ಸೈಂಟ್ ಸಿಸಿಲಿ ಕನ್ನಡ ಮಾಧ್ಯಮ ಶಾಲೆಗೆ ಕುಡಿಯುವ ಶುದ್ಧ ನೀರಿನ ಘಟಕ ಹಸ್ತಾಂತರ

ಉಡುಪಿ: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಉಡುಪಿ ಮತ್ತು ಇಂಡಿಯನ್ ಸೀನಿಯರ್ ಚೇಂಬರ್ ಮಣಿಪಾಲ ಘಟಕದ ವತಿಯಿಂದ ಸೈಂಟ್ ಸಿಸಿಲಿ ಕನ್ನಡ ಮಾಧ್ಯಮ ಶಾಲೆಗೆ ಕುಡಿಯುವ ಶುದ್ಧ ನೀರಿನ ಘಟಕವನ್ನು ಆಗಸ್ಟ್ 5 ರಂದು ನೀಡಲಾಯಿತು. ತಮ್ಮ ಸಹೋದರಿ ದಿ. ಶ್ರೀಮತಿ ಗುಲಾಬಿ.ಬಿ.ಪೂಜಾರಿ ಇವರ ಸ್ಮರಣಾರ್ಥ ರಾಮ ಪೂಜಾರಿ ಹಾವಂಜೆಯವರು  ನೀರಿನ ಘಟಕವನ್ನು ಶಾಲೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸೀನಿಯರ್ ಚೇಂಬರ್ ನ ಚಿತ್ರಕುಮಾರ್, ಬಿಂದು, ಕೇರಳ ಕಲ್ಚರಲ್ ಸೊಸೈಟಿಯ ಅಧ್ಯಕ್ಷೆ ಶೈನಿ, ಸದಸ್ಯರಾದ […]

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತ ವ್ಯಾಸಾಂಗಕ್ಕೆ ವಿದ್ಯಾರ್ಥಿ ವೇತನ ಹಾಗೂ ಫೆಲೋಶಿಪ್ ಸೌಲಭ್ಯ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಜಿ ವ್ಯಾಸಂಗ ಮಾಡಲು ಅನುಕೂಲವಾಗುವಾಗುವಂತೆ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯಲು http://103.138.196.8/nos ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣೆ ಸಂಖ್ಯೆ: 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆಲೋಶಿಪ್ ಸೌಲಭ್ಯ: […]

ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸಿ ಸ್ವಾತಂತ್ರ‍್ಯ ಹೋರಾಟಕ್ಕೆ ನಿಜವಾದ ಗೌರವ ಸಲ್ಲಿಸಿ: ಸುನೀಲ್ ಕುಮಾರ್

ಉಡುಪಿ: ದೇಶಕ್ಕೆ ಸ್ವಾತಂತ್ಯ್ರ ಸಿಗುವಾಗ ನಾವ್ಯಾರೂ ಹುಟ್ಟಿರಲಿಲ್ಲ, ನಾವು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಿಲ್ಲ, ಈಗ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಸದವಕಾಶ ಸಿಕ್ಕಿದೆ. ಆದ್ದರಿಂದ 3 ದಿನಗಳ ಕಾಲ ಸಂಪೂರ್ಣವಾಗಿ ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ಸ್ವಾತಂತ್ರ‍್ಯ ಹೋರಾಟಕ್ಕೆ ನಿಜವಾದ ಗೌರವವನ್ನು ಸಲ್ಲಿಸಬೇಕು. ಪ್ರತಿಯೊಂದು ಮನೆಯಲ್ಲಿಯೂ ದೇವರ ಪೂಜೆಯಷ್ಟೇ ಗೌರವದಿಂದ ಮನೆಮಂದಿ ಸೇರಿ ಸಿಹಿ ವಿತರಿಸಿ ರಾಷ್ಟ್ರಗೀತೆ ಹಾಡಿ ಸಂಭ್ರಮದಿಂದ ಧ್ವಜಾರೋಹಣ ನಡೆಸಬೇಕು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ […]

ಸ್ವಾತಂತ್ರ್ಯ ದಿನದವರೆಗೆ ರಜಾದಿನಗಳಲ್ಲೂ ತೆರೆದಿರಲಿವೆ ಅಂಚೆ ಕಚೇರಿಗಳು: ಹರ್ ಘರ್ ತಿರಂಗ ಅಭಿಯಾನಕ್ಕಾಗಿ ವ್ಯವಸ್ಥೆ

ನವದೆಹಲಿ: ಹರ್ ಘರ್ ತಿರಂಗ ಅಭಿಯಾನದ ಅಡಿಯಲ್ಲಿ ರಾಷ್ಟ್ರೀಯ ಧ್ವಜಗಳ ಮಾರಾಟ ಮತ್ತು ವಿತರಣೆಗೆ ಅನುಕೂಲವಾಗುವಂತೆ ದೇಶದಾದ್ಯಂತ ಎಲ್ಲಾ ಅಂಚೆ ಕಛೇರಿಗಳು ಸ್ವಾತಂತ್ರ್ಯ ದಿನದ ಮೊದಲಿನ ಎಲ್ಲಾ ರಜಾದಿನಗಳಲ್ಲಿ ತೆರೆದಿರುತ್ತವೆ. ಈ ಬಗ್ಗೆ ಸಂಪರ್ಕ ಸಚಿವಾಲಯವು ಪ್ರಕಟಣೆ ಹೊರಡಿಸಿದ್ದು, ಈ ತಿಂಗಳ 7, 9 ಮತ್ತು 14 ರಂದು ಅಂಚೆ ಕಚೇರಿಗಳಲ್ಲಿ ಕನಿಷ್ಠ ಒಂದು ಕೌಂಟರ್ ಮೂಲಕ ರಾಷ್ಟ್ರಧ್ವಜಗಳ ಮಾರಾಟಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದೆ. ಎಲ್ಲಾ ವಿತರಣಾ ಅಂಚೆ ಕಚೇರಿಗಳಲ್ಲಿ ರಾಷ್ಟ್ರೀಯ ಧ್ವಜಗಳನ್ನು ತಲುಪಿಸಲು […]

ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚ್‌ನಲ್ಲಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆ ಪ್ರಾರಂಭ

ಉಡುಪಿ: ಕಲ್ಮಾಡಿಯಲ್ಲಿರುವ ಅವರ್ ಲೇಡಿ ವೆಲ್ಲಂಕಣಿ ಮಾತೆಯ ಕೇಂದ್ರವನ್ನು ಧರ್ಮಪ್ರಾಂತ್ಯದ ಪುಣ್ಯಕ್ಷೇತ್ರವಾಗಿ ಘೋಷಣೆ ಮಾಡುವ ತಯಾರಿಯಲ್ಲಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗಳು ಆಗಸ್ಟ್ 6 ಶನಿವಾರದಂದು ಪ್ರಾರಂಭವಾಯಿತು. ಕಲ್ಯಾಣಪುರದ ಅವರ್ ಲೇಡಿ ಆಫ್ ಮಿರಾಕಲ್ಸ್ ಕ್ಯಾಥೆಡ್ರಲ್‌ನ ರೆ.ಫಾ. ರೆಕ್ಟರ್ ವಲೇರಿಯನ್ ಮೆಂಡೋನ್ಸಾ ಧ್ವಜಾರೋಹಣ ನೆರವೇರಿಸಿ ಮೊದಲ ದಿನದ ನೊವೆನಾ ಪ್ರಾರ್ಥನೆ ನಡೆಸಿದರು. ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರು ವಂ ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರು ವಂ. ರೋಯ್ ಲೋಬೊ, ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಅಂದ್ರಾದೆ, […]