ರಣರಂಗದಲ್ಲೂ ಆತ್ಮನಿರ್ಭರತೆ: ಭಾರತದಲ್ಲೇ ತಯಾರಾದ ಅತ್ಯಾಧುನಿಕ ಯುದ್ದ ಉಪಕರಣಗಳನ್ನು ಸೇನೆಗೆ ಹಸ್ತಾಂತರಿಸಿದ ರಕ್ಷಣಾ ಸಚಿವ
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ನವದೆಹಲಿಯಲ್ಲಿ ಭಾರತೀಯ ಸೇನೆಗೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಉಪಕರಣಗಳು ಮತ್ತು ರಕ್ಷಣಾ ಪರಿಕರಗಳನ್ನು ಹಸ್ತಾಂತರಿಸಿದರು. ಭವಿಷ್ಯದ ಪದಾತಿ ದಳದ ಸೈನಿಕ, ಹೊಸ ಪೀಳಿಗೆಯ ಸಿಬ್ಬಂದಿ ನಿರೋಧಕ ಗಣಿಗಳು, ಟ್ಯಾಂಕ್‌ಗಳಿಗೆ ಉನ್ನತೀಕರಿಸಿದ ದೃಶ್ಯಗಳ ವ್ಯವಸ್ಥೆ, ಹೆಚ್ಚಿನ ಚಲನಶೀಲ ಪದಾತಿದಳದ ಸಂರಕ್ಷಿತ ವಾಹನಗಳು ಮತ್ತು ಆಕ್ರಮಣಕಾರಿ ದೋಣಿಗಳು ಅತ್ಯಾಧುನಿಕ ಉಪಕರಣಗಳಲ್ಲಿ ಸೇರಿವೆ. ‘ಆತ್ಮನಿರ್ಭರ್ ಭಾರತ್ ಅಭಿಯಾನ್’ ಯೋಜನೆಯಡಿಯಲ್ಲಿ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ಪ್ರಧಾನ ಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ ರಕ್ಷಣಾ ಸಂಶೋಧನೆ ಮತ್ತು […]
ಅಟಲ್ ಜೀ ಮೇರು ವ್ಯಕ್ತಿತ್ವ ಮತ್ತು ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಸುರೇಶ್ ನಾಯಕ್
ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ, ಭಾರತೀಯ ಜನ ಸಂಘದ ನಂತರ ಭಾರತೀಯ […]
ದೇವರಾಜ ಅರಸು ಜಯಂತಿ ಪೂರ್ವಾಭಾವಿ ಸಭೆ ನಡೆಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107 ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಿಂದ 22 ರ ವರೆಗೆ 3 ದಿನಗಳ ಕಾಲ ಅರ್ಥಪೂರ್ಣವಾಗಿ ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಿ.ದೇವರಾಜ ಅರಸು ಜಯಂತಿ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ […]
ಹರ್ ಘರ್ ತಿರಂಗಾ ಅಭಿಯಾನದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
ಉಡುಪಿ: ರಾಷ್ಟ್ರದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ರಾಷ್ಟ್ರಪ್ರೇಮ ಹಾಗೂ ದೇಶಭಕ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲೆಯ ನಾಗರಿಕರು ಪ್ರತೀ ಮನೆಯಲ್ಲೂ ಆಗಸ್ಟ್ 13 ರಿಂದ 15 ರ ವರೆಗೆ ತ್ರಿವರ್ಣ ಧ್ವಜವನ್ನು ಹಾರಿಸುವುದರೊಂದಿಗೆ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಭಿನಂದನೆ ಸಲ್ಲಿಸಿರುತ್ತಾರೆ. ಸಾರ್ವಜನಿಕರು ತಮ್ಮ ಮನೆಯಲ್ಲಿರುವ ರಾಷ್ಟ್ರಧ್ವಜವನ್ನು ಗೌರವಯುತವಾಗಿ ಸಂರಕ್ಷಣೆ ಮಾಡುವುದರೊಂದಿಗೆ ಧ್ವಜ ಸಂಹಿತೆಯನ್ನು ಕಾಪಾಡಬೇಕೆಂದು ತಿಳಿಸಿದ್ದಾರೆ.
ಅಕ್ಷಯ್ ಹಾಕೆ ಮಚ್ಚಿಂದ್ರ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ: ಎನ್.ವಿಷ್ಣುವರ್ಧನ್ ಗುಪ್ತಚರ ಇಲಾಖೆಗೆ ವರ್ಗಾವಣೆ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಷ್ಣುವರ್ಧನ್ ಅವರು ಬೆಂಗಳೂರಿನ ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, 2015ರ ಐಪಿಎಸ್ ಬ್ಯಾಚಿನ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.