ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಭೇಟಿ

ಉಡುಪಿ: ಭಾರತ ಸರಕಾರದ ಬಂದರು, ಜಲಮಾರ್ಗ ಹಾಗೂ ಆಯುಷ್ ಇಲಾಖೆ ಸಚಿವ ಸರ್ಬಾನಂದ ಸೋನೊವಾಲ್ ರವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಸ್ವಾಗತಿಸಿ ಶಾಲು ಹೊದಿಸಿ , ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಪರ್ಯಾಯ ಮಠದ ವ್ರಜನಾಥ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪ್ರಕರಣ: ಅನುಮತಿ ನೀಡಿದ ಹೈ ಕೋರ್ಟ್

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹಿಂದೂ ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಅನುಮತಿ ನೀಡದಂತೆ ಅಂಜುಮನ್ ಎ ಇಸ್ಲಾಂ ಕಡೆಯಿಂದ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿದ್ದವು. ಈ ಪೈಕಿ ಕರ್ನಾಟಕದ ಹೈಕೋರ್ಟ್ ಅಂಜುಮನ್ ಎ ಇಸ್ಲಾಂ ಅರ್ಜಿಯನ್ನು ತಡರಾತ್ರಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಸಿದ್ಧತೆ ಆರಂಭವಾಗಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಕೇಂದ್ರ ಸರ್ಕಾರದ ಸಚಿವ ಪ್ರಹ್ಲಾದ್ ಜೋಶಿ ಸ್ಥಳದಲ್ಲಿದ್ದು, ಹೈಕೋರ್ಟ್ ತೀರ್ಪಿಗೆ ಹರ್ಷ ವ್ಯಕ್ತ ಪಡಿಸಿ, ಯಾವುದೇ […]

ಭಾರತೀಯ ಮಹಿಳೆಯರ ವಿರುದ್ದ ದಿನಕ್ಕೆ ಸರಾಸರಿ 86 ಅತ್ಯಾಚಾರ, ಗಂಟೆಗೆ 49 ಅಪರಾಧ ಪ್ರಕರಣ: ಎನ್‌ಸಿಆರ್‌ಬಿ ವರದಿ

ನವದೆಹಲಿ: ಇತ್ತೀಚಿನ ಸರ್ಕಾರಿ ವರದಿಯ ಪ್ರಕಾರ 2021 ರಲ್ಲಿ ಭಾರತದಲ್ಲಿ 31,677 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ವಿರುದ್ದ ದಿನಕ್ಕೆ ಸರಾಸರಿ 86 ಅತ್ಯಾಚಾರ ಪ್ರಕರಣ ಹಾಗೂ ಗಂಟೆಗೆ ಸುಮಾರು 49 ಅಪರಾಧ ಪ್ರಕರಣಗಳು ನಡೆಯುತ್ತವೆ. 2020 ರಲ್ಲಿ ಮಹಿಳೆಯರ ಅತ್ಯಾಚಾರ ಪ್ರಕರಣಗಳ ಸಂಖ್ಯೆ 28,046 ಆಗಿದ್ದರೆ, 2019 ರಲ್ಲಿ ಇದು 32,033 ಆಗಿತ್ತು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಕಚೇರಿಯ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ. ಎನ್‌ಸಿಆರ್‌ಬಿ ಯು ಗೃಹ ಸಚಿವಾಲಯದ ಅಡಿಯಲ್ಲಿ […]

ಪ್ರಧಾನಿ ಮೋದಿ ಮಂಗಳೂರು ಭೇಟಿ: ಕ.ರಾ.ರ.ಸಾ.ನಿಗಮದ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟಂಬರ್ 2 ರಂದು ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸದರಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿರುತ್ತದೆ. ಆದ್ದರಿಂದ ಸದರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆ ಬಸ್ ಗಳ […]

ಆಗುಂಬೆ ಘಾಟಿಯಲ್ಲಿ ಭೂಕುಸಿತ: ಸೆಪ್ಟಂಬರ್ 30 ರ ವರೆಗೆ ಭಾರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರ ವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.