ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬಲ್ಲಾಡಿ ಚಂದ್ರಶೇಖರ ಭಟ್ ಆಯ್ಕೆ
ಹೆಬ್ರಿ : ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಣ, ಸಾಹಿತ್ಯ, ಸಂಘಟನೆ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಗಣಿಸಿ ಕೊಡಮಾಡುವ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022 ಈ ಬಾರಿ ಮುದ್ರಾಡಿ ಪ್ರೌಢ ಶಾಲೆಯ ಆಂಗ್ಲಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಲಭಿಸಿದೆ. ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಸೆ.5 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ […]
ದಿಯಾ ಜ್ಯೋತಿ ಫೌಂಡೇಶನ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ
ಮಣಿಪಾಲ: ದಿಯಾ ಜ್ಯೋತಿ ಫೌಂಡೇಶನ್ ಈಶ್ವರನಗರ ಮತ್ತು ನೇತ್ರಸಂಗಮ ಐ ಕೇರ್ ಆಂಡ್ ಲೇಸರ್ ಸೆಂಟರ್ ಮಣಿಪಾಲ ಹಾಗೂ ಐ ನೀಡ್ಸ್ ಒಪ್ಟಿಕಲ್ಸ್, ಮಣಿಪಾಲ ಇವರ ಜಂಟಿ ಸಹಯೋಗದೊಂದಿಗೆ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಠಾರದಲ್ಲಿ ಸೆ. 4 ರವಿವಾರದಂದು ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಸಮಾಜದ ಹಿರಿಯರಾದ ನಿವೃತ್ತ ಅಧ್ಯಾಪಕ ಹಾಗೂ ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆಯವರು ಜ್ಯೋತಿ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಗೆ ಹಾಗೂ ಕಾರ್ಯಕ್ರಮಕ್ಕೆ […]
ಭಾನುವಾರ ಬೆಂಗಳೂರಿನಲ್ಲಿ ಸುರಿದ ಮಳೆಗೆ ಮುಳುಗಿತು ಬೆಳ್ಳಂದೂರು
ಬೆಂಗಳೂರು: ರಾಜ್ಯದೆಲ್ಲಡೆ ಈ ಬಾರಿ ಸುರಿದ ಭಾರೀ ಮಳೆಯು ರಸ್ತೆ ಕಾಮಗಾರಿಗಳ ಅವೈಜ್ಞಾನಿಕತೆ, ಕಳಪೆ ಕಾಮಗಾರಿ ಮತ್ತು ತುಂಬಿ ತುಳುಕುತ್ತಿರುವ ಭ್ರಷ್ಟಾಚಾರಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ರಾಜ್ಯದೆಲ್ಲೆಡೆ ಸುರಿದ ಮಳೆಯ ಪರಿಣಾಮ ರಸ್ತೆಗಳಲ್ಲೆಲ್ಲಾ ನೀರು ನಿಂತು ಹೆದ್ದಾರಿ, ಮನೆ ಮಠವೆನ್ನದೆ ಎಲ್ಲವೂ ನೀರಿನಲ್ಲಿ ಮುಳುಗಿ ನಗರಗಳೆಲ್ಲಾ ಕೆರಗಳಾಗಿ ಪರಿವರ್ತಿತವಾದ ದೃಶ್ಯ ಎಲ್ಲೆಲ್ಲೂ ಕಂಡುಬಂದಿದೆ. ಮಂಗಳೂರು-ಮೈಸೂರು-ಬೆಂಗಳೂರೆನ್ನುವ ಭೇದವಿಲ್ಲದೆ ಎಲ್ಲಾ ಕಡೆಯೂ ಒಂದೇ ತೆರನಾದ ದೃಶ್ಯಗಳು ಕಾಣಸಿಗುತ್ತವೆ. ರಸ್ತೆಗಳನ್ನು ನಿರ್ಮಾಣ ಮಾಡುವಾಗ ಸಮರ್ಪಕ ಒಳಚರಂಡಿ ವ್ಯವಸ್ಥೆಯನ್ನು ಮಾಡದಿರುವುದು, ಇರುವ ಚರಂಡಿಗಳನ್ನು ಸ್ವಚ್ಛಗೊಳಿಸದಿರುವುದು, […]
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಣ್ಣಪಳ್ಳದಲ್ಲಿ ಕ್ರಾಫ್ಟ್ ವಿಲೇಜ್ ಮಾಡುವ ಚಿಂತನೆ: ಜಿಲ್ಲಾಧಿಕಾರಿ
ಉಡುಪಿ: ಮಣಿಪಾಲದ ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಲ್ಲಿ ಕ್ರಾಫ್ಟ್ ವಿಲೇಜ್ ಮಾಡುವ ಬಗ್ಗೆ ಚಿಂತನೆ ಮತ್ತು ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ, ಆಹಾರ ಮೇಳ ಮತ್ತು ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ ದೆಹಲಿ ಹಾಟ್ ಮಾದರಿಯಲ್ಲಿ ಕ್ರಾಫ್ಟ್ ವಿಲೇಜ್ ಮಾಡಲು […]
ತ್ರೋಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ದಸರಾ ಕ್ರೀಡಾಕೂಟ-2022 ರ ತ್ರೋಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರ ತಂಡಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.