ಪೆರ್ಡೂರು ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡಕ ಆಯ್ಕೆ
ಕುಲಾಲ ಸಂಘ ರಿ. ಪೆರ್ಡೂರು ಇದರ 2022-23ನೇ ಸಾಲಿನ ಅವಧಿಗೆ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡಕ ಅವರು ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ರಾಮ ಕುಲಾಲ್ ಪಕ್ಕಾಲು ಮತ್ತು ಐತು ಕುಲಾಲ್ ಕನ್ಯಾನ, ಉಪಾಧ್ಯಕ್ಷರಾಗಿ ಕಾಳು ಕುಲಾಲ್ ಪೆರ್ಡೂರು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ಹಂದಿಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಕುಲಾಲ್ ಪಕ್ಕಾಲು, ಕೋಶಾಧಿಕಾರಿಯಾಗಿ ಯೋಗೀಶ್ ಕುಲಾಲ್ ಬೋರುಗುಡ್ಡೆ, ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ ಕುಲಾಲ್ ಕುಂಟಲ್ ಕಟ್ಟೆ ಹಾಗೂ ಸಹ ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕುಕ್ಕೆಹಳ್ಳಿ […]
ಬನ್ನಂಜೆ: ಸೆಪ್ಟೆಂಬರ್ 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಸೆಪ್ಟಂಬರ್ 10 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. […]
ಇದು ಬ್ರಿಟಿಷರ ಕಾಲದ ರಾಜಪಥ ಅಲ್ಲ: ಇನ್ನು ಮುಂದೆ ಇದು ಆತ್ಮನಿರ್ಭರ ಭಾರತದ ಕರ್ತವ್ಯ ಪಥ
ನವದೆಹಲಿ: ಬ್ರಿಟಿಷರ ಕಾಲದ ಗುಲಾಮಗಿರಿಯ ಎಲ್ಲಾ ಸಂಕೇತಗಳನ್ನು ನಿರ್ಮೂಲನೆ ಮಾಡುವ ಪಣ ತೊಟ್ಟಿರುವ ಪ್ರಧಾನಿ ಮೋದಿ, ಐ.ಎನ್. ಎಸ್ ವಿಕ್ರಾಂತ್ ನಲ್ಲಿರುವ ಬ್ರಿಟಿಷರ ಕಾಲದ ನೌಕಾ ಧ್ವಜವನ್ನು ಬದಿಗೊತ್ತಿ ಛತ್ರಪತಿ ಶಿವಾಜಿ ಮಹಾರಾಜರ ನೌಕಾ ಧ್ವಜದಿಂದ ಪ್ರೇರಿತ ಧ್ವಜವನ್ನು ಅನಾವರಣಗೊಳಿಸಿದ ಬೆನ್ನೆಲ್ಲೇ, ದೆಹಲಿಯ ರಾಜಪಥದ ಹೆಸರನ್ನು ಬದಲಿಸಿ ಇನ್ನು ಮುಂದೆ ಅದನ್ನು ‘ಕರ್ತವ್ಯ ಪಥ’ವೆಂದು ಘೋಷಿಸಲು ಬೇಕಾದ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗೆ ಸೆಂಟ್ರಲ್ ವಿಸ್ಟಾದ ಕರ್ತವ್ಯ […]
ಕೇರಳ ಮಾದರಿ ಕರ್ನಾಟಕದಲ್ಲೂ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಿ: ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ
ಮಂಗಳೂರು: ಕರ್ನಾಟಕ ಸರಕಾರವು ಕೇರಳ ಸರಕಾರದ ಮಾದರಿಯಲ್ಲೇ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ ಮಾಡಿದೆ. ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪರಿಹಾರವಿಲ್ಲದೆ ರಬ್ಬರ್ ಮರಗಳನ್ನು ಕಡಿಯುವ ನಿರ್ಧಾರ ಮಾಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. […]
ಉಡುಪಿ: ಸೆ.11 ರಿಂದ ಹಾಡು ನೀ ಹಾಡು ರಿಯಾಲಿಟಿ ಶೋ ನ ಆಡಿಷನ್ ಪ್ರಾರಂಭ
ಉಡುಪಿ: ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅವಿಭಜಿತ ದ.ಕ ಜಿಲ್ಲೆಯ ಗಾನಕೋಗಿಲೆಗಳ ಪ್ರತಿಭೆ ಅನಾವರಣಗೊಳಿಸುವ ‘ಹಾಡು ನೀ ಹಾಡು’ ಸಂಗೀತ ರಿಯಾಲಿಟಿ ಶೋ ನ ಆಡಿಷನ್ ಸೆ.11 ರಿಂದ ಪ್ರಾರಂಭವಾಗಲಿದ್ದು, ಅಂದು ಬೆಳಿಗ್ಗೆ 8 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಾಗೂ ಕುಂದಾಪುರದ ಆರ್.ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಸೆ. 18 ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಶಾರದಾ ವಿದ್ಯಾಲಯ, ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿ ಎಸ್ […]