ಮಲ್ಪೆ: ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಉಳಿಯಾರ ಗೋಳಿ ಗ್ರಾಮದ ಕೋತಲಕಟ್ಟೆ ನಿವಾಸಿ ವೆಂಕಟೇಶ್ ಪುತ್ರನ್ (40) ಎಂಬ ವ್ಯಕ್ತಿಯು ಆಗಸ್ಟ್ 30 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ […]

ಮಾಹೆ: ಸಾಮಾಜಿಕ ಬದಲಾವಣೆಯಲ್ಲಿ ಯುವಕರ ಪಾತ್ರ ಕುರಿತು 3 ನೇ ರಾಷ್ಟ್ರೀಯ ಸಮಾವೇಶ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಮಾಜಿಕ ಬದಲಾವಣೆಯಲ್ಲಿ ಯುವಕರ ಪಾತ್ರ ಕುರಿತು ತನ್ನ 3 ನೇ ರಾಷ್ಟ್ರೀಯ ಸಮಾವೇಶ ವನ್ನು ಸೆಪ್ಟೆಂಬರ್ 17 ರಂದು ಮಣಿಪಾಲದ ಡಾ ಟಿಎಂಎ ಪೈ ಸಭಾಂಗಣದಲ್ಲಿ ಆಯೋಜಿಸಲಿದೆ. ಯುವಜನರಲ್ಲಿ ಕೊಡುವಿಕೆಯ ಪರಿಕಲ್ಪನೆಯನ್ನು ಉತ್ತೇಜಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವಲ್ಲಿ ಸಂವೇದನಾಶೀಲರಾಗಲು ಸಹಾಯ ಮಾಡುವುದು ಈ ಸಮ್ಮೇಳನದ ಉದ್ದೇಶವಾಗಿದೆ. ಮಾಹೆ ಮತ್ತು ಮಾಹೆಯೇತರ ಸಂಸ್ಥೆಗಳಿಂದ ಸುಮಾರು 1000 ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಮಣಿಪಾಲ್ ಗ್ಲೋಬಲ್ […]

ಕನ್ನರಪಾಡಿ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆ

ಉಡುಪಿ: ಕಿನ್ನಿಮೂಲ್ಕಿ ಕನ್ನರಪಾಡಿ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆ ಇತ್ತೀಚಿಗೆ ಶ್ರೀದೇವಿ ಸಭಾ ಭವನದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ರಮೇಶ ರಾವ್ ಬೀಡು ಹಾಗೂ ವಾಯುಪಡೆಯ ನಿವೃತ್ತ ಸ್ಕ್ವಾಡ್ರನ್ ಲೀಡರ್ ಶಿವರಾಮ ಮಂಜ ಇವರು ಭಾಗವಹಿಸಿದ್ದರು.   ಈ ಬಾರಿಯ ಎಸ್ ಎಸ್ ಎಲ್ ಸಿ , ಮತ್ತು ಪಿ ಯು ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧನೆ ಮಾಡಿ, ವಿವಿ ಪ್ರಶಸ್ತಿ ಪಡೆದ ಸಂಘದ ಸದಸ್ಯೆಯರಾದ ಉಷಾ ಚಡಗ ಮತ್ತು […]

ನವೆಂಬರ್ 12 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್‌

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ನವೆಂಬರ್ 12 ರಂದು ಇ-ಲೋಕ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ […]

ಅಫಘಾತ ನಡೆಸಿ ಪಾದಚಾರಿಯ ಮರಣಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡ ಹೋಗುತ್ತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಸೆಪ್ಟಂಬರ್ 4 ರಂದು ಸಂಜೆ 4.45 ರ ಸುಮಾರಿಗೆ ಉಡುಪಿ ತಾಲೂಕು ಉದ್ಯಾವರ ಕೊಪ್ಲದ ನಿವಾಸಿ ದರ್ಶನ್ ಎಂಬಾತನು ಮಣಿಪಾಲ-ಉಡುಪಿ ರಾ.ಹೆ ಏಕಮುಖ ಸಂಚಾರ ರಸ್ತೆಯಲ್ಲಿ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿಕೊಂಡು ಬಂದು ಶಿವಳ್ಳಿ ಗ್ರಾಮದ ಎಂ.ಜಿ.ಎಂ ಕಾಲೇಜಿನ ಡಾ.ಟಿ.ಎಂ.ಎ. ಪೈ […]