ಚೆಸ್ ಮತ್ತು ಈಟಿ ಎಸೆತ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಉಡುಪಿ ಜಿಲ್ಲೆ ಮತ್ತು ಶ್ರೀ ಮೂಕಾಂಬಿಕ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನಿರುದ್ಧ್ ಶೇಟ್ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೆಶನ್ ಆಯೋಜಿಸಿದ ಜೂನಿಯರ್ ವಿಭಾಗದ ಈಟಿ ಎಸೆತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ […]

ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ

ಕಾರ್ಕಳ: ಜ್ಞಾನಸುಧಾ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 101ನೇ ಜನ್ಮದಿನಾಚರಣೆಯ ಪ್ರಯುಕ್ತ ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಗಣಿತ ನಗರ ಹಾಗೂ ನಾಗಬನ ಕ್ಯಾಂಪಸ್‌ ಉಡುಪಿ, ಜ್ಞಾನಸುಧಾ ಎನ್‌.ಎಸ್‌.ಎಸ್‌ ಹಾಗೂ ಎನ್‌.ಸಿ.ಸಿ ಘಟಕ, ಜ್ಞಾನಸುಧಾ ಹಳೆ ವಿದ್ಯಾರ್ಥಿ ಸಂಘ ಮತ್ತು ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿ ಕಾರ್ಕಳ – ಕುಂದಾಪುರ ಇವರ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ ರಕ್ತದಾನ ಶಿಬಿರವನ್ನು ರೆಡ್‌ಕ್ರಾಸ್‌ ಸೊಸೈಟಿ ಕಾರ್ಕಳ ಇದರ ಅಧ್ಯಕ್ಷ ಖ್ಯಾತ ವೈದ್ಯ […]

ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್‌ ಅನ್ನು ಮೂರನೆ ಬಾರಿ ಸೋಲಿಸಿದ 17 ವರ್ಷದ ಆರ್ ಪ್ರಗ್ನಾನಂದ

ಸೋಮವಾರ ಬೆಳಗ್ಗೆ ಮಿಯಾಮಿಯಲ್ಲಿ ನಡೆದ ಅಂತಾರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ನ ಎಫ್‌ಟಿಎಕ್ಸ್ ಕ್ರಿಪ್ಟೋ ಕಪ್‌ನ ಕೊನೆಯ ಸುತ್ತಿನಲ್ಲಿ ಭಾರತೀಯ ಚೆಸ್ ಮಾಸ್ಟರ್ ಆರ್ ಪ್ರಗ್ನಾನಂದ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಸೋಲಿಸಿದ್ದಾನೆ. ಆದರೆ ಈ ಗೆಲುವಿನ ಹೊರತಾಗಿಯೂ, 17 ವರ್ಷದ ಚೆಸ್ ಆಟಗಾರ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಸ್ಥಾನವನ್ನು ಗಳಿಸಿದ್ದಾನೆ ಏಕೆಂದರೆ, ಹಿಂದಿನ ಆಟಗಳ ಆಧಾರದಲ್ಲಿ ಕಾರ್ಲ್‌ಸೆನ್ ಹೆಚ್ಚಿನ ಸ್ಕೋರ್ ಹೊಂದಿದ್ದರು. ನಿಯಮಿತ ಆಟದ ಕೊನೆಯಲ್ಲಿ ಸ್ಕೋರ್ 2-2 ರಲ್ಲಿ ಸಮವಾದ ನಂತರ ಪ್ರಗ್ನಾನಂದ ಕಾರ್ಲ್‌ಸೆನ್‌ ನನ್ನು ಬ್ಲಿಟ್ಜ್ […]

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬೆರಳಚ್ಚು-ನಕಲುಗಾರ ಹುದ್ದೆ

ಉಡುಪಿ: ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು- ನಕಲುಗಾರ -3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://districts.ecourts.gov.in/udupi-onlinerecruitment ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು […]

ಸೆಪ್ಟಂಬರ್ 3 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ […]