ಮಂಗಳೂರಿನ ರಸ್ತೆಯಲ್ಲಿ ಮೋದಿ… ಮೋದಿ… ಪಠಣ.. ಹರಿದು ಬಂದ ಜನಸಾಗರ

ಮಂಗಳೂರು: ನಿರೀಕ್ಷೆಯಂತೆಯೆ ಮಂಗಳೂರಿನ ಜನತೆ ಈ ಬಾರಿಯೂ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪ್ರಧಾನಿ ಮೋದಿಗೆ ಮೋದಿ ಪಠಣದ ಸ್ವಾಗತ ಕೋರಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಕೂಳೂರಿನ ಗೋಲ್ಡ್ ಫಿಂಚ್ ಸಿಟಿಗೆ ಹೋಗುವ ರಸ್ತೆಗಳಲ್ಲಿ ಬಿಸಿಲನ್ನೂ ಲೆಕ್ಕಿಸದೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಹಿಂದಿನ ಬಾರಿಯೂ ಮೋದಿಯವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಇದೇ ರೀತಿ ಜನಸಾಗರ ಹರಿದು ಬಂದಿತ್ತು, ಮತ್ತು ಇದನ್ನು ಮೋದಿ ಅವರು ತಮ್ಮ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಬಾರಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ […]

ಸ್ವಚ್ಛ ಕಲಬುರಗಿಗಾಗಿ ರಂಗೋಲಿ ಅಭಿಯಾನ: ಮಹಾನಗರ ಪಾಲಿಕೆಯ ಹೊಸ ಉಪಾಯ

ಕಲಬುರಗಿ: ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಉಪಾಯವನ್ನು ಮಾಡಿದೆ, ‘ಸ್ವಚ್ಛ ಕಲಬುರಗಿ’ಗಾಗಿ ನಗರದಲ್ಲಿ ರಂಗೋಲಿ ಅಭಿಯಾನಕ್ಕೆ ಚಾಲನೆ ನೀಡಿದೆ. ಜನರು ಎಲ್ಲೆಂದರಲ್ಲಿ ಕಸ ಹಾಕುವುದನ್ನು ನಿಲ್ಲಿಸಲು ಮಹಾನಗರ ಪಾಲಿಕೆಯು ವಿನೂತನ ಉಪಾಯವನ್ನು ಕಂಡುಕೊಂಡಿದೆ. ಸಾರ್ವಜನಿಕರು ಕಸ ಎಸೆಯುವ ಸ್ಥಳಗಳನ್ನು ಸ್ವಚ್ಛಗೊಳಿಸಿದ ಬಳಿಕ ಆ ಸ್ಥಳದಲ್ಲಿ ರಂಗೋಲಿ ಬಿಡಿಸಿ ಸ್ವಚ್ಛತೆಯ ಮಹತ್ವವನ್ನು ತಿಳಿಸಲಾಗುತ್ತಿದೆ. ನಾವು ಜನರು ಕಸ ಎಸೆಯುವ ಸ್ಥಳಗಳನ್ನು ಗುರುತಿಸುತ್ತೇವೆ. ಬೆಳಗಿನ ಸುತ್ತಿನ ಸಮಯದಲ್ಲಿ, ನಗರಪಾಲಿಕೆಯ ಸಿಬ್ಬಂದಿಗಳು ಕಸವನ್ನು ಸಂಗ್ರಹಿಸುತ್ತಾರೆ ಮತ್ತು ಆ ಪ್ರದೇಶವನ್ನು […]

ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತತೆ ಪದ ಅಳಿಸಲು ಸುಬ್ರಮಣಿಯನ್ ಸ್ವಾಮಿ ಅರ್ಜಿ: ಸೆ.23 ರಂದು ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: ಸಂವಿಧಾನದ ಪೀಠಿಕೆಯಿಂದ “ಸಮಾಜವಾದ” ಮತ್ತು “ಜಾತ್ಯತೀತತೆ” ಪದಗಳನ್ನು ಅಳಿಸಲು ಕೋರಿ ರಾಜ್ಯಸಭಾ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ರಿಟ್ ಅರ್ಜಿಯು ಶುಕ್ರವಾರದಂದು ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣನೆಗೆ ಬಂದಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 23 ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಪಟ್ಟಿ ಮಾಡಲಾದ ಇದೇ ರೀತಿಯ ಅರ್ಜಿಯೊಂದಿಗೆ ಡಾ.ಸ್ವಾಮಿ ಅವರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ವಕೀಲ ಸತ್ಯ ಸಬರ್ವಾಲ್ ಪ್ರಕರಣದ ಎರಡನೇ ಅರ್ಜಿದಾರರಾಗಿದ್ದಾರೆ. 1976 […]

ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಉಡುಪಿ: ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖೆ, 80ನೇ ಬಡಗಬೆಟ್ಟು ಹಾಗೂ ಹಿರೇಬೆಟ್ಟು ಗ್ರಾಮ ಪಂಚಾಯತ್, ಜಿಲ್ಲಾ ಅಂಧತ್ವ ನಿವಾರಣ ಘಟಕ, ಜಿಲ್ಲಾ ಪಂಚಾಯತ್, ಹೆರ್ಗಾ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಲಯನ್ಸ್ ಕ್ಲಬ್ ಉಡುಪಿ ಚೇತನಾ ಇದರ ಸಂಯುಕ್ತ ಆಶ್ರಯದಲ್ಲಿ ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಯಿತು. ಮಣಿಪಾಲ ಕೆಎಂಸಿ ಆಸ್ಪತ್ರೆಯ ನೇತ್ರ ವೈದ್ಯೆ ಡಾ. ಪ್ರಿಯಾಂಕಾ ಅಗರ್ವಾಲ್, ಹಿರೇಬೆಟ್ಟು ಗ್ರಾಪಂ ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಲಯನ್ಸ್ […]

ಪುಣ್ಯಕೋಟಿ ದತ್ತು ಸ್ವೀಕಾರ ಯೋಜನೆಗೆ ನಟ ಕಿಚ್ಚ ಸುದೀಪ್ ರಾಯಭಾರಿ

ಬೆಂಗಳೂರು: ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ, ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ಸರ್ಕಾರದ ಮಹತ್ವಾಕಾಂಕ್ಷೆಯ ಪುಣ್ಯಕೋಟಿ ದತ್ತು ಯೋಜನೆಗೆ ಸುಪ್ರಸಿದ್ಧ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ. “ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ – ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ “ಪುಣ್ಯಕೋಟಿ ಯೋಜನೆ”ಯ ರಾಯಭಾರಿಯಾದ ಸುಪ್ರಸಿದ್ಧ ನಟ, ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ […]