ಚಿನ್ನದ ಹುಡುಗನಿಂದ ಇತಿಹಾಸ ಸೃಷ್ಟಿ: ಲೌಸಾನೆ ಡೈಮಂಡ್ ಲೀಗ್ ಮೀಟ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಪ್ರಶಸ್ತಿ ಗೆದ್ದಿದ್ದಾರೆ. ಈವೆಂಟ್‌ನಲ್ಲಿ ಅವರ ಅತ್ಯುತ್ತಮ ಎಸೆತದೊಂದಿಗೆ, ನೀರಜ್ ಪ್ರತಿಷ್ಠಿತ ಡೈಮಂಡ್ ಲೀಗ್ ಮೀಟ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರೆನ್ನುವ ಇತಿಹಾಸ ಸೃಷ್ಟಿಸಿದ್ದಾರೆ. ನೀರಜ್ ಅವರು ಸೆಪ್ಟೆಂಬರ್ 7 ಮತ್ತು 8 ರಿಂದ ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅವರು ಈಗ 2023 ರ ವಿಶ್ವ […]
ಬ್ರಹ್ಮಾವರ: ಉಡುಪಿಯನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಚೇರಿಯ ಉದ್ಘಾಟನೆ

ಬ್ರಹ್ಮಾವರ: ಉಡುಪಿಯನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭವು ಆಗಸ್ಟ್ 28 ಭಾನುವಾರದಂದು ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಹತ್ತಿರವಿರುವ ಎಸ್.ಎಂ.ಎಸ್ ಚರ್ಚ್ ಕಾಂಪ್ಲೆಕ್ಸ್ ನ 2 ನೇ ಮಹಡಿಯಲ್ಲಿ ಜರುಗಲಿರುವುದು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದ್ವೀಪ ಪ್ರಜ್ವಲನೆ ಮಾಡಲಿದ್ದು, ಶಾಸಕ ರಘುಪತಿ ಭಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಮಹಾಲಕ್ಷ್ಮೀ ಕೋ-ಆಪ್ ಬ್ಯಾಂಕ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಕೊಠಡಿ […]
ಪಿತ್ರೋಡಿ ಮಾತೃಮಂಡಳಿ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಲಕ್ಷ್ಮೀ ಪೂಜೆ ಸಂಪನ್ನ

ಪಿತ್ರೋಡಿ: ಮಾತೃಮಂಡಳಿ ಸೇವಾ ಟ್ರಸ್ಟ್ ವತಿಯಿಂದ ಆಗಸ್ಟ್ 26 ಶುಕ್ರವಾರದಂದು ಉದ್ಯಾವರದ ಶ್ರೀ ಶಂಭು ಶೈಲೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಲಕ್ಷ್ಮೀ ಪೂಜೆಯು ಜರುಗಿತು. ಪೂಜೆಯಲ್ಲಿ ಅತ್ಯಾಧಿಕ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.