ಆಗಸ್ಟ್ 15 ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಗಸ್ಟ್ 15 ರಂದು ಅಪರಾಹ್ನ 2 ಗಂಟೆಗೆ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಚಿತ್ರಕಲೆ, ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜಿಲ್ಲಾ ಬಾಲಭವನ ಬ್ರಹ್ಮಗಿರಿಯಲ್ಲಿ ನಡೆಸಲಾಗುತ್ತಿದ್ದು ಆಸಕ್ತರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ: 0820-2574978 ಹಾಗೂ 0820-2574972 ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ: 31 ಡಿಸೆಂಬರ್ 2024 ರವರೆಗೆ ಮುಂದುವರಿಕೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) – ಸರ್ವರಿಗೂ ವಸತಿ ಯೋಜನೆಯನ್ನು 31 ಡಿಸೆಂಬರ್ 2024 ರವರೆಗೆ ಮುಂದುವರಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈಗಾಗಲೇ ಮಂಜೂರಾಗಿರುವ 122 ಲಕ್ಷ ಮನೆಗಳನ್ನು 2022ರ ಮಾರ್ಚ್ 31ರವರೆಗೆ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ನೋಡಲ್ ಏಜೆನ್ಸಿಗಳ ಮೂಲಕ ದೇಶದ ನಗರ ಪ್ರದೇಶಗಳಲ್ಲಿನ ಎಲ್ಲಾ ಅರ್ಹ ಫಲಾನುಭವಿಗಳಿಗೆ ಎಲ್ಲಾ ಹವಾಮಾನದ ಪಕ್ಕಾ ಮನೆಗಳನ್ನು ಒದಗಿಸಲು ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರಮುಖ […]

ಸಿ.ಎ ಫೌಂಡೇಶನ್ ಫಲಿತಾಂಶ: ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್‌ ಚಾರ್ಟಡ್‌ ಎಕೌಂಟೆಂಟ್ಸ್ ಆಫ್‌ ಇಂಡಿಯಾವು ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾಣಿಜ್ಯ ವಿಭಾಗದ 6 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮೀಡಿಯೆಟ್ ಹಂತಕ್ಕೆ ಅಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ಪ್ರಭು (342/400), ರಶ್ಮಿತಾ (234/400), ಶೆಟ್ಟಿ ಪ್ರೀತೇಶ್ (227/400), ರಾಹುಲ್ (216/400), ಛಾಯ.ಸಿ.ಪೈ (215/400), ಶ್ರೀನಿಧಿ ಭಟ್(200/400) ಅಂಕ ಗಳಿಸಿರುತ್ತಾರೆ. ಸಂಸ್ಥೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು […]

ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ ಅಭಿಯಾನ: ಜಿಲ್ಲಾ ಬಿಜೆಪಿ ವತಿಯಿಂದ ರಾಷ್ಟ್ರಧ್ವಜ ವಿತರಣೆ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೂಚನೆಯಂತೆ ‘ಮನೆ ಮನೆಗಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಭೇಟಿಯಾಗಿ ರಾಷ್ಟ್ರಧ್ವಜವನ್ನು ಹಸ್ತಾಂತರಿಸಲಾಯಿತು. ಮಣಿಪಾಲ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಹೆಚ್.ಎಸ್. ಬಲ್ಲಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ವಿದ್ವಾಂಸ ಬನ್ನಂಜೆ ಬಾಬು […]

18 ವರ್ಷ ಮೇಲ್ಪಟ್ಟ ಬೂಸ್ಟರ್ ಡೋಸ್ ಅರ್ಹತೆಯುಳ್ಳವರಿಗೆ ಬಹು ಆಯ್ಕೆ ಲಭ್ಯ: ಕೋರ್ಬೆವಾಕ್ಸ್ ಪರಿಗಣಿಸಲು ಕೇಂದ್ರ ಮಾರ್ಗಸೂಚಿ

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೋರ್ಬೆವಾಕ್ಸ್ ನೊಂದಿಗೆ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ನ ಭಿನ್ನ ಆಯ್ಕೆಯು ಲಭ್ಯವಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಜನರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನೀಡಿದ ದಿನಾಂಕದಿಂದ ಆರು ತಿಂಗಳ ನಂತರ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವಾಕ್ಸ್ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ. ಅಂದರೆ, ಈ ಹಿಂದೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ನ ಎರಡೂ ಡೋಸೇಜ್ […]