ತನ್ನ ನಾಲ್ಕು ಮರಿಗಳ ಜೊತೆ ಸತ್ತ ಸಹೋದರಿಯ ಮೂರು ಮರಿಗಳನ್ನೂ ಸಾಕುತ್ತಿರುವ ಹುಲಿಯಮ್ಮ: ಕಾನನದಲ್ಲೊಂದು ಅಪರೂಪದ ಬಂಧನ!
ಸಾಮಾನ್ಯವಾಗಿ ಪ್ರಾಣಿಗಳು ಮನುಷ್ಯರಂತೆ ಕುಟುಂಬ ವ್ಯವಸ್ಥೆಯನ್ನು ಹೊಂದಿರುವುದಿಲ್ಲ. ಮನುಷ್ಯನಂತೆ ಪ್ರಾಣಿಗಳಿಗೆ ಸಂಸಾರದ ಬಂಧನವಿಲ್ಲ. ಪ್ರಾಣಿ ಪ್ರಪಂಚದಲ್ಲಿ ಮಕ್ಕಳ ಲಾಲನೆ ಪಾಲನೆ ಎಲ್ಲವೂ ಹೆತ್ತಮ್ಮನದ್ದೇ ಆಗಿರುತ್ತದೆ. ಮರಿಯು ತನ್ನ ಕಾಲ ಮೇಲೆ ತಾನು ನಿಂತುಕೊಳ್ಳುವವರೆಗೂ ಅದರ ರಕ್ಷಣೆಯ ಜವಾಬ್ದಾರಿ ಹೊರುವ ತಾಯಿ, ಮರಿ ಸ್ವಾವಲಂಬಿ ಆದ ತಕ್ಷಣ ಅದನ್ನು ಅದರ ಪಾಡಿಗೆ ಬಿಟ್ಟು ಬಿಡುತ್ತದೆ. ಒಂದು ವೇಳೆ ತಾಯಿ ಸತ್ತು ಹೋಯಿತೆಂದರೆ ಆ ಮರಿಯ ಜವಾಬ್ದಾರಿ ಅದರದ್ದೇ ಆಗಿರುತ್ತದೆ. ಆದರೆ, ಕಾಡಿನಲ್ಲೊಂದು ಅಪರೂಪದ ಘಟನೆ ನಡೆದಿದೆ. ಇಲ್ಲಿ ತನ್ನ […]
ಆ.26 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ
ಉಡುಪಿ: ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರೈ.ಲಿ, ಜನಸ್ನೇಹಿ ಪ್ರೈ.ಲಿ ಮತ್ತು ಶಾಲಿಮರ್ ಪ್ರಿಂಟ್ಸ್ ಕಂಪನಿಗಳ ವತಿಯಿಂದ ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ […]
ನೀರೆ ಗೆಳೆಯರ ಬಳಗದ ವತಿಯಿಂದ ಆಗಸ್ಟ್ 28 ರಂದು ಕೆಸರಿನ ಕೂಟ
ನೀರೆ: ನೀರೆ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನೀರೆ-ಕೌಡೂರು-ಎರ್ಲಪಾಡಿ ಗ್ರಾಮ ವ್ಯಾಪ್ತಿಯ ಜನರಿಗೆ ಕೆಸರಿನ ಕೂಟವು ಆಗಸ್ಟ್ 28 ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಗೆ ನೀರೆ ಹೆದ್ದಾರಿ ಶಾಲೆ ಬಳಿ ಜರುಗಲಿದೆ.
ಆಗಸ್ಟ್ 24 ರಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶುಶ್ರೂಷಕರ ಹುದ್ದೆ ನೇರ ಸಂದರ್ಶನ
ಉಡುಪಿ: ಕುಂದಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಆಗಸ್ಟ್ 24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಶುಶ್ರೂಷಾ ತರಬೇತಿ ಹೊಂದಿದ, ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೊಂದಾಯಿತ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ದೃಢೀಕೃತ ಪ್ರತಿಯಿಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು […]
ಮಣಿಪಾಲ: ಎಂಐಟಿ ವತಿಯಿಂದ ಅಕ್ಷಯ ಉರ್ಜಾ ದಿವಸ್ ಕಾರ್ಯಾಗಾರ
ಮಣಿಪಾಲ: ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ (ಎಂ.ಐ.ಟಿ) ಆಗಸ್ಟ್ 20 ರಂದು ಅಕ್ಷಯ ಉರ್ಜಾ ದಿವಸ್ ಅನ್ನು ಆಚರಿಸಲಾಯಿತು. ಉಡುಪಿ ಮತ್ತು ಬ್ರಹ್ಮಾವರದ ಸರ್ಕಾರಿ ಶಾಲೆಗಳ 400 ವಿದ್ಯಾರ್ಥಿಗಳಿಗೆ ಸೌರಶಕ್ತಿ ಮತ್ತು ಹವಾಮಾನ ಬದಲಾವಣೆಯ ಭೀಕರ ಪರಿಣಾಮಗಳ ಕುರಿತು ಕಾರ್ಯಾಗಾರದ ಮೂಲಕ ಅರಿವು ಮೂಡಿಸಲಾಯಿತು. ಕಾರ್ಯಾಗಾರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸೋಲಾರ್ ಲ್ಯಾಂಪ್ಗಳನ್ನು ಜೋಡಿಸಲು ತರಬೇತಿ ನೀಡಲಾಯಿತು. ಆ ಬಳಿಕ ಈ ಸೋಲಾರ್ ಲ್ಯಾಂಪ್ಗಳನ್ನು ಶಾಲಾ ಶಿಕ್ಷಕರ ಸಹಿತ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ […]