ಮಾದಕ ವಸ್ತು ಸೇವನೆ ಪ್ರಕರಣ: ಶಂಕಿತ ವ್ಯಕ್ತಿ ಪೋಲೀಸ್ ವಶಕ್ಕೆ

ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇವನೆ ಮಾಡಿಕೊಂಡು ಅಮಲಿನಲ್ಲಿದ್ದ ತಾಲೂಕಿನ ಮಹಮ್ಮದ್ ಶರೀಫ್ (25) ಎಂಬಾತನನ್ನು ಸೆ.8 ರಂದು ಸಂಜೆ 4:30 ಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಎ ಕಾಯ್ಕಿಣಿ ಮತ್ತು ಸಿಬ್ಬಂದಿಗಳು  ವಶಕ್ಕೆ ಪಡೆದುಕೊಂಡಿದ್ದು, ಸದ್ರಿ ವ್ಯಕ್ತಿಯು ನಿಷೇಧಿತ ಮಾದಕ ವಸ್ತುಗಳನ್ನು ಸೇವಿಸಿರುವ ಸಂಶಯವಿದ್ದ ಕಾರಣ ಆತನನ್ನು ಕಛೇರಿಗೆ ಕರೆತಂದು ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವೈದ್ಯಾಧಿಕಾರಿಯವರವರ ಮುಂದೆ […]

ಬೀದಿ ನಾಯಿ ಕಡಿದರೆ ಅದಕ್ಕೆ ಆಹಾರ ನೀಡುವವರು ವೆಚ್ಚವನ್ನು ಭರಿಸುವ ಜವಾಬ್ದಾರಿ ವಹಿಸಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಬೀದಿನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರದಂದು ಸರ್ವೋಚ್ಚ ನ್ಯಾಯಾಲಯವು ಸಮಸ್ಯೆಯ ಪರಿಹಾರಕ್ಕೆ ಕರೆ ನೀಡಿತು ಮತ್ತು ಯಾರಾದರೂ ಬೀದಿ ನಾಯಿಗಳಿಂದ ದಾಳಿಗೊಳಗಾದರೆ ಅವುಗಳಿಗೆ ಆಹಾರ ನೀಡುವವರಿಗೆ ಲಸಿಕೆ ಹಾಕುವ ಮತ್ತು ವೆಚ್ಚವನ್ನು ಭರಿಸುವ ಜವಾಬ್ದಾರಿಯನ್ನು ವಹಿಸಬಹುದು ಎಂದು ಸೂಚಿಸಿದೆ. ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜೆಕೆ ಮಹೇಶ್ವರಿ ಅವರ ಪೀಠವು ಬೀದಿನಾಯಿಗಳನ್ನು ಸೆರೆಹಿಡಿಯಲು ಮತ್ತು ಮಟ್ಟಹಾಕಲು ಅನುಮತಿ ನೀಡಿದ ಕೇರಳ ಹೈಕೋರ್ಟ್‌ನ 2015 ರ ತೀರ್ಪಿನ ವಿರುದ್ಧ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಇತರರು […]

ಮಂಜುನಾಥ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಗೆ ಎನ್.ಎ.ಬಿ.ಎಚ್ ಅಕ್ರೆಡಿಟೇಶನ್ ಸರ್ಟಿಫಿಕೇಟ್

ಉಡುಪಿ: ಬನ್ನಂಜೆ ರಾ.ಹೆ ಸನಿಹದಲ್ಲಿರುವ ವ್ಯವಹಾರ್ ಪ್ಲಾಜಾ ಕಟ್ಟಡದಲ್ಲಿ 15 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಂಜುನಾಥ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಗೆ ಎನ್.ಎ.ಬಿ.ಎಚ್ ಅಕ್ರೆಡಿಟೇಶನ್ ಸರ್ಟಿಫಿಕೇಟ್ ದೊರೆತಿದೆ. ಫೆಕೊ ಮತ್ತು ಮೆಳ್ಳೆಗಣ್ಣು ತಜ್ಞೆ ಡಾ.ಶಕಿಲಾ, ರೆಟಿನಾ ತಜ್ಞ ಡಾ. ಸಚಿನ್ ಕುಮಾರ್ ಅವರ ಸಮರ್ಥ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಆಸ್ಪತ್ರೆಯಲ್ಲಿ ರೋಗಿಗಳ ಸೇವೆಗೆ ಸದಾ ಲಭ್ಯರಿರುವ ಮತ್ತು ವಿಶೇಷ ಕಾಳಜಿ ವಹಿಸುವ ವೈದ್ಯರ ನೇತೃತ್ವವಿದೆ. ಆಸ್ಪತ್ರೆಯಲ್ಲಿ ವಿಶೇಷವಾಗಿ ಹೊಲಿಗೆ ರಹಿತ ಫೆಕೊ ಪೊರೆ ಶಸ್ತ್ರಚಿಕಿತ್ಸೆ, ರೆಟಿನ, ಲೇಸರ್ ಸೌಲಭ್ಯಗಳು, ಮೆಳ್ಳೆಗಣ್ಣು […]

ಭಾರತೀಯ ಆಹಾರ ನಿಗಮದಲ್ಲಿ ನಾನ್ ಎಕ್ಸಿಕ್ಯುಟಿವ್ ಹುದ್ದೆ ಖಾಲಿ

ಉಡುಪಿ: ರಾಷ್ಟ್ರದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಅತಿದೊಡ್ಡ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಒಂದಾದ ಭಾರತೀಯ ಆಹಾರ ನಿಗಮ (ಎಫ್‌ಸಿ.ಐ) ದಲ್ಲಿ ವಲಯವಾರು ಖಾಲಿ ಇರುವ ನಾನ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://fci.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸೆಪ್ಟಂಬರ್ 17 ರಂದು ಯೋಗಥಾನ್: 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ

ಉಡುಪಿ: ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು. ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಯೋಗಾಥಾನ್ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಈಗಾಗಲೇ ಯೋಗವನ್ನು ಶಾಲಾ ಮತ್ತು ಕಾಲೇಜು ಶಿಕ್ಷಣದಲ್ಲಿ ಪಠ್ಯವನ್ನಾಗಿ ಸೇರ್ಪಡೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ […]