ಪ್ರವೀಣ್ ಹತ್ಯೆ ಪ್ರಕರಣ ಎನ್.ಐ.ಎ ಗೆ ಹಸ್ತಾಂತರ: ಸಿಎಂ ಬೊಮ್ಮಾಯಿ
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನ ಎನ್.ಐ.ಎಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಂಡಿರೋದಾಗಿ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ವ್ಯವಸ್ಥಿತ ಸಂಚು, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ .ಐ.ಎ ಗೆ ಪತ್ರ ಬರೆಯಲು ಹೇಳಿದ್ದೇನೆ. ಪ್ರಕರಣವನ್ನ ಎನ್ ಐ […]
ಸೆಕ್ಯೂರಿಟಿ ಗಾರ್ಡ್ ನನ್ನು ಕೊಂದ ಪ್ಯಾಲೆಸ್ಟೀನಿಯನ್ನರು: ಹಂತಕರ ಮನೆ ಮೇಲೆ ಬುಲ್ಡೋಜರ್ ಚಲಾಯಿಸಿದ ಇಸ್ರೇಲ್ ಸರ್ಕಾರ; ಇದು ಯೋಗಿ ಮಾಡೆಲ್ ಎಂದ ನೆಟ್ಟಿಗರು
ಟೆಲ್ ಅವಿವ್: ಯಾಹ್ಯಾ ಮೀರಿ ಮತ್ತು ಯೂಸುಫ್ ಅಸ್ಸಿ ಎನ್ನುವ ಇಬ್ಬರು ಪ್ಯಾಲೆಸ್ಟೀನಿಯನ್ನರು ಇಸ್ರೇಲ್ ನ ವ್ಯಾಚೆಸ್ಲಾವ್ ಗೋಲ್ವ್ ಅನ್ನುವ ಸೆಕ್ಯೂರಿಟಿ ಗಾರ್ಡ್ ಅನ್ನು ಏಪ್ರಿಲ್ ೨೯ ರಂದು ಕೊಲೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಸರಕಾರ ಹಂತಕರ ಮನೆಗಳ ಮೇಲೆ ಬುಲ್ಡೋಜರ್ ಚಲಾಯಿಸಿ ಮನೆಗಳನ್ನು ನೆಲಸಮ ಮಾಡಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಅಗಾಧ ಪ್ರಮಾಣದ ಇಸ್ರೇಲಿ ಸೈನಿಕರನ್ನು ನಿಯುಕ್ತಿಗೊಳಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲಿಗರನ್ನು ಹತ್ಯೆ ಮಾಡುವ ಪ್ಯಾಲೆಸ್ಟೀನಿಯನ್ನರ ಮನೆಗಳನ್ನು ಕೆಡವುತ್ತಿರುವುದು ಇದೆ ಮೊದಲೇನಲ್ಲ. ಇಸ್ರೇಲಿನಲ್ಲಿ […]
ಉಡುಪಿ: ಜು.30 ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಶೃದ್ಧಾಂಜಲಿ ಸಭೆ
ಉಡುಪಿ: ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ […]
ಉಡುಪಿ ಜಿಲ್ಲಾ ಭಾರತ ಸೇವಾ ದಳ ಸಂಸ್ಥೆ ಅಧ್ಯಕ್ಷ ಸ್ಥಾನ ಚುನಾವಣೆ: ಅಂಡಾರು ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ
ಉಡುಪಿ: ಕರ್ನಾಟಕ ಸರಕಾರದ ಅಂಗ ಸಂಸ್ಥೆಯಾದ ಉಡುಪಿ ಜಿಲ್ಲಾ ಭಾರತ ಸೇವಾ ದಳ ಸಂಸ್ಥೆಗೆ 2022-27 ರ ಸಾಲಿಗೆ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಕೈಗಾರಿಕೋದ್ಯಮ ಮತ್ತು ವಾಣಿಜ್ಯ ಸಂಸ್ಥೆಯ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಹಾಗೂ ಉಪಾಧ್ಯಕ್ಷರಾಗಿ ಉಡುಪಿ ನಗರಸಭಾ ಸದಸ್ಯ ಗಿರೀಶ್ ಎಂ ಅಂಚನ್ ಹಾಗೂ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆರೂರು ತಿಮ್ಮಪ್ಪ ಶೆಟ್ಟಿ ಆಯ್ಕೆಗೊಂಡಿದ್ದು, ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಕಾರ್ಕಳ, ಹಾಗೂ ಖಜಾಂಚಿಯಾಗಿ […]
ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ: ಮಹಿಳಾ ಆಯೋಗದಿಂದ ನೋಟಿಸ್
ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರಿಗೆ ಖುದ್ದು ಹಾಜರಾಗುವಂತೆ ಮತ್ತು ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸಿರುವ ಹೇಳಿಕೆಗಳಿಗೆ ಲಿಖಿತ ವಿವರಣೆಯನ್ನು ನೀಡುವಂತೆ ನೋಟಿಸ್ ಕಳುಹಿಸಿದೆ. ಮುಂದಿನ ತಿಂಗಳು 3ಕ್ಕೆ ವಿಚಾರಣೆ ನಿಗದಿಯಾಗಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಅವರ ಅವಹೇಳನಕಾರಿ ಹೇಳಿಕೆಗಾಗಿ ಚೌಧರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದೆ. ಘಟನೆಯ ವಿವರ: ಸಂಸತ್ತಿನಲ್ಲಿ […]