ಗೃಹರಕ್ಷಕರ ಅಧಿಕಾರಿಗಳ ತರಬೇತಿ: ಶ್ರೀಪ್ರಸಾದ್ ಅವರಿಗೆ ಬೆಳ್ಳಿಪದಕ
ಉಡುಪಿ: ಆಗಸ್ಟ್ 1 ರಿಂದ 29 ರ ವರೆಗೆ ರವರೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಜಿಲ್ಲಾ ಗೃಹರಕ್ಷಕ ದಳದ ಕಾರ್ಕಳ ಘಟಕದ ಗೃಹರಕ್ಷಕ ಶ್ರೀಪ್ರಸಾದ್ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರನ್ನು ಜಿಲ್ಲಾ ಕಮಾಂಡೆಂಟ್ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ ಗೃಹರಕ್ಷಕ ದಳ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ.
ರಜತಾದ್ರಿ: ಸೆಪ್ಟಂಬರ್ 14 ರಂದು ಆಟೋರಿಕ್ಷಾ ದರ ಪರಿಷ್ಕರಣಾ ಸಭೆ
ಮಣಿಪಾಲ: ಜಿಲ್ಲೆಯ ಆಟೋರಿಕ್ಷಾ ದರ ಪರಿಷ್ಕರಣೆ ಮತ್ತು 2012 ಏಪ್ರಿಲ್ 21 ರ ಅಧಿಸೂಚನೆ ಮಾರ್ಪಾಡುಗೊಳಿಸುವ ಕುರಿತು ಸೆಪ್ಟಂಬರ್ 14 ರಂದು ಮಧ್ಯಾಹ್ನ 2.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆಟೋರಿಕ್ಷಾ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬಳಕೆದಾರರ ವೇದಿಕೆ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ಕೂಡಿದ ಎಲ್ಲಾ ಸಂಘ-ಸಂಸ್ಥೆ ಮತ್ತು ಸಾರ್ವಜನಿಕರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಗಳ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲ; ದೇಶ ವಿಭಜನೆಯ ಪ್ರಾಯಶ್ಚಿತ್ತ ಯಾತ್ರೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗ […]