ಪ್ರವೀಣ್ ನೆಟ್ಟಾರ್ ಮನೆಗೆ ಯಶ್ ಪಾಲ್ ಸುವರ್ಣ ಭೇಟಿ
ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಬಲಿಯಾದ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್ ರವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಿಂದೂ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವೈಯುಕ್ತಿಕ ನೆಲೆಯಲ್ಲಿ 1 ಲಕ್ಷ ಚೆಕ್ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಪ್ರವೀಣ್ ಪೂಜಾರಿ ಹಿರೇಬೆಟ್ಟು, ಪ್ರಶಾಂತ್ ಕಾಂಚನ್, ಮಂಜು ಕೊಳ, ಶೇಖರ್ ಶೆಟ್ಟಿ ಹಿರಿಯಡ್ಕ, ಬಾಲಕೃಷ್ಣ […]
ತೆಂಕನಿಡಿಯೂರು ಗ್ರಾಮ: ಸ್ಥಿರಾಸ್ತಿ ಹರಾಜು
ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ಸ.ನಂ. 116/25 ರಲ್ಲಿರುವ 0.60 ಎಕ್ರೆ ಸ್ಥಿರಾಸ್ತಿಯನ್ನು ರಾಜ್ಯ ಭೂಕಂದಾಯ ಕಾಯಿದೆಯನ್ವಯ ಆಗಸ್ಟ್ 30 ರಂದು ಬೆಳಗ್ಗೆ 11 ಗಂಟೆಗೆ ನಗರದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಉಡುಪಿ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಸಕ್ತ ಸಾಲಿನ ಆಗಸ್ಟ್ ತಿಂಗಳಿನಲ್ಲಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕಗಳು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ಕೂಡ ಲಭ್ಯವಿದ್ದು, ನಮ್ಮ […]
ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ: ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ
ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 7 ಅಧಿಸೂಚಿತ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸಾರ್ವಜನಿಕರು ಹಾಗೂ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚಿತ ಸಂಸ್ಥೆಗಳು: ಉಡುಪಿ ತಾಲೂಕು ಕುಂಜೂರು ಶ್ರೀ ದುರ್ಗಾದೇವಿ ದೇವಸ್ಥಾನ ಹಾಗೂ ಮರ್ಣೆ ಶ್ರೀ ಅಬ್ಬಗದಾರಗ ಬೂತ ದೇವಸ್ಥಾನ, ಕುಂದಾಪುರದ ಹಾರ್ದಳ್ಳಿ- ಮಂಡಳ್ಳಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಂಬದಕೋಣೆ ಶ್ರೀ ಕೊಕ್ಕೇಶ್ವರ […]