ಕಾಪು ಸರ್ಕಾರಿ ಪಾಲಿಟೆಕ್ನಿಕ್ ನ ಡಿಪ್ಲೋಮಾ ಪ್ರವೇಶ ಅವಧಿ ಆಗಸ್ಟ್ 13 ರ ವರೆಗೆ ವಿಸ್ತರಣೆ
ಉಡುಪಿ: ಕಾಪು ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ ದಾಖಲಾತಿಯನ್ನು ಆಗಸ್ಟ್ 13 ರ ವರೆಗೆ ವಿಸ್ತರಿಸಲಾಗಿದೆ. ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೇ ಶೇ.35 ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಆಟೋಮೆಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಎಂಬ ಎರಡು ನೂತನ ಕೋರ್ಸ್ ಗಳಿಗೆ ಬಾಕಿ ಉಳಿದಿರುವ ಸೀಟುಗಳಿಗೆ, ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ […]
ಶ್ರೀರಾಘವೇಂದ್ರ ಮಠದಲ್ಲಿ ಶಿರೂರು ಮಠದ ಶ್ರೀಲಕ್ಷ್ಮೀವರತೀರ್ಥರ 4 ನೇ ವರ್ಷದ ಆರಾಧನೆ
ಉಡುಪಿ ಶ್ರೀಶಿರೂರು ಮಠದ ಯತಿಗಳಾದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 4 ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ರಥಬೀದಿಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಮಠದಲ್ಲಿ ಶಾಸ್ತ್ರೋಕ್ತವಾಗಿ ವೈಭವದಿಂದ ಜರಗಿತು. ಮುಂಜಾನೆ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಉದ್ದಿಶ್ಯ ಶ್ರೀಪಾದರ ಪೂರ್ವಾಶ್ರಮದ ಕುಟುಂಬಿಕರು ಹಾಗೂ ಭಕ್ತವೃಂದದ ವತಿಯಿಂದ ಶ್ರೀರಾಘವೇಂದ್ರಗುರುಸಾರ್ವಭೌಮರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ವೇದಮೂರ್ತಿ ಶ್ರೀಸುಬ್ರಹ್ಮಣ್ಯ ಆಚಾರ ಮತ್ತು ಬಳಗದವರಿಂದ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮ ಜರಗಿತು. ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಮೃತ್ತಿಕಾವೃಂದಾವನಕ್ಕೆ ಶ್ರೀಕೃಷ್ಣಮುಖ್ಯ ಪ್ರಾಣದೇವರ ಹಾಗೂ ಶ್ರೀ ರಾಘವೇಂದ್ರಗುರುಗಳ ತೀರ್ಥ, ಪಂಚಾಮೃತ […]
ಮಾನವ ಶ್ರಮ ಬಳಸಿ ಮರಳು ತೆರವುಗೊಳಿಸುವವರ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಉಡುಪಿ: ಜಿಲ್ಲೆಯಲ್ಲಿ ಈ ಹಿಂದೆ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮ ಬಳಸಿ ಮರಳು ತೆರವುಗೊಳಿಸಿರುವವರ ಪಟ್ಟಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ನೂತನ ಜಿಲ್ಲಾ ವಕ್ಫ್ ಸಲಹಾ ಸಮಿತಿ ರಚನೆ
ಉಡುಪಿ: ಜಿಲ್ಲೆಯಲ್ಲಿ ನೂತನವಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ರಚನೆ ಆಗಿದ್ದು, ಮಂಡಳಿಯ ಅಧ್ಯಕ್ಷರಾಗಿ ಸಿ.ಹೆಚ್.ಅಬ್ದುಲ್ ಮುತಾಲ್ಲಿ ಅವರು ಬುಧವಾರ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಅಧಿಕಾರಿ ಎಂ.ಅಬೂಬಕ್ಕರ್, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಮೊಹಮ್ಮದ್ ಅಬ್ದುಲ್ ಸುಬ್ಹಾನ್, ಬದ್ರುದ್ದೀನ್ ತೌಫೀಖ್, ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ ಮತ್ತು ಅಫ್ಸರ್ ಉಚ್ಚಿಲ ಹಾಗೂ ಸದಸ್ಯರುಗಳಾದ ಶೇಖ್ ಆಸೀಫ್ ಕಟಪಾಡಿ, ಜುನೈದ್, ಆದಮ್ ಸಾಹೇಬ್, ಅಬೂಬಕ್ಕರ್ ಹಸನಾರ್, ಸುಬ್ಹಾನ್ ಹೊನ್ನಾಳ […]
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ ಸಾಲ ಸೌಲಭ್ಯ
ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಜನಾಂಗ ಮತ್ತು ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ https://suvidha.karnataka.gov.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ […]