ಶಾಲಾ ವಿದ್ಯಾರ್ಥಿಗಳಿಗೆ ಅಂತರ್ಜಾಲ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ

ಉಡುಪಿ: ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ಹನುಮಂತನಗರದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ಜಾಲ ಸುರಕ್ಷತೆ ಹಾಗೂ ಚೈಲ್ಡ್ ಲೈನ್-1098 ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿ ಕು.ನಯನರವರು ಚೈಲ್ಡ್ ಲೈನ್-1098ರ ಸೇವೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸೆನ್ ಕ್ರೈಮ್ ಪೊಲೀಸ್ ಠಾಣೆ ಸಬ್‌ಇನ್ಸಪೆಕ್ಟರ್ ನಾರಾಯಣ್ ಇವರು ವಿದ್ಯಾರ್ಥಿಗಳಿಗೆ ಅಂತರ್ಜಾಲದ ಅತೀ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದರು. ಮಕ್ಕಳು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯುವಂತೆ ಮತ್ತು ತಮ್ಮನ್ನು ತಾವು […]

ಮುಂಡ್ಕಿನಜೆಡ್ಡು ಶ್ರೀ ಗೋಪಾಲಕೃಷ್ಣ ಮಂದಿರದಲ್ಲಿ ಅದ್ದೂರಿ ಅಷ್ಟಮಿ ಆಚರಣೆ

ಮುಂಡ್ಕಿನಜೆಡ್ಡು: ಶ್ರೀ ಗೋಪಾಲಕೃಷ್ಣ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ, ಮೊಸರು ಕುಡಿಕೆ ಒಡೆಯುವುದು, ಇಡ್ಲಿ ತಿನ್ನುವ ಸ್ಪರ್ಧೆ ಮುಂತಾದ ಸ್ಪರ್ಧೆಗಳು ಜರುಗಿದವು. ಸ್ಪರ್ಧೆಗಳ ನಂತರ ವಿಜೇತರಿಗೆ ಬಹುಮಾನ ವಿತರಣೆ ಅದ್ದೂರಿಯಾಗಿ ನಡೆಯಿತು.

ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್ : ಏಷ್ಯಾ ಕಪ್ 2022 ಗೂ ಮುನ್ನ ಭಾರತಕ್ಕೆ ಆಘಾತ

ನವದೆಹಲಿ: ದುಬೈನಲ್ಲಿ ಪಾಕಿಸ್ತಾನ ವಿರುದ್ಧದ ಭಾರತದ ಬಹುನಿರೀಕ್ಷಿತ ಆರಂಭಿಕ ಪಂದ್ಯಕ್ಕೂ ಕೆಲವು ದಿನಗಳ ಮೊದಲೆ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗೆ ಕೋವಿಡ್ -19 ದೃಢಪಟ್ಟಿದೆ. ಕೋಚ್ ರಾಹುಲ್ ದ್ರಾವಿಡ್ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರಿಂದ ಅವರು ತಂಡದ ಜೊತೆ ದುಬೈಗೆ ತೆರಳುವುದು ಸಾಧ್ಯವಿಲ್ಲ. ಇದರಿಂದ ಏಷ್ಯಾ ಕಪ್ 2022 ಗೂ ಮುನ್ನವೆ ಭಾರತವು ದೊಡ್ಡ ಆಘಾತವನ್ನು ಅನುಭವಿಸಿದೆ. ಟಿ20 ವಿಶ್ವಕಪ್‌ಗೆ ಮುನ್ನ ಯುಎಇಗೆ ತೆರಳಿ ಕಾಂಟಿನೆಂಟಲ್ ಪಂದ್ಯಾವಳಿಯನ್ನು ಆಡಲಿರುವ ಭಾರತ […]

ಅಂತಾರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ ಶಿಪ್: ಉಡುಪಿಯ ಕುಮಾರಿ ಅನವಿ ಪಿ ಶೆಟ್ಟಿ ದ್ವಿತೀಯ ಸ್ಥಾನ

ಉಡುಪಿ: ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ, ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಶಿವಮೊಗ್ಗ ಇದರ ಜಂಟಿ ಆಶ್ರಯದಲ್ಲಿ ಶನಿವಾರ ಮತ್ತು ಭಾನುವಾರ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಮೂರನೇ ಶಿವಮೊಗ್ಗ ಎರಡು ದಿನಗಳ ಅಂತಾರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಉಡುಪಿಯ ಕುಮಾರಿ ಅನವಿ ಪಿ ಶೆಟ್ಟಿ ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಕಟಾ ಮತ್ತು ಕುಮಿಟ್ ವಿಭಾಗಗಳಲ್ಲಿ ಎರಡನೇ ಸ್ಥಾನಗಳನ್ನು ಗಳಿಸಿರುತ್ತಾರೆ. ಇವರು ಬ್ರಹ್ಮಾವರ […]

ಆಗಸ್ಟ್ 25ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ: ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಬಿಡುಗಡೆಗೊಳಿಸಲಾಗಿದ್ದು, ಆಗಸ್ಟ್ 25ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಟಾಟನಾ ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 2.30 ರಿಂದ 3.30ರ ವರೆಗೆ ಬೋರ್ಡು ಹೈಸ್ಕೂಲಿನಿಂದ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಬೃಹತ್‌ ಮರೆವಣಿಗೆ ಸಾಗಿ ಬರಲಿದೆ. ಅಪರಾಹ್ನ 3.30 ರಿಂದ ಸಂಜೆ 5.00 ರವರೆಗೆ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅಪರಾಹ್ನ 05.00 ಗಂಟೆಗೆ ಸರಿಯಾಗಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಿಂದ ಕಾರ್ಯಕ್ರಮದ ಉದ್ಟಾಟನೆ ನಡೆಯಲಿದೆ. ಸಭಾ ಕಾರ್ಯಕ್ರಮ […]