ಡಿಸೆಂಬರ್ ಅಂತ್ಯದೊಳಗೆ 1.5 ಲಕ್ಷ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ನಿರ್ಮಾಣ: ಕೇಂದ್ರ ಸರ್ಕಾರ

ನವದೆಹಲಿ: 1.50 ಲಕ್ಷ ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು (ಎಬಿ-ಎಚ್‌ಡಬ್ಲ್ಯೂಸಿ) ಸ್ಥಾಪಿಸುವ ಗುರಿ ಈ ವರ್ಷದ ಡಿಸೆಂಬರ್‌ ವೇಳೆಗೆ ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಶುಕ್ರವಾರ ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯ ಮಂಡಿಸಿದ ಆರೋಗ್ಯ ಹಕ್ಕು ಮಸೂದೆ 2021 ರ ಶಾಸನದ ಮೇಲಿನ ಚರ್ಚೆಯಲ್ಲಿ ಉತ್ತರಿಸಿದ ಡಾ ಮಾಂಡವೀಯ, ದೇಶದಲ್ಲಿ ಒಟ್ಟು 1.50 ಲಕ್ಷ ಕೇಂದ್ರಗಳನ್ನು ಸ್ಥಾಪಿಸುವ ಗುರಿಯಿದ್ದು, ಈಗಾಗಲೇ ಒಂದು ಲಕ್ಷ 22 ಸಾವಿರ ಕೇಂದ್ರಗಳು […]

ಕಡಿಯಾಳಿ: ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಕುಂಕುಮಾರ್ಚನೆ ಕಾರ್ಯಕ್ರಮ

ಉಡುಪಿ: ವಿಶ್ವ ಹಿಂದೂ ಪರಿಷತ್ ಹಾಗೂ ಮಾತೃ ಮಂಡಳಿ ಕಡಿಯಾಳಿ ಇದರ ಜಂಟಿ ಆಶ್ರಯದಲ್ಲಿ 38 ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಕುಂಕುಮಾರ್ಚನೆಯು ಶುಕ್ರವಾರ ಆಗಸ್ಟ್ 5 ರಂದು ಕಾತ್ಯಾಯಿನಿ ಮಂಟಪದಲ್ಲಿ ಜರುಗಿತು. ಪಾಡಿಗಾರು ಶ್ರೀನಿವಾಸ ತಂತ್ರಿ ಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕ ವೃಂದದವರು ನೆರವೇರಿಸಿದರು. ನೂರಾರು ಮುತ್ತೈದೆಯರು ಸಾಮೂಹಿಕ ಕುಂಕುಮಾರ್ಚನೆ ನಡೆಸಿ ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡರು. ಸಭಾ ಕಾರ್ಯಕ್ರಮದಲ್ಲಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಕಟ್ಟೆ ರವಿರಾಜ್ […]

ಉಡುಪಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ 2021-22 ನೇ ಸಾಲಿನ ಸಾಧನಾ ಪ್ರಶಸ್ತಿ

ಉಡುಪಿ: 2021-22 ನೇ ಸಾಲಿನ ವ್ಯವಹಾರದಲ್ಲಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಸಾಧಿಸಿರುವ ಸರ್ವತೋಮುಖ ಪ್ರಗತಿಗೆ ಮೆಚ್ಚುಗೆಯ ಸಂಕೇತವಾಗಿ 2021-22 ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಮಂಜುನಾಥ ಶೆಟ್ಟಿ ಇವರನ್ನು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ ಸನ್ಮಾನಿಸಿ 2021-22 ನೇ ನೇ ಸಾಲಿನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ […]

ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಸದಸ್ಯರ ಆಯ್ಕೆ

ಉಡುಪಿ: ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಉಡುಪಿ ಜಿಲ್ಲೆಯ ಪದಾಧಿಕಾರಿಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಜಿಲ್ಲಾಉಪಾಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಆಯ್ಕೆಯಾಗಿದ್ದರೆ, ಜಿಲ್ಲಾಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಮತ್ತು ಅನಿತಾ ಶ್ರೀಧರ್ ಹಾಗೂ ಜಿಲ್ಲಾ ವಕ್ತಾರರಾಗಿ ಕೆ. ರಾಘವೇಂದ್ರ ಕಿಣಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಮಂಗಳೂರು: ಎಲ್.ಐ.ಸಿ ಮಂಗಳೂರು ಶಾಖೆಯ ಅಭಿವೃದ್ಧಿಅಧಿಕಾರಿ ಜಗದೀಶ್.ವಿ.ಗೋಳಿ ಬೀಳ್ಕೊಡುಗೆ ಕಾರ್ಯಕ್ರಮ

ಮಂಗಳೂರು: ಎಲ್.ಐ.ಸಿ ವತಿಯಿಂದ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಐ.ಸಿ ಮಂಗಳೂರು ಪ್ರಥಮ ಶಾಖೆಯ ಅಭಿವೃದ್ಧಿ ಅಧಿಕಾರಿ ಜಗದೀಶ್ ವಿ ಗೋಳಿ ಅವರನ್ನು ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಶಾಖೆಯ ಹಿರಿಯ ಪ್ರಬಂಧಕ ತುಳಸೀದಾಸ್ ವಿ.ಪವಸ್ಕರ್‌ ಮಾತನಾಡಿ, ಜೀವವಿಮಾ ನಿಗಮದ ಬೆಳವಣಿಗೆಯಲ್ಲಿ ಜಗದೀಶ್‌ ಅವರ ಕೊಡಗೆ ಅಪಾರ ಎಂದು ಸ್ಮರಿಸಿದರು. ಈ ಸಂದರ್ಭದಲ್ಲಿ ಜಗದೀಶ್.ವಿ.ಗೋಳಿ ದಂಪತಿ ಮತ್ತು ಮಕ್ಕಳನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡುವ ಮೂಲಕ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಗದೀಶ್.ವಿ.ಗೋಳಿ, “ಸಂಸ್ಥೆಯಿಂದ ನಾನು ಬಹಳಷ್ಟು ಅನುಭವಗಳನ್ನು ಪಡೆದುಕೊಂಡಿದ್ದೇನೆ. […]