ಹಿಂದುಳಿದ ವರ್ಗದವರ ಅಭಿವೃದ್ಧಿಗೆ ದೇವರಾಜ ಅರಸು ಕೊಡುಗೆ ಅಪಾರ: ಎಸ್.ಅಂಗಾರ

ಉಡುಪಿ: ಬಡವರ ಕಲ್ಯಾಣ ಅಭಿವೃದ್ಧಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸಮಾಜದ ಹಿಂದುಳಿದ ವರ್ಗದವರ ಶ್ರೇಯೋಭಿವೃಧ್ದಿಗೆ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಡಿ.ದೇವರಾಜ ಅರಸುರವರ 107 ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ […]

ಕಾರ್ಕಳ ತಾಲೂಕು ಗೆಜೆಟಿಯರ್ ರಚಿಸಲು ಸಂಶೋಧನಾ ಲೇಖಕರಿಂದ ಪುಸ್ತಕ ಆಹ್ವಾನ

ಉಡುಪಿ : ರಾಜ್ಯ ಗೆಜೆಟಿಯರ್ ಇಲಾಖೆಯ ವತಿಯಿಂದ ಕಾರ್ಕಳ ತಾಲೂಕು ಗೆಜೆಟಿಯರ್ ಅಧ್ಯಾಯಗಳನ್ನು ರಚನೆ ಮಾಡಲು, ಸಂಶೋಧನಾ ಕಾರ್ಯದಲ್ಲಿ ಆಸಕ್ತಿಯುಳ್ಳ, ಸ್ನಾತಕೋತ್ತರ ಪದವಿಯೊಂದಿಗೆ ಪಿ.ಹೆಚ್‌ಡಿ ಮಾಡಿರುವ, ರಚನಾ ಕಾರ್ಯದಲ್ಲಿ 5 ರಿಂದ 10 ವರ್ಷಗಳ ಅನುಭವ ಹೊಂದಿರುವ ಹಾಗೂ ಸ್ಥಳೀಯ ಹಿನ್ನೆಲೆಯುಳ್ಳ ಸಂಪನ್ಮೂಲ ಲೇಖಕರು ಹಾಗೂ ವಿದ್ವಾಂಸರು ತಾವು ರಚಿಸಿರುವ ಪುಸ್ತಕ ಹಾಗೂ ಲೇಖನಗಳನ್ನು ಇ-ಮೇಲ್ [email protected] ಗೆ 15 ದಿನಗಳ ಒಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಸಂಪಾದಕರು, ಕರ್ನಾಟಕ ಗ್ಯಾಸೆಟಿಯರ್ ಇಲಾಖೆ, ಬೆಂಗಳೂರು ದೂ.ಸಂಖ್ಯೆ: […]

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಪ.ಜಾ/ಪ.ಪಂಗಡದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ

ಉಡುಪಿ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ತರಬೇತಿ ಸಂಸ್ಥೆಯ ವತಿಯಿಂದ ಸಿ.ಎನ್.ಸಿ ಪ್ರೋಗ್ರಾಮರ್ ಮತ್ತು ಆಪರೇಟರ್, ಮೆಷಿನಿಷ್ಟ್ ಹಾಗೂ ಎಲೆಕ್ಟ್ರಿಷಿಯನ್ ಮತ್ತು ವೆಲ್ಡರ್ ಟ್ರೇಡ್‌ಗಳಲ್ಲಿ ಅಪ್ರೆಂಟಿಶಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 15 ರಿಂದ 18 ವರ್ಷದೊಳಗಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದ ಸಾಮಾನ್ಯ ಅಭ್ಯರ್ಥಿಗಳು ಮತ್ತು ಶೇ. 50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಎಸ್.ಸಿ, ಎಸ್.ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು ಸೆಪ್ಟಂಬರ್ 8 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ಬೆಂಗಳೂರು: ಆಗಸ್ಟ್ 23-24 ರಂದು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಬೆಂಗಳೂರು ವಿದ್ಯಾನಗರದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ತರಬೇತಿ ಕೇಂದ್ರಕ್ಕೆ 14 ವರ್ಷ ಮೇಲ್ಪಟ್ಟ 23 ವರ್ಷದೊಳಗಿನ ಅಥ್ಲೆಟಿಕ್ಸ್, ಶೂಟಿಂಗ್ ಹಾಗೂ ಈಜು ಕ್ರೀಡೆಗಳಲ್ಲಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಲುವಾಗಿ ಬೆಂಗಳೂರಿನ ಕ್ರೀಡಾಶಾಲೆಯಾದ ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ತರಬೇತಿ ಕೇಂದ್ರದಲ್ಲಿ ಆಗಸ್ಟ್ 23 ಮತ್ತು 24 ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು […]

ಆಗಸ್ಟ್ 22 ರಿಂದ 29ರವರೆಗೆ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಆಗಸ್ಟ್ 22 ರಂದು ಬೈಂದೂರು ಪ್ರವಾಸಿ ಮಂದಿರ, ಆಗಸ್ಟ್ 23 ರಂದು ಕುಂದಾಪುರ ಪ್ರವಾಸಿ ಮಂದಿರ, ಆಗಸ್ಟ್ 24 ರಂದು ಹೆಬ್ರಿ ಪ್ರವಾಸಿ ಮಂದಿರ, ಆಗಸ್ಟ್ 25 ರಂದು ಕಾರ್ಕಳ ಪ್ರವಾಸಿ ಮಂದಿರ, ಆಗಸ್ಟ್ 26 ರಂದು ಬ್ರಹ್ಮಾವರ ಚಾಂತಾರು ಗ್ರಾಮ […]