ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
ಬ್ರಹ್ಮಾವರ: ಡಾ. ಸರ್ವಪಳ್ಳಿ ರಾಧಾಕೃಷ್ಣನ್ ರವರು ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ ಎನ್ನುತ್ತಿದ್ದರು. ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ಸೋಮವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯರವರು ಉಪನ್ಯಾಸಕರಿಗೆ ಶುಭಾಶಯ ಕೋರಿದರು. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಶ್ರೀಮತಿ ಡಾ. ಸೀಮಾ ಭಟ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕು.ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.
ವಾಹನಗಳ ಹಿಂಬದಿ ಸೀಟಿನಲ್ಲಿರುವ ಸವಾರರು ಸೀಟ್ ಬೆಲ್ಟ್ ಧರಿಸದಿದ್ದಲ್ಲಿ ದಂಡ: ಗಡ್ಕರಿ
ನವದೆಹಲಿ: ಕಾರು ಮತ್ತು ಎಸ್‌ಯುವಿಗಳ ಹಿಂಬದಿ ಸೀಟಿನಲ್ಲಿರುವ ಸವಾರರು ಸೀಟ್ ಬೆಲ್ಟ್ ಧರಿಸದಿದ್ದಲ್ಲಿ ಅವರಿಗೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಘೋಷಿಸಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಈ ಸಂಬಂಧ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು. ಜನರಲ್ಲಿ ಸೀಟ್ ಬೆಲ್ಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಕ್ರಿಕೆಟಿಗರು ಮತ್ತು ಬಾಲಿವುಡ್ ನಟರನ್ನು ಬಳಸಲಾಗುವುದು ಎಂದು ಅವರು ದೆಹಲಿಯ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಭಾನುವಾರ ಕಾರು ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಚಿವರಿಂದ […]
ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ: ಪ್ರಧಾನಿಯಾದಿಯಾಗಿ ಗಣ್ಯರಿಂದ ಸಂತಾಪ
ಬೆಂಗಳೂರು: ಬಿಜೆಪಿ ನಾಯಕ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 61 ವರ್ಷದ ಕತ್ತಿ ಅವರನ್ನು ಬೆಂಗಳೂರಿನ ಡಾಲರ್ ಕಾಲೋನಿ ನಿವಾಸದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕತ್ತಿಯವರ ಪಾರ್ಥೀವ ಶರೀರವನ್ನು ಹುಕ್ಕೇರಿಯ ವಿಶ್ವರಾಜ್ ಶುಗರ್ಸ್ ಆವರಣದಲ್ಲಿ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಇಡಲಾಗುವುದು. ಹುಕ್ಕೇರಿಯ ಬೆಲ್ಲದಬಾಗೇವಾಡಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಸಚಿವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿಯ ಹುಕ್ಕೇರಿ […]
ಮುದ್ರಾಡಿ ಪ್ರೌಢಶಾಲಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಹೆಬ್ರಿ: ಶಿಕ್ಷಣವೆಂದರೆ ಅರಿವು ಮತ್ತು ಜ್ಞಾನೋದಯದ ಮೂಲಕ ಸಾಗುವ ನಿರಂತರ ಪಯಣ. ಒಬ್ಬ ಶಿಕ್ಷಕನ ಜೀವನವು ಅನೇಕ ದೀಪಗಳನ್ನು ಬೆಳಗಿಸಬಲ್ಲದು. ಶಿಕ್ಷಣವೆಂಬುದು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತವಾಗದೆ ಬದುಕು ರೂಪಿಸುವಂತಿರಬೇಕು ಎಂದು ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಹೇಳಿದರು. ಅವರು ಹೆಬ್ರಿಯ ಚಾಣಕ್ಯ ಎಜುಕೇಶನ್&ಕಲ್ಚರಲ್ ಅಕಾಡೆಮಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಕೊಡಮಾಡಿದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು. ಉದ್ಯಮಿ ಬಿ. ಹರ್ಷ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಚಾಣಕ್ಯ ಸಂಸ್ಥೆ […]