ರಜತಾದ್ರಿ: 1947 ರ ಸ್ವಾತಂತ್ರ್ಯ ಸಂದರ್ಭದ ದೇಶ ವಿಭಜನೆಯ ಛಾಯಾಚಿತ್ರ ಪ್ರದರ್ಶನ

ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ, 1947 ರ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಕುರಿತು ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎಸ್ ಇಂದು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಾರ್ತಾಧಿಕಾರಿ ಮಂಜುನಾಥ್ ಬಿ. ವಾರ್ತಾ ಸಹಾಯಕರಾದ ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]
ಕುಂಜಾರುಗಿರಿ: ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರಿಂದ ಭಕ್ತರಿಗೆ ಉಚಿತ ರಾಷ್ಟ್ರಧ್ವಜ ವಿತರಣೆ

ಉಡುಪಿ: ಶ್ರೀ ಕ್ಷೇತ್ರ ಕುಂಜಾರುಗಿರಿ ದುರ್ಗಾ ದೇವಸ್ಥಾನದಲ್ಲಿ, ಚಾತುರ್ಮಾಸ ವೃತ ಸಂಕಲ್ಪಿತರಾದ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಗಿರಿಬಳಗದ ವತಿಯಿಂದ ಉಚಿತವಾಗಿ ರಾಷ್ಟ್ರಧ್ವಜವನ್ನು ಭಕ್ತರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಬಂಧಕರಾದ ರಾಜೇಂದ್ರ ರಾವ್, ಗಿರಿಬಳಗದ ಅಧ್ಯಕ್ಷರಾದ ಪುಂಡರೀಕಾಕ್ಷ ಭಟ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಮಂಗಳೂರು: ತ್ರಿಶಾ ಕಾಲೇಜ್ ವಿದ್ಯಾರ್ಥಿಗಳಿಂದ ಹರ್ ಘರ್ ತಿರಂಗಾ ಅಭಿಯಾನ

ಮಂಗಳೂರು: ನಮ್ಮ ದೇಶ ಸ್ವತಂತ್ರಗೊಂಡು 75 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಈ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ‘ಹರ್ ಘರ್ ತಿರಂಗಾ’ ಅಭಿಯಾನವು ರಾಷ್ಟ್ರವ್ಯಾಪಿ ನಡೆಯುತ್ತಿದೆ. ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಎಂಡ್ ಮ್ಯಾನೇಜ್ ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಈ ಅಭಿಯಾನವನ್ನು ಕೈಗೊಂಡರು. ತ್ರಿಶಾ ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್ ನ ವಿದ್ಯಾರ್ಥಿಗಳು ಕುದ್ರೋಳಿ ಹಾಗೂ ಅಳಕೆಯ ಹಲವಾರು […]
ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಆಚರಣೆ

ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚ್ ಕರಾವಳಿ ಕರ್ನಾಟಕದ ಭಕ್ತರಿಗೆ ಚಿರಪರಿಚಿತ ಮತ್ತು ಎಲ್ಲಾ ಧರ್ಮದ ಜನರು ಭೇಟಿ ನೀಡುವ ಸ್ಥಳವಾಗಿದೆ. ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬಲ ಭಾಗದಲ್ಲಿರುವ ಚರ್ಚ್ ರಾಷ್ಟ್ರೀಯ ಹೆದ್ದಾರಿ 66 (ಕರಾವಳಿ ಬೈ-ಪಾಸ್) ನಿಂದ ಕೇವಲ 3 ಕಿಮೀ ದೂರದಲ್ಲಿದೆ. ಅರಬ್ಬಿ ಸಮುದ್ರಕ್ಕೆ ಸಮೀಪದಲ್ಲಿರುವ ಈ ಚರ್ಚ್ ಅನ್ನು’ಸ್ಟೆಲ್ಲಾಮಾರಿಸ್’ ಅಂದರೆ ‘ಸಮುದ್ರದತಾರೆ’ ಎಂದು ಕರೆಯುತ್ತಾರೆ. ಮೊದಲು, ಕಲ್ಮಾಡಿಯ ಜನರು ತಮ್ಮ ಆಧ್ಯಾತ್ಮಿಕ ಅಗತ್ಯತೆಗಳಿಗಾಗಿ ತೊಟ್ಟಂ ಅಥವಾ ಉಡುಪಿಯ ಚರ್ಚಿಗೆ ಭೇಟಿ ನೀಡಬೇಕಾಗಿತ್ತು. ಹೀಗಾಗಿ […]
ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತ್ರಿಶಾ ಕ್ಲಾಸಸ್ ವಿದ್ಯಾರ್ಥಿಗಳ ಅತುತ್ತಮ ಸಾಧನೆ

ಉಡುಪಿ: 2022ರ ಜೂನ್ ತಿಂಗಳಲ್ಲಿ ನಡೆಸಿದ ಸಿಎ ಫಂಡೇಶನ್ ಪರೀಕ್ಷೆಯಲ್ಲಿ ತ್ರಿಶಾ ಕ್ಲಾಸಸ್ನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದ್ದು ಒಟ್ಟು 130 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಸಿಎ ಫೌಂಡೇನ್ ಪರೀಕ್ಷೆಯಲ್ಲಿ ತೇರ್ಗಡೆಯಾದವರು: ತ್ರಿಶಾ ಕ್ಲಾಸಸ್ ಉಡುಪಿಯಿಂದ ಪ್ರಣವ್ ಪಂಡಿತ್(303),ಕ್ರಿಜ಼ೇನ್ ಮೋನಿಸ್(299), ಅಶ್ವಿನಿ ಮೋಹನ್ ಭಟ್(284), ಮೌನಾ ಪಿ ಎಲ್(282), ಸೃಜನ್ ಎಸ್(281), ಅಚ್ಯುತ್ ಎಸ್ ಕಾಮತ್(273), ಸುಮಾ(270), ಕೀರ್ತನ್ ಇ ಶೆಣೈ(259), ಭಕ್ತಿ ಭಾಸ್ಕರ್ ಹೆಗ್ಡೆ(243), ಪ್ರಜ್ಞಾ ಶಾನಭಾಗ್(239), ಎಸ್ ಮಹೇಶ್ ನಾಯಕ್(237), ಅಭಯ್ ಬಲ್ಜೇಕರ್(236), ಸ್ಟಾನಡ್ […]