ಮಂಗಳೂರು: ದ್ವಿಚಕ್ರ ವಾಹನದ ಹಿಂಬದಿ ಪುರುಷ ಸವಾರರ ನಿರ್ಬಂಧ ವಾಪಸ್; ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಪೊಲೀಸ್ ಇಲಾಖೆ

ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆಯಿಂದ ಬೈಕ್​ನಲ್ಲಿ ಹಿಂಬದಿ ಪುರುಷ ಸವಾರರಿಗೆ ನಿರ್ಬಂಧಿಸಿದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್​​ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದ ಬಳಿಕ ಜಾರಿಯಲ್ಲಿದ್ದ ರಾತ್ರಿ ನಿಷೇಧಾಜ್ಞೆಯು ಕೂಡಾ ನಾಳೆ ಬೆಳಿಗ್ಗೆ ತೆರವಾಗಲಿದೆ. ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ನಡೆಸಿದ ಸಭೆಯ ಬಳಿಕ ರಾತ್ರಿ ಕರ್ಫ್ಯೂ ಸಡಿಲಿಕೆ ಬಳಿಕ ಬೈಕ್​​ನಲ್ಲಿ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರಂತೆ ಸಂಜೆ 4 […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಕ್ಕಳ ಅಸ್ಥಿ ಮಜ್ಜೆಯ ಕಸಿ ಸೇವೆಗಳು- ನೊಂದ ರೋಗಿಗಳಿಗೆ ಭರವಸೆಯ ಆಶಾಕಿರಣ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು  ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿ, ” ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ ಕ್ಯಾನ್ಸರ್ […]

ನಿರೂಪಕಿಗೆ ಕನ್ನಡ ಸರಿಯಾಗಿ ಉಚ್ಛರಿಸಲು ಕಲಿಸಿದ ಕಿಚ್ಚ ಸುದೀಪ್: ಕನ್ನಡ್ ಅಲ್ಲ ಅದು ಕನ್ನಡ ಎಂದ ಅಭಿನಯ ಚಕ್ರವರ್ತಿ

ಕಿಚ್ಚ ಸುದೀಪ್ ಅಂದ್ರೆ ಹಾಗೇನೆ. ಯಾರೇ ತಪ್ಪು ಮಾಡಿದ್ರೂ ಅವರು ಯಾರನ್ನೂ ಬಿಡುವುದಿಲ್ಲ. ವಿಕ್ರಾಂತ್ ರೋಣ ಸಿನಿಮಾದ ಬಗ್ಗೆ ಕಿಚ್ಚ ಸುದೀಪ್ ಅವರ ಸಂದರ್ಶನ ತೆಗೆದುಕೊಳ್ಳುತ್ತಿದ್ದಾಗ ನಿರೂಪಕಿಯು ‘ಕನ್ನಡ್’ ಎಂದು ಉಚ್ಛರಿಸಿರುವುದನ್ನು ಆಕ್ಷೇಪಿಸಿದ ಸುದೀಪ್, ಅದು ಕನ್ನಡ್ ಅಲ್ಲ ಕನ್ನಡ, ಸರಿಯಾಗಿ ಹೇಳಿ ಎಂದು ನಿರೂಪಕಿಯ ತಪ್ಪನ್ನು ಎತ್ತಿ ತೋರಿದ್ದಾರೆ. ಯಾವ ರೀತಿ ಹಿಂದ್ ಎನ್ನುವುದು ಹಿಂದಿ ಆಗುವುದಿಲ್ಲವೋ ಅದೇ ರೀತಿ ಕನ್ನಡ ಅದು ಕನ್ನಡ್ ಆಗುವುದಿಲ್ಲ. ಇದಕ್ಕೆ ನಿರೂಪಕಿ ಅದನ್ನೇ ನಾವು ಕಲಿಯುತ್ತಾ ಇದ್ದೇವೆ ಎಂದಾಗ, […]

ಜಿಲ್ಲಾ ಬಾಲಕಾರ್ಮಿಕ ಸಲಹಾ ಸಮಿತಿ ಸದಸ್ಯರ ನಾಮನಿರ್ದೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಲಹಾ ಸಮಿತಿಯ ಸದಸ್ಯರನ್ನು 2 ವರ್ಷದ ಅವಧಿಗೆ ನಾಮನಿರ್ದೇಶನ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ಸರ್ಕಾರೇತರ ಸಂಸ್ಥೆ, ಕಾರ್ಮಿಕ ಸಂಘಟನೆ, ಮಾಲಕರ ಸಂಘವನ್ನು ಪ್ರತಿನಿಧಿಸುವ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೆಲಸ ಮಾಡಿರುವ, ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತ ಹಾಗೂ ಮಹಿಳಾ ವರ್ಗಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 8 ರ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಸದಸ್ಯ […]

ಮಂಗಳೂರು: ವಯಸ್ಕ ಪುರುಷರ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇರುವುದಿಲ್ಲ. ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗೆ ಸವಾರಿ ಮಾಡಲು ಅವಕಾಶ ಇರುತ್ತದೆ. ಹಿಂಬದಿ ಸವಾರರಿಂದ ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಇಂಥ ಆದೇಶ ಈಗಾಗಲೇ ಜಾರಿಯಾಗಿದ್ದು, ಅದೇ ರೀತಿ ಇಲ್ಲಿಯೂ ಜಾರಿಗೊಳಿಸುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಯಾವುದೇ ಪುರುಷರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ ಆದರೆ ಇಲ್ಲಿ ಎಲ್ಲಾ […]