ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಯುವಕ ಯುವತಿಯರಿಂದ ಸ್ವ-ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತ 18 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಂದ ವೆಬ್‌ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574855 […]
ಸಾಗರವನ್ನು ಸ್ವಚ್ಛವಾಗಿಡುವುದೆಂದರೆ ಸಾಗರ ಜೀವಿಗಳನ್ನು ಸುರಕ್ಷಿತವಾಗಿಡುವುದೆಂದರ್ಥ: ಡಾ. ಉದಯ ಶೆಟ್ಟಿ
ಮಲ್ಪೆ: ಸಾಗರವನ್ನು ಸ್ವಚ್ಛವಾಗಿರಿಸುವ ಮೂಲಕ ಸಮುದ್ರದಲ್ಲಿನ ಜೀವಿಗಳ ಸಂರಕ್ಷಣೆ ಮಾಡುವುದರ ಜೊತೆಗೆ ಜನರ ಆರೋಗ್ಯವನ್ನು ಕಾಪಾಡುವುದು ‘ಸ್ವಚ್ಛ್ ಸಾಗರ್ ಸುರಕ್ಷಿತ್ ಸಾಗರ್’ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಪೌರಾಯುಕ್ತ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಡಾ. ಉದಯ ಶೆಟ್ಟಿ ಹೇಳಿದರು. ಅವರು ಗುರುವಾರ ಉಡುಪಿಯ ಮಲ್ಪೆಯಲ್ಲಿ ಕೇಂದ್ರ ಸರ್ಕಾರದ ಭೂವಿಜ್ಞಾನ ಸಚಿವಾಲಯ, ಸಮುದ್ರ ಜೀವ ಸಂಪನ್ಮೂಲ ಮತ್ತು ಪರಿಸರ ವಿಜ್ಞಾನ ಕೇಂದ್ರ ಹಾಗೂ ಎ.ಟಿ.ಎ.ಎಲ್ ಭವನ್ ಕೊಚ್ಚಿ ಇವರ ಸಹಯೋಗದಲ್ಲಿ ಸ್ವಚ್ಛ್ ಸಾಗರ್ ಸುರಕ್ಷಿತ್ […]
ನಿಟ್ಟೆ: ನಿಟ್ಟೆ ಮಹಾವಿದ್ಯಾಲಯದ ಪುಷ್ಪರಾಜ್ ಅವರಿಗೆ ಡಾಕ್ಟರೇಟ್
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಪುಷ್ಪರಾಜ್ ಎ. ನಾಯ್ಕ ಅವರು ತಮ್ಮದೇ ವಿಭಾಗದ ಪ್ರಾಧ್ಯಾಪಕ ಡಾ. ಉದಯಕುಮಾರ್ ಜಿ ಹಾಗೂ ಬಯೋಟೆಕ್ನಾಲಜಿ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಸಿ ವಾಮನ್ ರಾವ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೀಡ್ ಬೆಡ್ ಕಾನ್ಸೆಪ್ಟ್ ಆಫ್ ವಾಟರ್ ವೇಸ್ಟ್ ಟ್ರೀಟ್ಮೆಂಟ್ ಎಂಡ್ ಪ್ರೊಡಕ್ಷನ್ ಆಫ್ ಬಯೋಗ್ಯಾಸ್ ಫ್ರಮ್ ರೀಡ್ ಛಾಫ್ ಎಂಡ್ ಅದರ್ ಬ್ಲೆಂಡ್ಸ್” ಎಂಬ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು […]
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ
ಉಡುಪಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕೊಡವೂರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಸವಲತ್ತು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳಿಗೊಮ್ಮೆ ಮಾಹಿತಿ ಕಾರ್ಯಕ್ರಮವನ್ನು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಲಾಯಿತು. ಮುಂದಿನ ದಿನಗಳಲ್ಲಿಯೂ ಇಂತಹ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಮಿತೇಶ್ […]