿಳಾ ತರಬೇತುದಾರರು ಆಗಸ್ಟ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. […]