ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ
ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್ಸೈಟ್ kacdc.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 0820-2574882, ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹೆ: ತುಳು ಸಂಸ್ಕೃತಿ ಆಚಾರ ವಿಚಾರದ ಬಗ್ಗೆ ಅರಿವು ನೀಡುವ ಆನ್ ಲೈನ್ ಕೋರ್ಸ್ ಆರಂಭ
ಮಣಿಪಾಲ: ಉನ್ನತ ಶಿಕ್ಷಣವು ಸ್ಥಳೀಯ ಮತ್ತು ಜಾಗತಿಕ ಸಂಸ್ಕೃತಿ ನಡುವೆ ಸಂಪರ್ಕ ಸ್ಥಾಪಿಸುವಲ್ಲಿ ಅದರ ಅರ್ಥವನ್ನು ಕಂಡುಕೊಳ್ಳುತ್ತದೆ. ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ಅದರ ಜಾಗತಿಕ ದೃಷ್ಟಿಕೋನದ ಜೊತೆಗೆ ಸಮುದಾಯದೊಂದಿಗೆ ಸತತವಾಗಿ ಕೆಲಸ ಮಾಡುತ್ತಿದೆ. ತುಳುನಾಡಿನ ಸಂಸ್ಕೃತಿಯ ಆನ್ಲೈನ್ ಕೋರ್ಸ್ ಸ್ಥಳೀಯ ಮತ್ತು ಜಾಗತಿಕ ಸಂಸ್ಕೃತಿಗಳ ಛೇದಕದಲ್ಲಿ ಅಧ್ಯಯನ ಮತ್ತು ಸಂಶೋಧನೆಗೆ ಹೊಸ ಆಯಾಮವನ್ನು ನೀಡುವಂತಹ ಒಂದು ಪ್ರಯತ್ನವಾಗಿದೆ ಎಂದು ಬೆಂಗಳೂರಿನ ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ ಸಂಸ್ಥೆಯ ಅಧ್ಯಕ್ಷ ಮತ್ತು ಮಾಹೆಯ ಅಧ್ಯಕ್ಷ ಡಾ […]
ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ತ್ರಿಶಾ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ
ಉಡುಪಿ: ತ್ರಿಶಾ ಕ್ಲಾಸಸ್ ನಲ್ಲಿ ತರಬೇತಿ ಪಡೆದು ಕಳೆದ ಜೂನ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಡುಪಿಯ ತ್ರಿಶಾ ವಿದ್ಯಾ ಕಾಲೇಜ್ ನ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ಮಾತನಾಡಿ, ಅಧ್ಯಯನಶೀಲನಾದ ವಿದ್ಯಾರ್ಥಿಯೊಬ್ಬನ ಸಾಧನೆಯನ್ನು ಯಾರಿಂದಲೂ ತಡೆಯಲಾಗದು ಎಂದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಿಎ ಆದರ್ಶ ಶೆಣೈ ಮತ್ತು ಸಿಎ ನಾಗೇಂದ್ರ ಭಕ್ತ ಭಾಗವಹಿಸಿದ್ದರು. ಈ […]
ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿಗೆ ನಾಡಿನ ಗಣ್ಯರಿಂದ ಶುಭಹಾರೈಕೆ..
ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿಗೆ ನಾಡಿನ ಗಣ್ಯರಿಂದ ಶುಭಹಾರೈಕೆ..
ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ತೆರೆಗಪ್ಪಳಿಸಲಿದೆ ಪ್ರಭಾಸ್ ನಟನೆಯ ಸಲಾರ್: ಕೆ.ಜಿ.ಎಫ್ ಕಮಾಲ್ ಗೆ ಮನಸೋತ ಜನ ಸಲಾರ್ ಗೂ ಜೈ ಎನ್ನುವರೆ?
ಭಾರತೀಯ ಚಿತ್ರರಂಗದ ಬಾಹುಬಲಿ, ದಕ್ಷಿಣದ ಖ್ಯಾತ ನಟ ಪ್ರಭಾಸ್ ಅಭಿನಯದ ಸಲಾರ್ ಚಿತ್ರವು ಸೆಪ್ಟೆಂಬರ್ 28 ರಂದು ತೆರೆಗಪ್ಪಳಿಸಲಿದೆ. ಕೆ.ಜಿ.ಎಫ್ ಖ್ಯಾತಿಯ ಪ್ರಖ್ಯಾತ ಬ್ಯಾನರ್ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ, ಕನ್ನಡ ನಿರ್ದೇಶಕ ಪ್ರಶಾಂತ್ ನೀಲ್ ಬತ್ತಳಿಕೆಯಿಂದ ಹೊರಟಿರುವ ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರಾಗಿರುವ ಪ್ರಭಾಸ್ ನಟನೆಯ ಸಲಾರ್ ಚಿತ್ರದ ಬಗ್ಗೆ ಈಗಾಗಲೇ ಕುತೂಹಲ ಮತ್ತು ನಿರೀಕ್ಷೆಗಳು ಹುಟ್ಟಿಕೊಂಡಿವೆ. ಕೆ.ಜಿ.ಎಫ್ ಕಮಾಲಿಗೆ ಮನಸೋತು ಕ್ರೇಜ್ ಹುಟ್ಟಿಸಿಕೊಂಡ ಸಿನಿಪ್ರಿಯರು ಸಲಾರ್ ಗೂ ಸೋಲುವರೆ? ಸಿನಿಮಾ ಗೆಲ್ಲಿಸುವರೆ ಎನ್ನುವುದನ್ನು ಕಾಲವೆ […]