ಸ್ವದೇಶೀ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಕೊಚ್ಚಿ: ಕೊಚ್ಚಿಯಲ್ಲಿ ಸ್ವದೇಶೀ ನಿರ್ಮಿತ ವಿಮಾನವಾಹಕ ಐ.ಎನ್.ಎಸ್ ವಿಕ್ರಾಂತ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರವು ಶ್ರಮಿಸುತ್ತಿದೆ ಎಂಬುದಕ್ಕೆ ಐಎನ್‌ಎಸ್ ವಿಕ್ರಾಂತ್ ಉದಾಹರಣೆಯಾಗಿದೆ ಎಂದರು. ಐ.ಎನ್.ಎಸ್ ವಿಕ್ರಾಂತ್ ಕಾರ್ಯಾರಂಭವು ರಕ್ಷಣಾ ವಲಯದಲ್ಲಿ ಆತ್ಮನಿರ್ಭಾರತದತ್ತ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ದೇಶವು ಈಗ ವಿಮಾನವಾಹಕ ನೌಕೆಯನ್ನು ವಿನ್ಯಾಸಗೊಳಿಸುವ ಮತ್ತು ನಿರ್ಮಿಸುವ ಸಾಮರ್ಥ್ಯವನ್ನು ಹೊಂದಿರುವ ಬೆರಳೆಣಿಕೆಯ ರಾಷ್ಟ್ರಗಳನ್ನು ಸೇರಿಕೊಂಡಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಹೊಸ ಧ್ವಜವನ್ನು ಅನಾವರಣಗೊಳಿಸಿದರು. ಛತ್ರಪತಿ […]

ಕೇರಳದ ಪಾಲಕ್ಕಾಡಿನಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಸಂಭ್ರಮದ ಗಣೇಶೋತ್ಸವ

ಪಾಲಕ್ಕಾಡ್: ತಮಿಳುನಾಡು ಬಿಜೆಪಿ ನಾಯಕ, ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಕೇರಳದ ಪಾಲಕ್ಕಾಡಿನಲ್ಲಿ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಗಿದೆ. ಪಾಲಕ್ಕಾಡಿನ ಜಿಲ್ಲಾ ಗಣೇಶೋತ್ಸವ ಸಮಿತಿಯು ವಿನಾಯಕ ಚತುರ್ಥಿ ಹಬ್ಬವನ್ನು ಆಯೋಜಿಸಿತ್ತು. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ” ಪಾಲಕಾಡ್ ಜಿಲ್ಲಾ ಗಣೇಶೋತ್ಸವ ಸಮಿತಿಯು ಆಯೋಜಿಸಿದ್ದ ವಿನಾಯಕ ಚತುರ್ಥಿಯನ್ನು ಆಚರಿಸಲು ಪಾಲಕಾಡಿನಲ್ಲಿ ಸಾವಿರಾರು ಜನರು ಸೇರುವುದನ್ನು ತಡೆಯಲು ಭಾರೀ ಮಳೆಯಿಂದಾಗಲೀ ಅಥವಾ ಕಮ್ಯುನಿಸ್ಟ್ ಆಡಳಿತದಿಂದ ಸಂಘಟಿತ ವಿದ್ಯುತ್ ಕಡಿತದಿಂದಾಗಲೀ ಸಾಧ್ಯವಾಗಲಿಲ್ಲ” ಎಂದಿದ್ದಾರೆ. “ಬಿಜೆಪಿ ಫಾರ್ […]

ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ ಬಂಧನ

ಚಿತ್ರದುರ್ಗ: ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ನಿನ್ನೆ ರಾತ್ರಿ ಬಂಧಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ 6 ದಿನಗಳ ನಂತರ ಶಿವಮೂರ್ತಿ ಅವರನ್ನು ಬಂಧಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ತಮ್ಮ ಮಠದಿಂದ ನಡೆಸಲ್ಪಡುವ ಹಾಸ್ಟೆಲ್‌ನಲ್ಲಿ ಇಬ್ಬರು ಅಪ್ರಾಪ್ತ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಇವರ ಮೇಲಿದೆ. ಶಿವಮೂರ್ತಿಯವರನ್ನು ಬಂಧಿಸುವ […]

ಸೆ.3 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ:ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅವಿಭಜಿತ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 3 ರಂದು ಬೆಳಗ್ಗೆ 9.30 ಕ್ಕೆ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ […]

ಸೆಪ್ಟಂಬರ್ 4 ಮತ್ತು 18ರಂದು ಆಧಾರ್-ಎಪಿಕ್ ಜೋಡಣೆ ನೋಂದಣಿ ದಿನ

ಉಡುಪಿ: ಅರ್ಹ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಲು ಸೆಪ್ಟಂಬರ್ 4 ಮತ್ತು 18 ನ್ನು ವಿಶೇಷ ನೋಂದಣಿ ದಿನಗಳನ್ನಾಗಿ ಆಯೋಜಿಸಲಾಗಿದ್ದು, ಈ ದಿನಗಳಂದು ಜಿಲ್ಲೆಯ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳಲ್ಲಿರುವ ಬಿ.ಎಲ್.ಓ ಅಧಿಕಾರಿಗಳನ್ನು ಸಂಪರ್ಕಿಸಿ, ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.