ಮಂಗಳೂರು: ಆಗಸ್ಟ್ 30 ರಂದು ಪ್ರಸಾದ್ ನೇತ್ರಾಲಯ ಸಂಚಾರಿ ನೇತ್ರ ಚಿಕಿತ್ಸಾಲಯ ಉದ್ಘಾಟನೆ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ನೇತ್ರ ಚಿಕಿತ್ಸೆ ಕೇಂದ್ರಗಳ ಅತಿ ದೊಡ್ಡ ನೆಟ್ ವರ್ಕ್ ಹೊಂದಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ತನ್ನ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮುಖಾಂತರ ನಿರಂತರವಾಗಿ ನೇತ್ರ ಚಿಕಿತ್ಸೆಗೆ ಸಂಬಂಧಿಸಿದ ಸಮುದಾಯ ಸೇವೆಗಳನ್ನು ಕಳೆದ 12 ವರ್ಷಗಳಿಂದ ನೀಡುತ್ತಿದೆ. ರಾಜ್ಯದ 7 ಜಿಲ್ಲೆಯನ್ನೊಳಗೊಂಡಂತೆ ದೇಶದ 4 ರಾಜ್ಯಗಳಲ್ಲಿ ಶಿಬಿರಗಳನ್ನು ನಡೆಸುತ್ತಾ ಉಚಿತ ನೇತ್ರ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ ಮೂಲಕ ಜನರ ಕಣ್ಣಿನ ಆರೋಗ್ಯ ರಕ್ಷಣೆಯಲ್ಲಿ […]
ಆ.31: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ
ಕುಂದಾಪುರ: ಕುಂದಾಪುರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ವಿನಾಯಕ ಚತುರ್ಥಿಯ ಪ್ರಯುಕ್ತ ಆ.31 ರಂದು ಅಷ್ಟೋತ್ತರ ಸಹಸ್ರ ನಾಲಿಕೇರ ಗಣಪತಿ ಯಾಗ ಜರಗಲಿದೆ. ಆ.30 ಮತ್ತು 31 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದೇಗುಲದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಹಾಗೂ ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲಕ- ಬಾಲಕಿಯರಿಗಾಗಿ ಹೊಯ್ಸಳ- ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ […]
ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್: ನಾಯಕತ್ವದಲ್ಲಿ ಮಹಿಳೆಯರು ಕುರಿತು ಉಪನ್ಯಾಸ ಕಾರ್ಯಕ್ರಮ
ಮಂಗಳೂರು: ಇಲ್ಲಿನ ಮಂಗಳಾ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಲ್ಲಿ “ನಾಯಕತ್ವದಲ್ಲಿ ಮಹಿಳೆಯರು – ಅಡೆತಡೆಗಳು ಮತ್ತು ಪಕ್ಷಪಾತವನ್ನು ನಿವಾರಿಸುವುದು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಚಿಪ್ಸಿ ಐಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಶ್ರೀಮತಿ ಶಾಂಭವಿ ಭಂಡಾರ್ಕರ್ ಮಹಿಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 250ಕ್ಕೂ ಹೆಚ್ಚು ಮಹಿಳಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಶ್ರೀಮತಿ ಪ್ರತಿಜ್ಞಾ ಸುಹಾಸಿನಿ, ಉಪಪ್ರಾಂಶುಪಾಲೆ ಶ್ರೀಮತಿ ಗೀತಾಲಕ್ಷ್ಮಿ ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.
ಕುಂದಾಪುರ: ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ ಕುರಿತು ಜಾಗೃತಿ ಕಾರ್ಯಕ್ರಮ
ಕುಂದಾಪುರ: ಆಗಸ್ಟ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ಎನ್.ಸಿ.ಸಿ ಘಟಕ, ಭಾರತ ಸರ್ಕಾರದ ಭೂವಿಜ್ಞಾನ ಸಚಿವಾಲಯ, ದೆಹಲಿ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ಪುರಸಭೆ ಕುಂದಾಪುರ ಇವರ ಸಹಯೋಗದಲ್ಲಿ ” ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ” ಕುರಿತು ಜಾಗೃತಿ ಕಾರ್ಯಕ್ರಮ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ನಡೆಯಿತು. ಮಣಿಪಾಲದ ಎಂ.ಐ.ಟಿಯ ಸಹಪ್ರಾಧ್ಯಾಪಕ ಡಾ. ಅನಿಶ್ ಕುಮಾರ್ ವಾರಿಯರ್ […]