ತುಮಕೂರು ಭೀಕರ ಅಪಘಾತ: ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ 2 ಲಕ್ಷ ರೂ ಪರಿಹಾರ

ತುಮಕೂರು: ಗುರುವಾರ ಬೆಳಗ್ಗೆ ಜಿಲ್ಲೆಯಲ್ಲಿ ಲಾರಿ ಮತ್ತು ಟೆಂಪೋ ಟ್ರಾಕ್ಸ್ ಕ್ರೂಸರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ 200 ಕಿಮೀ ದೂರದಲ್ಲಿರುವ ಬಾಳೇನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಬಲಿಯಾದವರಲ್ಲಿ ಹೆಚ್ಚಿನವರು ರಾಯಚೂರು ಜಿಲ್ಲೆಯ ಕಾರ್ಮಿಕರಾಗಿದ್ದಾರೆ. ಟ್ರಾಕ್ಸ್ ಕ್ರೂಸರ್‌ನಲ್ಲಿ ಸುಮಾರು 24 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು, ಮೃತರಲ್ಲಿ ಚಾಲಕ ಕೃಷ್ಣಪ್ಪ ಕೂಡ […]

ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿ ದ್ವಿಚಕ್ರ ವಾಹನ ಸವಾರನ ಮೃತ್ಯು ಪ್ರಕರಣ: ಆರೋಪಿಗೆ ಕಾರಾಗೃಹ ವಾಸ ಶಿಕ್ಷೆ

ಉಡುಪಿ: ದುಡುಕು ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿ, ದ್ವಿಚಕ್ರ ವಾಹನ ಸವಾರನ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ನವೆಂಬರ್ 12 ರಂದು ಸಂಜೆ 4.15 ರ ಸುಮಾರಿಗೆ ಉದ್ಯಾವರದ ಸಂಪತ್ ಕುಮಾರ್ ಎಂಬಾತನು ಡಯಾನ ಜಂಕ್ಷನ್‌ನಿಂದ ಹಳೇ ತಾಲೂಕು ಆಫೀಸ್ ಕಡೆಗೆ ಏಕಮುಖ ಸಂಚಾರ ರಸ್ತೆಯಲ್ಲಿ ತನ್ನ ಆಟೋರಿಕ್ಷಾವನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ದ್ವಿಚಕ್ರ ವಾಹನ ಸವಾರ ಗಣೇಶ್ ಎಂಬಾತನಿಗೆ […]

ರಜತ ಮಹೋತ್ಸವ ಆಚರಣೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆ

ಉಡುಪಿ: ಉಡುಪಿ ಜಿಲ್ಲೆ 25 ವರ್ಷ ಪೂರೈಸಿದ ಹಿನ್ನೆಲೆ ಆಗಸ್ಟ್ 25 ರಂದು ರಜತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರ ಆಗಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಲ್ಲಿ ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆಯಲ್ಲಿ ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಅಜ್ಜರಕಾಡು ಮೈದಾನ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ ಪುರಭವನದ ಪಕ್ಕದ ರಸ್ತೆಯಲ್ಲಿ, ಕಾರ್ಯಕ್ರಮಕ್ಕೆ ಆಗಮಿಸುವ ಕುಂದಾಪುರ, ಮಲ್ಪೆ, ಕಾಪು ಹಾಗೂ ಪಡುಬಿದ್ರೆ ಕಡೆಯಿಂದ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಸೈಂಟ್ ಸಿಸಿಲಿ […]

ದೂರದರ್ಶನದಲ್ಲಿ ತುಳುವ ವೀರಾಂಗನೆ ಉಲ್ಲಾಳದ ರಾಣಿ ಅಬ್ಬಕ್ಕನ ಕಥೆ: ಆಗಸ್ಟ್ 28 ರಂದು ಪ್ರಸಾರ

ಕರ್ನಾಟಕದ ಮಹಾ ವೀರಾಂಗನೆ ತುಳುವ ಸ್ವಾತಂತ್ರ್ಯ ವೀರೆ ಉಳ್ಳಾಲದ ರಾಣಿ ಅಬ್ಬಕ್ಕ, ಪೋರ್ಚುಗೀಸ್ ಆಕ್ರಮಣಕಾರರಿಗೆ ತಲೆಬಾಗಲು ನಿರಾಕರಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಕಥೆ ದೂರದರ್ಶನದ ಸ್ವರಾಜ್ ಧಾರಾವಾಹಿಯಲ್ಲಿ ಆಗಸ್ಟ್ 28 ರಂದು ಭಾನುವಾರ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ.

ಏಷ್ಯಾ ಕಪ್ 2022: ವಿವಿಎಸ್ ಲಕ್ಷ್ಮಣ್ ಟೀಮ್ ಇಂಡಿಯಾದ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ

ನವದೆಹಲಿ: 2022ರ ಏಷ್ಯಾಕಪ್‌ಗೆ ಟೀಮ್ ಇಂಡಿಯಾದ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕಗೊಂಡಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ಲಕ್ಷ್ಮಣ್ 2022 ರ ಏಷ್ಯಾ ಕಪ್‌ಗಾಗಿ ದುಬೈನಲ್ಲಿ ಟೀಮ್ ಇಂಡಿಯಾದ ಹಂಗಾಮಿ ಮುಖ್ಯ ಕೋಚ್ ಆಗಿ ಸೇರಿಕೊಂಡಿದ್ದಾರೆ. ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಕೋವಿಡ್-19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ತಂಡದೊಂದಿಗೆ ಪ್ರಯಾಣಿಸಿಲ್ಲ ಎಂದು ಬಿಸಿಸಿಐ ದೃಢೀಕರಣದ ಒಂದು ದಿನದ ಬಳಿಕ ವಿವಿಎಸ್ ಅವರನ್ನು ಹಂಗಾಮಿ ಕೋಚ್ ಆಗಿ ನೇಮಕ […]