ವೆಸ್ಟ್ ಇಂಡೀಸ್ ವರ್ಸಸ್ ಭಾರತ: ಏಕದಿನ ಪಂದ್ಯದಲ್ಲಿ ಭಾರತಕ್ಕೆ 2 ವಿಕೆಟ್‌ಗಳ ಜಯ; ಸರಣಿಯಲ್ಲಿ 2-0 ಮುನ್ನಡೆ

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಿನ್ನೆ ರಾತ್ರಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2 ವಿಕೆಟ್‌ಗಳಿಂದ ಸೋಲಿಸಿದ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 312 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಭಾರತ 49.4 ಓವರ್‌ಗಳಲ್ಲಿ 8 ವಿಕೆಟ್‌ಗೆ 312 ರನ್ ಗಳಿಸಿತು. ಅಕ್ಷರ್ ಪಟೇಲ್ ಅಜೇಯ 64 ರನ್ ಮತ್ತು ಶ್ರೇಯಸ್ ಅಯ್ಯರ್ 63 ರನ್ ಗಳಿಸಿದರು. ಇದಕ್ಕೂ ಮುನ್ನ ಆತಿಥೇಯರು ಟಾಸ್ ಗೆದ್ದು ಬ್ಯಾಟಿಂಗ್ […]

ಕೊಡವೂರು: ಗೆಳೆಯರ ಬಳಗ ವತಿಯಿಂದ ಆಟಿಡೊಂಜಿ ದಿನ

ಕೊಡವೂರು: ಗೆಳೆಯರ ಬಳಗ ವತಿಯಿಂದ ಆಟಿಡೊಂಜಿ ದಿನ, ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮವು ಕೊಡವೂರು ಕೃಷ್ಣಪ್ಪ ಕಾಂಪ್ಲೆಕ್ಸ್ ನಲ್ಲಿ ಜುಲೈ 24 ರಂದು ಭಾನುವಾರ ನಡೆಯಿತು. ಆಟಿ ತಿಂಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕುದಿ ಶ್ರೀ ವಸಂತ ಶೆಟ್ಟಿ ನೀಡಿದರು. ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯ ಕೆ ವಿಜಯ್ ಕೊಡವೂರು, ಗೆಳೆಯರ ಬಳಗದ ಅಧ್ಯಕ್ಷ ಪ್ರಶಾಂತ್ ಶೆಟ್ಟಿಗಾರ್, ಪ್ರೇಮ ದಯಾನಂದ್ ಅಧ್ಯಕ್ಷೆ ಮಹಿಳಾ ಮಂಡಳಿ ಗರ್ಡೆ, ಲಕ್ಷ್ಮೀ ನಗರ, […]

ಹೆಮ್ಮಾಡಿ: ಮಹಿಳಾ ಮತ್ತು ಮಕ್ಕಳ ಹಿತರಕ್ಷಣಾ ಅರಿವು ಕಾರ್ಯಕ್ರಮ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ, ಮಕ್ಕಳ ಸಹಾಯವಾಣಿ ಉಡುಪಿ. ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಹಾಗೂ ಮಕ್ಕಳ ಸಹಾಯವಾಣಿಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ […]

ಜುಲೈ 28 ರಂದು ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಾಲನೆ: ದೇಶದಲ್ಲೇ ಪ್ರಥಮ ಪ್ರಯತ್ನಕ್ಕೆ ರಾಜ್ಯ ಸರ್ಕಾರದಿಂದ ಸ್ಪಂದನೆ

ಬೆಂಗಳೂರು: ಗೋಶಾಲೆಗಳಿಂದ ಜಾನುವಾರುಗಳನ್ನು ದತ್ತು ಪಡೆಯುವುದನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಜುಲೈ 28 ರಂದು ಹಸು ದತ್ತು ಯೋಜನೆಯನ್ನು ಪ್ರಾರಂಭಿಸಲಿದೆ ಎಂದು  ಪಶುಸಂಗೋಪನಾ ಸಚಿವ ಪ್ರಭು ಭಮಲಾ ಚವ್ಹಾಣ್ ಹೇಳಿದ್ದಾರೆ. ”ಜಾನುವಾರುಗಳನ್ನು ಸಂರಕ್ಷಿಸಲು ಗೋಶಾಲೆಗಳಲ್ಲಿ ಅವುಗಳನ್ನು ಸಾಕುವ ಮತ್ತು ಪೋಷಣೆ ಮಾಡುವ ಉದ್ದೇಶದಿಂದ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರವು ದೇಶದಲ್ಲೇ ಪ್ರಥಮ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲು ಉತ್ಸುಕವಾಗಿದೆ” ಎಂದು ಅವರು ಹೇಳಿದ್ದಾರೆ. ಜುಲೈ 28ಕ್ಕೆ ಬಸವರಾಜ […]