ಕಟಪಾಡಿ: ಧಾರ್ಮಿಕ ಸ್ಥಳದ ಪಕ್ಕ ಗಬ್ಬು ನಾರುವ ಕಸದ ರಾಶಿ, ನೊಂದ ಜನತೆಯ ಗೋಳು ಕೇಳುವವರೇ ಇಲ್ಲ 

ಉಡುಪಿ: ಕಟಪಾಡಿ ಏಣಗುಡ್ಡೆ ಪಂಚಾಯತ್ ವ್ಯಾಪ್ತಿಯ ಹಳೆ ರಸ್ತೆ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನ ಹಾಗೂ ನಾಗಬನ ಇರುವ ಸ್ಥಳದಲ್ಲಿ ಪ್ಲಾಸ್ಟಿಕ್, ಮಧ್ಯದ ಬಾಟಲು, ಮಲ ಮೂತ್ರದ ಪ್ಯಾಡ್, ಮಾಂಸ- ಮೂಳೆ ಮುಂತಾದವುಗಳನ್ನು ಹಾಕಲಾಗುತ್ತಿದ್ದು, ಧಾರ್ಮಿಕ ಪರಿಸರವು ಗಬ್ಬು ನಾಥದ ಕಸದ ರಾಶಿಯಲ್ಲಿ ಮುಳುಗಿದೆ. ಈಗಾಗಲೇ ಪಂಚಾಯತ್ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದ್ದರೂ ಇದುವರೆಗೂ ಯಾರೂ ಇತ್ತ ಮುಖ ಮಾಡಿಲ್ಲ. ಹತ್ತಿರದ ಫ್ಲಾಟ್ ಗಳು, ಮನೆಗಳಲ್ಲಿ ಒಟ್ಟಾದ ಕಸ, ಪ್ಲಾಸ್ಟಿಕ್ ಹಾಗೆ ಮಲ ಮೂತ್ರ ದ […]

75 ನೇ ಸ್ವಾತಂತ್ರೋತ್ಸವ ದಿನಾಚರಣೆ: ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಈ ಬಾರಿಯ 75 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸ್ವಾತ್ರಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ದೇಶದ 75 ನೇ ಸ್ವಾತ್ರಂತ್ರೋತ್ಸವ ಕಾರ್ಯಕ್ರಮವನ್ನು ಈ ಬಾರಿ ವಿಶೇಷವಾಗಿ ಆಚರಣೆ ಮಾಡಲಾಗುವುದು. ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ […]

ಶಿವಳ್ಳಿ: ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕರಂಬಳ್ಳಿ ಜನತಾ ಕಾಲೋನಿ ನಿವಾಸಿ ವೆಂಟೇಶ್ ನಾಗರಾಜ್ (32) ಎಂಬ ವ್ಯಕ್ತಿಯು ಜುಲೈ 19 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಆಗಸ್ಟ್ 1-8 ರವರೆಗೆ ಗಣಕ ಯಂತ್ರ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್ 1 ರಿಂದ 8 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, […]

ಉಡುಪಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-3 ಹುದ್ದೆ ಹಾಗೂ ಸಹಾಯಕಿಯರ-22 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿ ಗರಿಷ್ಠ 9 ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರುವ ಮಹಿಳಾ […]