ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಬ್ಯಾಟರಿ ಚಾಲಿತ/ ಇತರೆ ದ್ವಿಚಕ್ರ ವಾಹನ ಯೋಜನೆ, ಪೌರಕಾರ್ಮಿಕ/ ಸಪಾಯಿ ಕರ್ಮಚಾರಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣಾ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]

ಪದ್ಮ ಪ್ರಶಸ್ತಿ 2023ರ ನಾಮನಿರ್ದೇಶನ: ಸೆಪ್ಟೆಂಬರ್ 15 ರವರೆಗೆ ಅವಕಾಶ

ನವದೆಹಲಿ: ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳಿಗಾಗಿ ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದೆ ನೀಡಲಾಗುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿರುವ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳಿಗೆ ನಾಮನಿರ್ದೇಶನ ಸಲ್ಲಿಸುವ ಅವಕಾಶವನ್ನು ಈ ತಿಂಗಳ 15 ರವರೆಗೆ ತೆರೆದಿಡಲಾಗಿರುತ್ತದೆ. ಪದ್ಮ ಪ್ರಶಸ್ತಿ- 2023ರ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು […]

ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಮೀನುಗಾರಿಕೆ ಬೋಟಿನಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡು ಮೂಲದ ರವಿ (43) ಎಂಬ ವ್ಯಕ್ತಿಯು ಆಗಸ್ಟ್ 24 ರಂದು ರಾತ್ರಿ 1 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ:9480805447, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520329, ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ: ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ : “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್” ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬಂಜಾರು ಮಲೆಯ ತುಳುನಾಡಿನ ಮೂಲ ಜನಾಂಗದ ಆದಿವಾಸಿಗಳು ವಾಸಿಸುವಂತಹ ಪ್ರದೇಶದಿಂದ ಚಾಲನೆ ನೀಡಲಾಯಿತು. ಸೆಪ್ಟೆಂಬರ್ 1ರಂದು ಪ್ರಾರಂಭವಾದ ಈ ಅಭಿಯಾನ ಗುರುವಾರದಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದ್ದು ಸುಮಾರು 1 ಲಕ್ಷಕ್ಕೂ ಮೀರಿದ ಪೋಸ್ಟ್ ಕಾರ್ಡ್ ಗಳನ್ನು ತುಳು ಭಾಷೆಯ ಮಾನ್ಯತೆಗಾಗಿ ದೇಶದ ಪ್ರಧಾನಿಯವರಿಗೆ ಕಳುಹಿಸುವ ಗುರಿಯನ್ನು ಹೊಂದಿದೆ. ಈ ಅಭಿಯಾನಕ್ಕೆ ಎಲ್ಲಾ ಸಂಘ ಸಂಸ್ಥೆಗಳ ಬೆಂಬಲವನ್ನು […]

350 ವರ್ಷಗಳ ಇತಿಹಾಸ ಹೊಂದಿರುವ ಮಹಾಗಣಪತಿಯ ಅತಿ ವಿಶಿಷ್ಟ ಆರಾಧನೆ

ಉಡುಪಿ: ಇಲ್ಲಿನ ದಿನಪತ್ರಿಕೆ ವಿತರಕ ಮಲ್ಪೆ ಗೋಪಾಲ್ ಕೃಷ್ಣ ಭಂಡಾರ್ಕಾರ್ ನೇತೃತ್ವದಲ್ಲಿ ಕಿದಿಯೂರು ಭಂಡಾರ್ಕಾರ್ ಟ್ರಸ್ಟ್ ವತಿಯಿಂದ 350 ವರ್ಷಗಳ ಇತಿಹಾಸ ಹೊಂದಿರುವ ಮಹಾಗಣಪತಿಯ ಆರಾಧನೆಯು ವಿಶಿಷ್ಟವಾಗಿದೆ. ಗಣಪತಿಯ ಮೂರ್ತಿಯನ್ನು ಪ್ರತಿವರ್ಷವೂ ಮನೆಯವರೇ ತಯಾರಿಸುತ್ತಾರೆ. ಟ್ರಸ್ಟಿನ 150 ಕ್ಕೂ ಹೆಚ್ಚಿನ ಸದಸ್ಯರು ತಯಾರು ಮಾಡಿದ 5 ಅಡಿ ಎತ್ತರದ ಮೂರ್ತಿ ಕಣ್ಮನ ಸೆಳೆಯುತ್ತದೆ. ಗಣೇಶೋತ್ಸವ ಸಂದರ್ಭದಲ್ಲಿ 5 ದಿನ ಆಚರಣೆ ನಡೆಯುತ್ತದೆ.ಇಲ್ಲಿ ಗಣಪತಿಗೆ ನೀಡಲಾಗುವ ಸೇವೆಗಳಲ್ಲಿ ಮೂಡುಗಣಪತಿ, ದೀಪಾರಾಧನೆ, ರಂಗಪೂಜೆ, ಹೂವಿನಪೂಜೆ, ದಿನ ನಿತ್ಯ ವಿವಿಧ ಭಜನಾ […]