ಮಣಿಪಾಲ: ಮಾಹೆ ಸಂಸ್ಥೆಗಳ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆ

ಮಣಿಪಾಲ: ಮಾಹೆಯ ಉನ್ನತ ಶಿಕ್ಷಣ ಅಕಾಡೆಮಿ ವತಿಯಿಂದ ದೇಶಭಕ್ತಿ ತುಂಬಿದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಾಹೆಯ ಕುಲಪತಿ ಡಾ.ಎಚ್.ಎಸ್. ಬಲ್ಲಾಳ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ,1955 ರ ವಿಲ್ಲಿಸ್ ಜೀಪ್ ನಲ್ಲಿ ಒಟ್ಟು ಇಪ್ಪತ್ಮೂರು ತುಕಡಿಗಳು ಭಾಗವಹಿಸಿದ್ದ ಪರೇಡ್‌ ತಂಡಗಳ ಪರಿಶೀಲನೆ ನಡೆಸಿದರು. ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಮಾಹಿತಿ-ತಂತ್ರಜ್ಞಾನ, ಬ್ಯಾಂಕಿಂಗ್ ತಂತ್ರಜ್ಞಾನ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತವು ಹೇಗೆ ಮುನ್ನಡೆಯುತ್ತದೆ ಎಂಬ […]

ಮಾಜಿ ಸೈನಿಕರ ಹುತಾತ್ಮ ವೇದಿಕೆಗೆ ಸಚಿವ ಅಂಗಾರ ಭೇಟಿ; ಹುತಾತ್ಮರಿಗೆ ವಂದನೆ ಸಲ್ಲಿಕೆ

ಉಡುಪಿ: ಅಜ್ಜರಕಾಡಿನ ಮಾಜಿ ಸೈನಿಕರ ಹುತಾತ್ಮ ವೇದಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಭೇಟಿ ನೀಡಿ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇನಾಯತ್ ಆರ್ಟ್ ಗ್ಯಾಲರಿ ವತಿಯಿಂದ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜನೆ

ಕುಂಜಿಬೆಟ್ಟು: ಇಲ್ಲಿನ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ಜರುಗಿತು. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಇನಾಯತ್ ಆರ್ಟ್ ಗ್ಯಾಲರಿ ವತಿಯಿಂದ ಮಕ್ಕಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕುರಿತು ಚಿತ್ರಕಲೆ ಸ್ಫರ್ಧೆ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಟಿ ಸಿದ್ದಲಿಂಗಪ್ಪ ಕಲಾವಿದರ ಚಿತ್ರಕಲಾ ಪ್ರದರ್ಶನ ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕಲೆ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಆರ್ಟ್ ಗ್ಯಾಲರಿ ಸ್ಥಾಪಕ ಲಿಯಾಕತ್ ಅಲಿ, […]

ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಕಾರು ಢಿಕ್ಕಿ; ಭದ್ರಾವತಿ ಬಳಿ ಅಪಘಾತ

ಭದ್ರಾವತಿ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ ಎದುರುಗಡೆಯಿಂದ ಬರುತ್ತಿದ್ದಂತ ಮತ್ತೊಂದು ಕಾರು ಢಿಕ್ಕಿ ಹೊಡೆದಿರುವ ಘಟನೆ ಭದ್ರಾವತಿಯ ಜಂಕ್ಷನ್ ಬಳಿ ನಡೆದಿದೆ. ಸಚಿವ ಅರಗ ಜ್ಞಾನೇಂದ್ರ ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದು ಈ ವೇಳೆ ಎದುರುಗಡೆ ಬರುತ್ತಿದ್ದ ಕಾರೊಂದು ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಡಿ. ದೇವರಾಜ ಅರಸು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆ ದಿನ

ಉಡುಪಿ: ಪ್ರಸಕ್ತ ಸಾಲಿನ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿರುವ ವ್ಯಕ್ತಿ/ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಡಿ ದೇವರಾಜ ಅರಸು ಪ್ರಶಸ್ತಿ ನೀಡಲು ಅರ್ಹರನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿ ಸಂಘ ಸಂಸ್ಥೆಗಳಿಗೆ ರೂ.50,000/- ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದ್ದು, ಅರ್ಹ ಸಾಧಕರು ಮತ್ತು ಸಂಘ ಸಂಸ್ಥೆಗಳು […]