75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆ..
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆ..
ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವ: ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆಗೆ ರಘುಪತಿ ಭಟ್ ರಿಂದ ಚಾಲನೆ
ಉಡುಪಿ: ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಸಂದರ್ಭ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಆದಿವುಡುಪಿ ಜಂಕ್ಷನ್ ನಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ಹೊಸ ವರುಷದಂದು ಕಲ್ಮಾಡಿ ಚರ್ಚಿಗೆ ಭೇಟಿ ನೀಡುತ್ತಿದ್ದನ್ನು ಅವರು ನೆನಪಿಸಿಕೊಂಡರು. ಉಡುಪಿ ಧರ್ಮಕ್ಷೇತ್ರದಲ್ಲಿ ಅತ್ತೂರು, ಕೆರೆಕಟ್ಟೆ ಬಳಿಕ […]
ಹರ್ ಘರ್ ತಿರಂಗಾ ಅಭಿಯಾನ: ತ್ರಿವರ್ಣದ ಬೆಳಕಲ್ಲಿ ಕನಕ ಗೋಪುರ ಝಗಮಗ
ಉಡುಪಿ: ಇಲ್ಲಿನ ರಥಬೀದಿಯ ಕನಕ ಗೋಪುರ ತ್ರಿವರ್ಣಗಳಿಂದ ಝಗಮಗಿಸುತ್ತಿದೆ. ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ವರ್ಣದಲ್ಲಿ ಶೋಭಿಸುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಮತ್ತು ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಕೃಷ್ಣ ಮಠದ ಕನಕ ಗೋಪುರ ತ್ರಿವರ್ಣದೊಂದಿಗೆ ಝಗಮಗಿಸುವಂತೆ ಮಾಡಲಾಗಿದ್ದು, ಶನಿವಾರದಿಂದ ಸೋಮವಾರ ವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರ ವರೆಗೆ ವಿಶೇಷ […]
ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್ ನಲ್ಲಿ ಒಲಿಂಪಸ್ 2022 ವಾಣಿಜ್ಯ ದಿನಾಚರಣೆ
ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್ ವತಿಯಿಂದ ಅಂತರ್ ತರಗತಿಯ ‘ವಾಣಿಜ್ಯ ದಿನಾಚರಣೆ – ಒಲಿಂಪಸ್ 2022’ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆ ಶ್ರೀಮತಿ ಯಶಸ್ವಿನಿ ಯಶ್ಪಾಲ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಈ ರೀತಿಯ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಅದರಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ […]
ಕೊಪ್ಪ: ಅಂಚೆ ಕಚೇರಿ ನೌಕರ ಸದಾಶಿವ ಬಂಗೇರರವರಿಗೆ ಬೀಳ್ಕೊಡುಗೆ
ಕೊಪ್ಪ: ಕೆ.ಬಿ ಸದಾಶಿವ ಬಂಗೇರ ಇವರು ಅಂಚೆ ನೌಕರರಾಗಿ 42 ವರ್ಷ ಕೊಪ್ಪ ಪ್ರಧಾನ ಅಂಚೆ ಕಚೇರಿಯಲ್ಲಿ ಸೇವೆ ಸಲ್ಲಿಸಿ, ಜುಲೈ 30 ರಂದು ನಿವೃತ್ತಿ ಹೊಂದಿದ್ದು, ಈ ಸಂದರ್ಭ ಅವರನ್ನು ಕೊಪ್ಪ ಪ್ರಧಾನ ಅಂಚೆ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂಚೆ ಕಚೇರಿಯ ಪಾಲಕರಾದ ಶ್ರೀಮತಿ ಸುಮನ, ಅನುರಾಧಾ, ಅಕೌಂಟೆಂಟ್ ವಾಸುದೇವ ಹಾಗೂ ದಿನೇಶ್, ಪಣಿಕುಮಾರ್ ಹಾಗೂ ಅಂಚೆ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸದಾಶಿವ ಬಂಗೇರರವರ ಪತ್ನಿ ಮಲ್ಲಿಕಾ, ಮಕ್ಕಳಾದ ಸ್ವರೂಪ್, ಸ್ವಾತಿ, ಪೂರ್ಣಿಮಾ, ಮೊಮ್ಮಗು ರಾಶ್ವಿ […]