ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದನ್ನು ಖಂಡಿಸಿ ಗುರುವಾರ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಯಿತು. ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25 ನೇ ತಾರೀಖಿನಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ 9 ವರ್ಷದ […]

ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ಚಿಕಿತ್ಸೆ ವಿಭಾಗಕ್ಕೆ ರಜೆ

ಮಣಿಪಾಲ: ಆಗಸ್ಟ್ 19, 20, 21 ಮತ್ತು 31 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿ.ಎಂ.ಎ.ಪೈ ಆಸ್ಪತ್ರೆ, ಮತ್ತು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಗಳ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ. ಆದಾಗ್ಯೂ, ಅಪಘಾತ ಮತ್ತು ತುರ್ತುಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಕೀಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

ತುಳುನಾಡಿನ ಸಂಸ್ಕೃತಿ ಅಧ್ಯಯನ ಆನ್‌ಲೈನ್‌ ಕೋರ್ಸ್‌ ಉದ್ಘಾಟನೆ: ಇಂದು ಸಂಜೆ ಮಾಹೆಯ ಅಂಗಣದಲ್ಲಿ ಹುಲಿವೇಷ ಕುಣಿತ

ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ನ ಸೆಂಟರ್‌ ಫಾರ್‌ ಇಂಟರ್‌ಕಲ್ಚರಲ್‌ ಸ್ಟಡೀಸ್‌ ಆ್ಯಂಡ್‌ ಡಯಲಾಗ್‌  ಘಟಕವು ‘ಡಿಸರ್ನಿಂಗ್‌ ಇಂಡಿಯ: ಲಿವಿಂಗ್‌ ಕಲ್ಚರ್ಸ್‌ ಆಫ್‌ ತುಳುನಾಡು’ ಎಂಬ ಶೀರ್ಷಿಕೆಯಲ್ಲಿ ಆನ್‌ಲೈನ್‌ ಕೋರ್ಸ್‌ ಅನ್ನು ಆರಂಭಿಸುತ್ತಿದ್ದು ಇದರ ಉದ್ಘಾಟನೆ ಆಗಸ್ಟ್‌ 18 ಗುರುವಾರ ಸಂಜೆ 4:30 ಗಂಟೆಗೆ ಮಣಿಪಾಲದ ಮಾಹೆ ಮುಖ್ಯ ಕಚೇರಿಯ ಅಂಗಣದಲ್ಲಿ ನಡೆಯಲಿದೆ. ಮಣಿಪಾಲ್‌ ಶಿಕ್ಷಣ ಮತ್ತು ವೈದ್ಯಕೀಯ ಬಳಗದ ಸಂಸ್ಥೆಗಳ ಅಧ್ಯಕ್ಷ ಡಾ. ರಂಜನ್‌ ಪೈ, ಮಾಹೆಯ ಸಹಕುಲಾಧಿಪತಿ ಡಾ. ಎಚ್‌. ಎಸ್‌. ಬಲ್ಲಾಳ್‌, ಕುಲಪತಿ […]

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ: ಅವಿಭಜಿತ ದ.ಕ ಜಿಲ್ಲೆಯ ಮೂವರು ಛಾಯಾಗ್ರಾಹಕರಿಗೆ ಪ್ರಶಸ್ತಿ

ಆಂಧ್ರಪ್ರದೇಶ ಫೋಟೋಗ್ರಫಿ ಅಕಾಡೆಮಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇವರ ಪೈಕಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಚಾಯಾಗ್ರಾಹಕರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್, ಮೂಡಬಿದ್ರೆಯ ಮಾನಸ ಫೋಟೋಗ್ರಫಿಯ ರವಿ ಕೋಟ್ಯಾನ್, ಜಿನೇಶ್ ಪ್ರಸಾದ್ ಬೆಂಗಳೂರಿನ ಸತೀಶ್ ಎಚ್ ಮತ್ತು ಶಿವು ಇವರ ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ. […]

ಶ್ರೀಕೃಷ್ಣಜನ್ಮಾಷ್ಟಮಿಗೆ ನೂತನ ವೇಷ ಧರಿಸಲು ಸಜ್ಜಾಗಿದೆ ರವಿ ಕಟಪಾಡಿ ತಂಡ: ಆರು ಮಕ್ಕಳ ಚಿಕಿತ್ಸೆಗಾಗಿ ಧನ ಸಂಗ್ರಹಣೆಯ ಗುರಿ

ಉಡುಪಿ: ರವಿ ಕಟಪಾಡಿ ಮತ್ತು ಗೆಳೆಯರ ಬಳಗವು ಈ ಬಾರಿ ವಿನೂತನ ವೇಷ ಧರಿಸಿ ಜನರ ಮುಂದೆ ಬರಲು ಸಜ್ಜಾಗಿದೆ. ಈ ಬಾರಿ ಆರು ಮಕ್ಕಳ ಚಿಕಿತ್ಸೆಗೆ ಧನ ಸಂಗ್ರಹ ಮಾಡುವ ಗುರಿ ಇದೆ ಎಂದು ರವಿ ಕಟಪಾಡಿ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ತಮ್ಮ ವೇಷದ ಬಗ್ಗೆ ಗುಟ್ಟು ಬಿಟ್ಟುಕೊಡದ ರವಿ, ಹೈದರಾಬಾದ್, ಮಂಗಳೂರು ಮತ್ತು ಕಟಪಾಡಿಯ 7 ಕಲಾವಿದರು ಒಂದೂವರೆ ತಿಂಗಳಿನಿಂದ ಈ ವೇಷಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದಷ್ಟೇ […]