ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ ವತಿಯಿಂದ ಸಾಧಕ ಶಿಕ್ಷಕರಿಗೆ ಸನ್ಮಾನ
ಉಡುಪಿ:ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು. ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ) , ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ) , ಪ್ರೊ. ನಾರಾಯಣ ಎಂ. ಹೆಗಡೆ […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಗುರು ನಮನ ಕಾರ್ಯಕ್ರಮ
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ- ಗುರು ನಮನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಯಾಗುವಂತೆ ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರದ ಸಹ ಶಿಕ್ಷಕಿ ಶ್ರೀಮತಿ ವಸಂತಿ ಭಟ್ ಶಿಕ್ಷಕ-ಶಿಕ್ಷಣ-ವಿದ್ಯಾರ್ಥಿ ಈ ಕುರಿತು ಮಾತನಾಡಿದರು. ಪ್ರಗತಿ […]
ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ: ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ
ಕುಂದಾಪುರ: ಗುರು ಪರಂಪರೆಯಲ್ಲಿ ಗುರುವು ಒಳ್ಳೆಯ ಶಿಷ್ಯನನ್ನು ಪಡೆದಾಗ ಮಾತ್ರ ಶಿಕ್ಷಕ ಧನ್ಯನಾಗುತ್ತಾನೆ. ಸಮಾಜದಲ್ಲಿ ಗುರುವಿಗೆ ಮನ್ನಣೆಯಿದ್ದು, ಶಿಕ್ಷಕರು ತಾಯಿಗಿಂತ ಶ್ರೇಷ್ಠರು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ ಎಂದು ಮಂಗಳೂರಿನ ರಾಮಕೃಷ್ಣ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಸೆ. 5 ರಂದು ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜ್ ಮತ್ತು ಸ್ಕೂಲ್ನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಸರ್ವಪಳ್ಳಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ […]
ಪ್ರಾಥಮಿಕ ಶಾಲಾ ಶಿಕ್ಷಕರು ನೆನಪಿನಲ್ಲಿ ಉಳಿಯುವ ಅತ್ಯಮೂಲ್ಯ ವ್ಯಕ್ತಿಗಳು: ಡಾ. ಉದಯ್ ಕುಮಾರ್ ಶೆಟ್ಟಿ
ಕಾರ್ಕಳ: ಶಿಕ್ಷಣ ಕೇವಲ ಜ್ಞಾನ ನೀಡುವ ಉದ್ದೇಶವನ್ನು ಹೊಂದಿರದೆ ವಿದ್ಯಾರ್ಥಿಗಳಲ್ಲಿ ಮೌಲ್ಯವರ್ಧನೆ ಮಾಡುವ ಗುರಿಯನ್ನೂ ಹೊಂದಿದೆ. ಈ ಗುರಿಯನ್ನು ಸಾಕಾರಗೊಳಿಸಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ನಮ್ಮ ಮನದಾಳದಲ್ಲಿ ಸದಾ ಕಾಲ ನೆಲೆಯೂರುವ ಅತ್ಯಮೂಲ್ಯ ವ್ಯಕ್ತಿಗಳು. ಈ ಅಪೂರ್ವ ಕಾರ್ಯಕ್ರಮದಲ್ಲಿ ಭಾಗಿಯಾದ ಸಂತೋಷ ನನಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು […]
ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟಿನಲ್ಲಿ ಶಿಕ್ಷಕರ ದಿನಾಚರಣೆ
ಮಣಿಪಾಲ: ಸೋಮವಾರದಂದು ಮಣಿಪಾಲದ ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಚಂದ್ರಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ ನಮ್ಮ ಬದುಕಿನಲ್ಲಿ ಬಂದ ಪ್ರತಿಯೊಂದು ಶಿಕ್ಷಕರನ್ನು ಸ್ಮರಿಸಬೇಕಾದದ್ದು ನಮ್ಮ ಆದ್ಯ ಕರ್ತವ್ಯ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದುಡಿದರೆ ಯಶಸ್ಸು ಖಂಡಿತ ಸಾಧ್ಯ ಎಂದರು. ಮುಖ್ಯ ಅತಿಥಿಯಾಗಿ ಡಾ. ವಿಶ್ವನಾಥ್ ಕಾಮತ್ರವರು ಮಾತಾನಾಡಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಉದಾಹರಣೆ ನೀಡಿ, ಅವರು ಕ್ಷಿಪಣಿ ಜನಕ, […]