ಮಾನವ ಶ್ರಮದಿಂದ ಮರಳು ಬ್ಲಾಕ್‍ ವಿಲೇವಾರಿಗೆ ಪೂರಕ ದಾಖಲೆ ಸಲ್ಲಿಸಲು ಸೆಪ್ಟಂಬರ್ 12 ಕೊನೆ ದಿನ

ಉಡುಪಿ: ಟೆಂಡರ್ ಕಂ-ಹರಾಜು ಮೂಲಕ ಜಿಲ್ಲೆಯಲ್ಲಿ ಮಾನವ ಶ್ರಮದಿಂದ ಮರಳು ಬ್ಲಾಕ್‍ಗಳನ್ನು ವಿಲೇವಾರಿ ಮಾಡುವ ಸಂಬಂಧ ಜರುಗಿದ, ಜಿಲ್ಲಾ ಮರಳು ಉಸ್ತುವಾರಿ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾದಂತೆ, ಈಗಾಗಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾದ ಸಂಭವನೀಯ ಪಟ್ಟಿಯಲ್ಲಿರುವ ತಾತ್ಕಾಲಿಕ ಪರವಾನಿಗೆದಾರರು/ಪರವಾನಿಗೆದಾರರು ಉಡುಪಿ ಜಿಲ್ಲೆಯಲ್ಲಿ ಒಂದು ವರ್ಷದಿಂದ ವಾಸ್ತವ್ಯ ಹೊಂದಿರುವ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರಿಂದ ವಾಸ ದೃಢೀಕರಣ ಪತ್ರವನ್ನು ಪಡೆದು ಹಾಗೂ ಸಾಂಪ್ರಾದಾಯಿಕವಾಗಿ ಮರಳು ತೆರವುಗೊಳಿಸಿರುವ ಬಗ್ಗೆ ಹೊಂದಿರುವ ದಾಖಲಾತಿ/ಪರವಾನಿಗೆ […]

ಆದ್ಯತೆಯ ಮೇರೆಗೆ ಎಂಡೋ ಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಬಗೆಹರಿಸಿ: ಸಚಿವ ಅಂಗಾರ

ಉಡುಪಿ: ಜಿಲ್ಲೆಯಲ್ಲಿನ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುಧಾರಣೆ ಮತ್ತು ಪುರ್ನವಸತಿಗೆ ಸಂಬಧಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾರ್ಚ್ 2019 ರಿಂದ ಇದುವರೆಗೆ ಹೊಸದಾಗಿ ಗುರುತಿಸಲಾಗಿರುವ 110 ಮಂದಿ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಅನುಮೋದನೆ ನೀಡಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಸಚಿವರು, […]

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಶಿಕ್ಷಕರಿಗೆ ಪ್ರಶಸ್ತಿ ಪದಾನ ಸಮಾರಂಭ

ಉಡುಪಿ: ಸೆ.4 ರಂದು ಮಧ್ಯಾಹ್ನ 2.30 ಕ್ಕೆ ರಜತಾದ್ರಿಯ ವಾಜಪೇಯಿ ಸಂಭಾಂಗಣದಲ್ಲಿ 2022-23 ನೇ ಸಾಲಿನ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಒಟ್ಟು 17 ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಲಯವಾರು ಪ್ರಶಸ್ತಿ ವಿಜೇತರು: ಕಿರಿಯ ಪ್ರಾಥಮಿಕ ವಿಭಾಗ ಶ್ರೀ ರಾಮ ಶೆಟ್ಟಿ, ಮು.ಶಿ ವಿದ್ಯಾಮಂದಿರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಬ್ರಹ್ಮಾವರ ಶೀಮತಿ ಸುಜಾತಾ ಕೆ, ಸ.ಶಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆಳಸುಂಕ, […]

ಬ್ರಹ್ಮಾವರ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

ಬ್ರಹ್ಮಾವರ: ಕುಕ್ಕೆಹಳ್ಳಿಯ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 4 ಭಾನುವಾರದಂದು ಬ್ರಹ್ಮಾವರ ಮುಖ್ಯರಸ್ತೆಯ ಮಧುವನ್ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, 21 ವರ್ಷಗಳ ಹಿಂದೆ ಸ್ಥಾಪನೆಯಾದ ಸಂಸ್ಥೆ ಇಂದು ಪ್ರೌಢಾವಸ್ಥೆಗೆ ತಲುಪಿದ್ದು, ಸಂಸ್ಥೆಯ ಬೆಳವಣಿಗೆಗೆ ಅಭಿನಂದನೆ. ಸಂಸ್ಥೆಯು ಕೇವಲ ಲಾಭ ಗಳಿಕೆಯ ಉದ್ದೇಶ ಮಾತ್ರದಿಂದಲ್ಲದೆ ಸಮಾಜ ಸೇವೆಯ ವಿವಿಧ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದೆ. ಸಂಸ್ಥೆಯಲ್ಲಿ ಪ್ರಾಮಾಣಿಕ […]