ತ್ರಿಶಾ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ
ಉಡುಪಿ: ಕ್ಷೇತ್ರ ಶಿಕ್ಷಣ ಇಲಾಖೆ, ಉಡುಪಿ ಇವರ ಸಹಯೋಗದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳು ಮತ್ತು ಎಸ್.ವಿ.ಎಸ್. ಟ್ರಸ್ಟ್, ಕಟಪಾಡಿ ಇವರ ಆಶ್ರಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆಂದು ಅರಿವು ಕಾರ್ಯಗಾರವನ್ನು ಆಗಸ್ಟ್ 26 ರಂದು ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಏಕಾಗ್ರತೆ, ಧ್ಯಾನ ಮತ್ತು ಅಧ್ಯಯನವು ಮಕ್ಕಳ ಭವಿತವ್ಯವನ್ನು ಉಜ್ವಲಗೊಳಿಸುತ್ತದೆ ಎಂದು ತಿಳಿಸಿದರು. ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು […]
ಕಳೆದ ನಾಲ್ಕು ವರ್ಷಗಳಲ್ಲಿ ಅತಿ ಹೆಚ್ಚು ಮಳೆ ಕಂಡ ಬೆಂಗಳೂರು: ಆಗಸ್ಟ್ ಮಳೆಗೆ ತೋಯ್ದು ತೊಪ್ಪೆಯಾದ ಬೆಂಗಳೂರಿಗರು
ಬೆಂಗಳೂರು: ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದಲ್ಲಿ ಆಗಸ್ಟ್ ನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಆಗಸ್ಟ್‌ನಲ್ಲಿ ಗರಿಷ್ಠ 184.4 ಮಿಮೀ ಮಳೆಯಾಗಿದೆ. ನಗರದಲ್ಲಿ ಟ್ರಾಫಿಕ್ ಜಾಮ್, ಜಲಾವೃತ ಪ್ರದೇಶಗಳು ಮತ್ತು ಭಾರೀ ಮಳೆಯಿಂದ ಹಾನಿಯಾಗಿರುವ ದೃಶ್ಯಗಳು ಸರ್ವೇ ಸಾಮಾನ್ಯವೆಂಬಂತಾಗಿದೆ. ನಗರದ ವಿವಿಧ ಪ್ರದೇಶದ ಜನರು ಬೆಂಗಳೂರಿನ ಮಳೆಯ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. Welcome to Indiranagar!#bengalururains #bangalorerains pic.twitter.com/u8mgcdXx1Q — Pratham Y (@prathampy) August 26, 2022 ವಾರದ […]
ಏಷ್ಯಾಕಪ್ ಟಿ20: ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಭಾರತ
ನಿನ್ನೆ ರಾತ್ರಿ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟ್ವೆಂಟಿ-20 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ 19.5 ಓವರ್ ಗಳಲ್ಲಿ147 ರನ್‌ಗಳಿಗೆ ಆಲೌಟ್ ಆಯಿತು, ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಅವರ 43 ರನ್‌ಗಳು ತಂಡದ ಗರಿಷ್ಠ ಸ್ಕೋರ್ ಆಗಿದ್ದವು. ಭಾರತದ ಪರ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮೂರು ಮತ್ತು ಅರ್ಷದೀಪ್ ಸಿಂಗ್ […]
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೀನಿಯರ್ಸ್ ಡೇ ಕಾರ್ಯಕ್ರಮ
ಕುಂದಾಪುರ: ಆಗಸ್ಟ್ 27 ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸೀನಿಯರ್ಸ್ ಡೇ ಅನ್ನು ಆಯೋಜಿಸಲಾಗಿತ್ತು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ಥೈಲ್ಯಾಂಡ್ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆಯಲ್ಲಿ ಕಂಚಿನ ಪದಕ ಪಡೆದ ವಿದ್ಯಾರ್ಥಿ ಅಜಯ್ ದೇವಾಡಿಗ ಅವರನ್ನು ಕುಂದಾಪುರ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಸನ್ಮಾನಿಸಲಾಯಿತು. ಅವರೊಂದಿಗೆ ಭಾಗವಹಿಸಿದ ಪವನ್ ಪೂಜಾರಿ, ಚೇತನ್, ಭರತ್ ತರಬೇತುದಾರ ಕೀರ್ತಿಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ […]