ರಾಜೀವನಗರ: ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಋಗ್ ಉಪಾಕರ್ಮ ಕಾರ್ಯಕ್ರಮ

ವಿಶ್ವಕರ್ಮ ಸಮಾಜೋದ್ಧಾರಕ ಸಂಘ ರಾಜೀವನಗರ ಇದರ ವತಿಯಿಂದ ಋಗ್ ಉಪಾಕರ್ಮ ಕಾರ್ಯಕ್ರಮ ಸಂಘದ ಮಾಜಿ ಅಧ್ಯಕ್ಷ ವಾದಿರಾಜ ಆಚಾರ್ಯ ಅವರ ರಾಜೀವನಗರದ ನಿವಾಸದಲ್ಲಿ ಆ.3ರಂದು ನಡೆಯಿತು. ಪುರೋಹಿತ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆದವು. ಈ ಸಂದರ್ಭದಲ್ಲಿ‌ ಸಮಾಜ ಬಾಂಧವರಿಗೆ ಯಜ್ನೋ ಪವಿತ್ರಧಾರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ದಯಾನಂದ ಆಚಾರ್ಯ ಉಪಾಧ್ಯಕ್ಷರಾದ ವಿಶ್ವಮೂರ್ತಿ ಆಚಾರ್ಯ, ಭಾಸ್ಕರ ಆಚಾರ್ಯ, ಕಾರ್ಯದರ್ಶಿ ಗಣೇಶ್ ಆಚಾರ್ಯ ರಾಜೀವನಗರ, ಕೋಶಾಧಿಕಾರಿ ಸೂರಜ್ ಕುಮಾರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ನಿಷೇಧ: ಜಿಲ್ಲಾಧಿಕಾರಿಗಳಿಂದ ದೂರುಗಳ ವಿಚಾರಣೆ

ಉಡುಪಿ: ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕ್ರಿಯೇಟಿವ್‌ ಕಾಲೇಜಿಗೆ ಪ್ರಥಮ ಸ್ಥಾನ

ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್‌ ಶೆಟ್ಟಿ ಮತ್ತು ನಿಹಾರ್‌ ಭಟ್‌ ಪ್ರಥಮ ಸ್ಥಾನ ಗಳಿಸಿದ್ದಾರೆ. ‘ಆಜಾದಿ ಕಾ ಅಮೃತ್‌ ಮಹೋತ್ಸವ್‌’ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 03 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್‌ ಶೆಟ್ಟಿ ಮತ್ತು ನಿಹಾರ್‌ […]

ತೋಟಗಾರಿಕೆ ಇಲಾಖೆಯ ವತಿಯಿಂದ ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳ ಮಾರಾಟ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಹಾಗೂ ಸಾರ್ವನಿಕರ ಬೇಡಿಕೆಗನುಗುಣವಾಗಿ ವಿವಿಧ ತೋಟಗಾರಿಕೆ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ನಿಂಬೆ, ಕರಿಬೇವು ಹಾಗೂ ತೆಂಗಿನ ಸಸಿಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ […]

ಮಂಗಳೂರಿನ ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದ ಅನುಭವ

ಮಂಗಳೂರು: ಇಲ್ಲಿನ ಮೇರಿಹಿಲ್ ಪರಿಸರದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಬುಧವಾರ ಬೆಳಗ್ಗೆ 10.15 ರ ಸುಮಾರಿಗೆ ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದ ಅನುಭವಾಗಿದ್ದು, ಸಾರ್ವಜನಿಕರು ಕಟ್ಟಡಗಳಿಂದ ಹೊರಗೋಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಹೊರಗೆ ಕಳುಹಿಸಲಾಗಿತ್ತು. ಸ್ವಲ್ಪ ಸಮಯದ ಬಳಿಕ ಪಾಠ ಪ್ರವಚನಗಳನ್ನು ಪುನರಾರಂಭಿಸಲಾಗಿದೆ ಎಂದು ವರದಿಯಾಗಿದೆ. ಸ್ಥಳೀಯರು ಭೂಕಂಪನದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಕಳೆದ 24 ಗಂಟೆಗಳಲ್ಲಿ ಮಂಗಳೂರಿನಲ್ಲಿ ಅಥವಾ ಸಮೀಪದಲ್ಲಿ ಯಾವುದೇ ಗಮನಾರ್ಹ ಭೂಕಂಪಗಳು ಸಂಭವಿಸಿಲ್ಲ. ಹಾಗಿದ್ದರೂ […]