ಶ್ರೀ ಕೃಷ್ಣಜನ್ಮಾಷ್ಟಮಿಯಂದು ವೇಷ ಧರಿಸಿ 10 ಲಕ್ಷ ರೂ ಸಂಗ್ರಹಿಸಿ ಬಡ ಕುಟುಂಬಕ್ಕೆ ನೆರವಾದ ಯೂಟ್ಯೂಬರ್ ಸಚಿನ್ ಶೆಟ್ಟಿ ತಂಡ

ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಚಂದ್ರ ನಾಯ್ಕ್ ಎಂಬವರ ಮಗಳು ಹತ್ತು ವರ್ಷದ ಸಾನ್ವಿ ಥಲೇಸೀಮಿಯಾ ಮೇಜರ್ ಎನ್ನುವ ರೋಗದಿಂದ ಬಳಲುತ್ತಿದ್ದು, ಈಕೆಗೆ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಚಿಕಿತ್ಸೆ ಅಗತ್ಯವಿದ್ದು, ಇದಕ್ಕೆ 40 ಲಕ್ಷ ರೂ ಖರ್ಚಾಗುವ ಸಾಧ್ಯತೆ ಇದೆ. ಸಾನ್ವಿ ಪಾಲಕರು ತೀರಾ ಬಡವರಾಗಿರುವುದರಿಂದ ಇಷ್ಟೊಂದು ದೊಡ್ಡ ಮೊತ್ತ ಹೊಂದಿಸುವುದು ಅವರಿಂದ ಸಾಧ್ಯವಿಲ್ಲವೆಂದು ತಿಳಿದು, ಆಕೆಯ ಚಿಕಿತ್ಸೆಗೆ ಹಣ ಹೊಂದಿಸುವ ಸಲುವಾಗಿ ಷಟರ್ ಬಾಕ್ಸ್ ಫಿಲ್ಮ್ಸ್ ಖ್ಯಾತಿಯ ಯೂಟ್ಯೂಬರ್ ಸಚಿನ್ ಶೆಟ್ಟಿ […]

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಮನವಿ

ಉಡುಪಿ : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ, ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ […]

ಬೌದ್ಧಿಕ ಹಾಗೂ ಮಾನಸಿಕ ವಿಕಾಸಕ್ಕೆ ಹೆಚ್ಚು ಒತ್ತು ಕೊಡುವ ಆಟಗಳನ್ನು ಆಡಬೇಕು: ಯಶ್ ಪಾಲ್ ಸುವರ್ಣ

ಉಡುಪಿ: ನಾವು ಕೇವಲ ಮನೋರಂಜನೆಗಾಗಿ ಇರುವ ಕ್ರೀಡೆಗಳತ್ತ ಆಕರ್ಷಿತರಾಗಬಾರದು. ಬೌದ್ಧಿಕ, ಮಾನಸಿಕ ವಿಕಾಸಕ್ಕೆ ಅನುಕೂಲವಾಗುವ ಮತ್ತು ದೇಹಕ್ಕೆ ಹೆಚ್ಚು ವ್ಯಾಯಾಮವನ್ನು ಕೊಡುವ ಆಟ ಶಟ್ಲ್ ಬ್ಯಾಡ್ಮಿಂಟನ್. ಮಕ್ಕಳು ಈ ಶಟ್ಲ್ ಬ್ಯಾಡ್ಮಿಂಟನ್ ಆಟದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಉಡುಪಿ ಇವರ ಸಹಯೋಗದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ […]

ವಿಶ್ವ ಕೆಡೆಟ್ ಜೂಡೋ ಚಾಂಪಿಯನ್‌ಶಿಪ್‌: ಭಾರತದ 15 ವರ್ಷದ ಲಿಂಥೋಯ್ ಚನಂಬಮ್ ಐತಿಹಾಸಿಕ ಗೆಲುವು

ಸರಜೆವೊದಲ್ಲಿ ನಡೆದ ವಿಶ್ವ ಕೆಡೆಟ್ ಜೂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾರತದ 15 ರ ಹರೆಯದ ಲಿಂಥೋಯ್ ಚನಂಬಮ್ ಚಿನ್ನ ಗೆದ್ದು ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಜೂಡೋ ಪಂದ್ಯಾವಳಿಯಲ್ಲಿ ಯಾವುದೇ ವಯಸ್ಸಿನ ಗುಂಪಿನಲ್ಲಿ ಪದಕ ಗೆದ್ದ ಮೊದಲ ಭಾರತೀಯರಾಗಿ ಲಿಂಥೋಯ್ ಹೊರಹೊಮ್ಮಿದ್ದಾರೆ. ಬೋಸ್ನಿಯಾ ಮತ್ತು ಹರ್ಜೆಗೋವಿನಾದಲ್ಲಿ ನಡೆದ ಮಹಿಳೆಯರ 57 ಕೆಜಿ ಸ್ಪರ್ಧೆಯಲ್ಲಿ ಬ್ರೆಜಿಲ್‌ನ ಬಿಯಾಂಕಾ ರೀಸ್ ಅವರನ್ನು ಸೋಲಿಸಿದ ಮಣಿಪುರದ ಬಾಲಕಿ ಚಿನ್ನ ಗೆದ್ದು ಬೀಗಿದ್ದಾರೆ.  

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಕುಮಾರಿ ಛಾಯಾ ಸಿ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 19 ಗುರುವಾರದಂದು ಆಯೋಜಿಸಿದ್ದ ಉಡುಪಿ ಜಿಲ್ಲಾ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ.ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು […]