ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಇತಿಹಾಸ ಸೃಷ್ಟಿ: ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ಭಾರತದ ಸಂಕೇತ್ ಸರ್ಗರ್

ಬರ್ಮಿಂಗ್‌ಹ್ಯಾಮ್‌: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಶನಿವಾರ, ಜುಲೈ 30 ರಂದು ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಆಗುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ. 21 ವರ್ಷ ವಯಸ್ಸಿನ ಸಂಕೇತ್ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪುರುಷರ 55 ಕೆಜಿ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಸಂಕೇತ್ ಸರ್ಗರ್ ಪುರುಷರ 55 ಕೆಜಿ ವಿಭಾಗದಲ್ಲಿ ಒಟ್ಟು 248 ಕೆಜಿ (ಸ್ನ್ಯಾಚ್‌ನಲ್ಲಿ 113 ಕೆಜಿ, ಕ್ಲೀನ್ ಮತ್ತು ಜರ್ಕ್‌ನಲ್ಲಿ 135) ಬೆಳ್ಳಿ ಪದಕ ಗೆದ್ದಿದ್ದಾರೆ. ಒಟ್ಟು […]

ಸಿ.ಇ.ಟಿ ಫಲಿತಾಂಶ: ಪ್ರಥಮ ವರ್ಷದಲ್ಲಿಯೇ ಕಾರ್ಕಳ ಕ್ರಿಯೇಟಿವ್‌ ಪಿಯು ಕಾಲೇಜಿನ ಅಮೋಘ ಸಾಧನೆ

ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ‍್ಯಾಂಕ್‌ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್‌ ಗಳಿಸಿರುತ್ತಾರೆ ಮತ್ತು ಮಧುಶ್ರೀ.ವಿ […]

ಸಿಇಟಿ ಫಲಿತಾಂಶದಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದ ರ‍್ಯಾಂಕುಗಳೊಂದಿಗೆ ಗುರುತಿಸಿಕೊಂಡ ಕಾಲೇಜು ಇದೀಗ ಸಿಇಟಿ ಫಲಿತಾಂಶದಲ್ಲಿ ಅಪೂರ್ವ ಸಾಧನೆ ಮೆರೆದಿದೆ. 2021 – 22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ( ಕೆ-ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀವರ್ಷ (ಎಂಜಿನಿಯರಿಂಗ್- 422 ), ಮನೀಶ್ ಹೆಬ್ಬಾರ್ (ಎಂಜಿನಿಯರಿಂಗ್ – 1090, ಎಗ್ರಿಕಲ್ಚರ್- 287, ವೆರ್ಟನರಿ- 1100, ಬಿಎನ್‌ವೈಎಸ್ -505 ), ಕೀರ್ತನ್ ಕಿಣಿ (ಎಂಜಿನಿಯರಿಂಗ್- 1139), ಯು. […]

ರೈತರಿಗಾಗಿ ಸಾವಯವ ಕೃಷಿ ಉಚಿತ ತರಬೇತಿ ಕಾರ್ಯಕ್ರಮ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸಹಯೋಗದಲ್ಲಿ ಸಾವಯವ ಸಿರಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಸಾವಯವ ಕೃಷಿ ವಿಷಯಕ್ಕೆ ಸಂಬಂಧಿಸಿದ 2 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಹೊಸದಾಗಿ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ತೊಡಗಿಕೊಂಡಿರುವ ಯುವಕ ರೈತರು, ಮಹಿಳೆಯರು ಹಾಗೂ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ಈ ಹಿಂದೆ ತರಬೇತಿ ಪಡೆಯದೇ ಇರುವ ರೈತರೂ ಸಹ ಪಾಲ್ಗೊಳ್ಳಬಹುದಾಗಿದೆ. ಆಸಕ್ತರು ರೈತ ಸಂಪರ್ಕ ಕೇಂದ್ರದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 17 […]

ಉಡುಪಿ ನಗರಸಭೆ: ಹರ್ ಘರ್ ತಿರಂಗ ಅಭಿಯಾನ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ: ಭಾರತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸುವ ಸಲುವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನವನ್ನು ನಗರಸಭಾ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲಾ ಭಾರತ್ ಸೇವಾದಳದ ವತಿಯಿಂದ ಆಗಸ್ಟ್ 1 ರಂದು ಮಧ್ಯಾಹ್ನ 3.30 ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಧ್ವಜ ಹಾಗೂ ಧ್ವಜಾರೋಹಣ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ನಗರಸಭಾ ವ್ಯಾಪ್ತಿಯ ಸಂಘ-ಸಂಸ್ಥೆಗಳ, ಸ್ವ-ಸಹಾಯ ಸಂಘಗಳ ಹಾಗೂ ನಿರಂತರ ಉಳಿತಾಯ ಗುಂಪುಗಳ ಮುಖ್ಯಸ್ಥರು ಕಡ್ಡಾಯವಾಗಿ ಭಾಗವಹಿಸುವಂತೆ […]