ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಅಹೋರಾತ್ರಿ ಭಜನಾ ಸಪ್ತಾಹ

ಉಡುಪಿ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆಯ ಶ್ರೀ ದೇವರ ಸನ್ನಿಧಿಯಲ್ಲಿ ಮಂಗಳವಾರ ಮಹೋತ್ಸವಕ್ಕೆ ದೇವಳದ ಅರ್ಚಕ ವಿನಾಯಕ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು. ಭಜನಾ ಮಂಟಪದ ಶ್ರೀ ವಿಠೋಬಾ ರುಖುಮಾಯಿ ದೇವರ ಸನ್ನಿಧಿಯಲ್ಲಿ ಜೈ ವಿಠಲ್ ಹರಿ ವಿಠಲ್ ನಾಮ ಪಠಿಸುತ್ತಾ ಭಜನೆ ಆರಂಭಗೊಂಡಿತು. ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ ಮತ್ಸ್ಯಾವತಾರ ಅಲಂಕಾರ ಹಾಗೂ ದೇವಾಲಯಕ್ಕೆ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಕ್ಷೇತ್ರದಲ್ಲಿ ಊರಿನ ಹಲವು ಭಜನಾ ಮಂಡಳಿಗಳಿಂದ 7 ದಿನಗಳ ಕಾಲ ಅಹೋ […]
ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡಬಿದ್ರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮೂಡುಬಿದ್ರೆ ಸಮೀಪದ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರು-ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬಂದಾಗ ಕೆಳಗೆ ಉರುಳಿ ಬಿದ್ದು ಅಫಘಾತಕ್ಕೀಡಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ

ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರಾತ, ಮರಾಠ, ಅರೆ ಕ್ಷತ್ರಿ, ಅರೆ ಮರಾಠ, ರ‍್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ, ಕ್ಷತ್ರಿಯ ಮರಾಠ ಹಾಗೂ ಕುಳವಾಡಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಶ್ರೀ ಶಹಜೀರಾಜೇ ಸಮೃದ್ಧಿ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ) ಯೋಜನೆಯಡಿ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ […]
ಜಿಲ್ಲಾ ಕೌಶಲ್ಯಾಭಿವೃದ್ದಿ ಕೇಂದ್ರ: ರಾಜ್ಯದ ಕಟ್ಟಡ ಕಾರ್ಮಿಕರಿಗೆ ದುಬೈನಲ್ಲಿ ಉದ್ಯೋಗಾವಕಾಶ

ಉಡುಪಿ: ದುಬೈನ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮೇಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ ಹೊಸಬರಿಗೆ 18462-20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ.ಸಂ.8310100754,080-29753007, ಈಮೇಲ್ [email protected] ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ: ಹೆಡ್‌ಕಾನ್ಸ್ಟೇಬಲ್ ಸಂತೋಷ್ ಶೆಟ್ಟಿ ಅವರ ಅಧ್ಯಯನ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ

ಉಡುಪಿ: ಪ್ರಸ್ತುತ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಲ್ಲಿ ವಾಹನ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್‌ಕಾನ್ಸ್ಟೇಬಲ್ ಸಂತೋಷ್ ಶೆಟ್ಟಿ ಇವರು ಮಂಡಿಸಿದ ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ-ಒಂದು ಅಧ್ಯಯನ ಎಂಬ ಪ್ರಬಂಧಕ್ಕೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಿ.ಹೆಚ್.ಡಿ ಪದವಿ ನೀಡಿದ್ದು, ಇತ್ತೀಚೆಗೆ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಕೇಂದ್ರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಇವರಿಂದ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ಪಡೆದಿರುತ್ತಾರೆ.